ಆತ್ಮನಿರ್ಭರ್ ಭಾರತ್ 3.0: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಟಿ, ಮಹತ್ವದ ಅಂಶಗಳು ಉಲ್ಲೇಖ

nirmala sitharaman
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ (12-11-2020): ಆತ್ಮನಿರ್ಭರ್ 3.0 ಉತ್ತೇಜಕ ಕ್ರಮಗಳ ಭಾಗವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ನ್ಯಾಶನಲ್ ಮೀಡಿಯಾ ಸೆಂಟರ್ ನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶಗಳ ಜನರಿಗೆ ನೀಡಲು 18 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ಉದ್ಯೋಗಗಳಿಗೆ ಎರಡು ವರ್ಷಗಳವರೆಗೆ ನಿವೃತ್ತಿ ನಿಧಿಯಡಿ ಕೊಡುಗೆ ನೀಡಲು ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಹೇಳಿದ್ದಾರೆ.

ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹೊಸ ಆತ್ಮನಿರ್ಭರ ಭಾರತ್ ರೋಜ್ ಗಾರ್ ಯೋಜನೆಯನ್ನು ಘೋಷಿಸಿದೆ.

ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆಯನ್ನು ತರಲಾಗುವುದು. ದೇಶದ ರೈತರಿಗೆ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆತ್ಮ ನಿರ್ಭರ್ ಭಾರತ್ ರೋಜ್ಗರ್ ಯೋಜನೆ ಹೊಸ ಉದ್ಯೋಗ ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಯನ್ನು ಸೃಷ್ಟಿಸುತ್ತದೆ ಎಂದು ಹಣಕಾಸು ಸಚಿವರು ಪ್ರತಿಪಾದಿಸಿದರು.

50 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಕನಿಷ್ಠ 2 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಬೇಕು ಮತ್ತು 50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಕನಿಷ್ಠ 5 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಬೇಕು. ಸೆಪ್ಟೆಂಬರ್ ತಿಂಗಳನ್ನು ಯೋಜನೆಯ ಆಧಾರವಾಗಿ ಪರಿಗಣಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ರಿಯಲ್ ಎಸ್ಟೇಟ್ ಆದಾಯ ತೆರಿಗೆಯಲ್ಲಿನ ವಲಯ ದರ ಮತ್ತು ಒಪ್ಪಂದದ ಮೌಲ್ಯದ ನಡುವಿನ ವ್ಯತ್ಯಾಸವನ್ನು ಇಂದಿನಿಂದ 2021 ರ ಜೂನ್ 30 ರವರೆಗೆ 2 ಕೋಟಿ ರೂ.ಗಳವರೆಗೆ ಪ್ರಾಥಮಿಕ ಮಾರಾಟಕ್ಕಾಗಿ ಶೇ 10 ರಿಂದ 20 ಕ್ಕೆ ಹೆಚ್ಚಿಸಲಾಗುತ್ತಿದೆ. ಆದಾಯ ತೆರಿಗೆ ಪರಿಹಾರವು ಮಧ್ಯಮ ವರ್ಗದವರಿಗೆ ಮನೆಗಳನ್ನು ಖರೀದಿಸಲು ಪ್ರೋತ್ಸಾಹವನ್ನು ನೀಡುತ್ತದೆ ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು