ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲಿರಿ; ಬಿಎಸ್ ವೈ ವಿರುದ್ಧ ಸಿದ್ಧರಾಮಯ್ಯ ಗುಡುಗು

Share on facebook
Share on twitter
Share on linkedin
Share on whatsapp
Share on telegram
Share on email
Share on print
ಬೆಂಗಳೂರು(17/10/2020); ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲಿರಿ ಎಂದು ಮುಖ್ಯಮಂತ್ರಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಗುಡುಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗಬೇಕಿತ್ತು, ಆದರೆ ವಯಸ್ಸಾಗಿದೆ ಜೊತೆಗೆ ಕೊರೊನಾ ಸೋಂಕು ತೀವ್ರವಾಗಿದೆ ಅಂತ ನೆಪ ಹೇಳಿ ಹೋಗಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸಲಾಗದಷ್ಟು ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲೇ ಆರಾಮವಾಗಿರಲಿ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಬಡವರು, ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿ ಅಂತ ನಾನು ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಿಜೆಪಿ ಸರ್ಕಾರ ಮುಚ್ಚಲು ಹೊರಟಿದೆ. ದುಡ್ಡಿಲ್ಲ, ಕೊರೊನಾ ಇದೆ ಅಂತ ಜನರ ಎದುರು ಅಸಹಾಯಕತೆ ತೋರುವ ಬದಲು ಅಧಿಕಾರ ಬಿಟ್ಟು ತೊಲಗಲಿ. ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಎಂದು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಶಿರಾದಲ್ಲಿ ಬಿಜೆಪಿಯವರು ಸಾವಿರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿರುವುದು ಕೋವಿಡ್ ನಿಯಮಗಳಿಗೆ ವಿರುದ್ಧವಲ್ಲವೇ? ತಾವು ಜಾರಿಗೆ ತಂದಿರುವ ನಿಯಮಗಳನ್ನು ತಾವೇ ಧಿಕ್ಕರಿಸಿದ್ದಾರೆ, ಇನ್ನು ಬೇರೆಯವರಿಗೆ ಉಪದೇಶ ನೀಡಲು ಯಾವ ನೈತಿಕತೆ ಇದೆ? ಆರೋಗ್ಯ ಸಚಿವರು ಆಗಾಗ ತಮ್ಮ‌ ಪಕ್ಷದ ಸಭೆ ಸಮಾರಂಭಗಳನ್ನೂ ಗಮನಿಸಲಿ ಎಂದು ಸಿದ್ಧರಾಮಯ್ಯನವರು ಪ್ರಶ್ನಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು