ಹಾವೇರಿ: ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತ್ಯು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾವೇರಿ: ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ಕಡೂರು ಬಳಿ ಶನಿವಾರ ಸಂಜೆ ಸಂಭವಿಸಿದೆ. 
ಮೃತರನ್ನು ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದವರೆಂದು ಹೇಳಲಾಗಿದೆ. 
ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಟ್ಟೀಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. 
ಕಡೂರು ಸಮೀಪದ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಲಾರಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಹಿಂದೆ ಇರುವ ಇನ್ನೊಂದು ಕಾರಿಗೂ ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಮಕ್ಕಳು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 
ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು