ಕೊರೋನ ಸೋಂಕಿಗೆ ಒಳಗಾಗಿರುವ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ:ಇತ್ತೀಚೆಗೆ ಕೋವಿಡ್-19 ಸೋಂಕಿಗೆ ಒಳಗಾದ ನಂತರ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ (92 ವರ್ಷ) ಅವರನ್ನು  ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ದೀದಿ ಅವರಲ್ಲಿ ಕೊರೋನ ವೈರಸ್ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಡಾ. ಪ್ರತೀಕ್ ಸಮ್ದಾನಿ,  ದೀದಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಹಾಗೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ. ಆದರೆ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆಯ ಕಾರಣಗಳಿಗಾಗಿ ಐಸಿಯುನಲ್ಲಿ ದಾಖಲಿಸಲಾಗಿದೆ. ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಹಾಗೂ ದೀದಿ ಆರೋಗ್ಯಕ್ಕಾಗಿ ಪ್ರಾರ್ಥಿಸಿ” ಎಂದು ಮಂಗೇಶ್ಕರ್ ಅವರ ಸೊಸೆ ರಚನಾ ANI ಗೆ ತಿಳಿಸಿದ್ದಾರೆ.
ಪ್ರೀತಿಯಿಂದ ‘ನೈಟಿಂಗೇಲ್ ಆಫ್ ಇಂಡಿಯಾ’ ಎಂದು ಕರೆಯಲ್ಪಡುವ ಹಿರಿಯ ಗಾಯಕಿ ಸಾವಿರಕ್ಕೂ ಹೆಚ್ಚು ಹಿಂದಿ ಚಲನಚಿತ್ರಗಳಲ್ಲಿ  ಹಾಗೂ  ಹಲವಾರು ಭಾರತೀಯ ಭಾಷೆಗಳು ಮತ್ತು ವಿದೇಶಿ ಭಾಷೆಗಳಲ್ಲಿ  ಹಾಡುಗಳನ್ನು ಹಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು