ಕೋವಿಡ್ಸ್ ಹೆಚ್ಚಳದಿಂದ.ಎಸ್.ಎಲ್.ಸಿ.ಪರೀಕ್ಷೆಗಳು ಮುಂದೂಡಿಕೆ: ಸಚಿವ ಎನ್.ಸುರೇಶ್ ಕುಮಾರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು, ವಿದ್ಯಾರ್ಥಿ, ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ , ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕೋವಿಡ್ 19ರ ಎರಡನೇ‌ ಅಲೆಯ ಅಬ್ಬರ ಸಂಪೂರ್ಣ ಹತೋಟಿಗೆ ಬಂದ ನಂತರ ಮುಂಚಿತವಾಗಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು