ಶಾಕಿಂಗ್ ನ್ಯೂಸ್: ಶಾಲೆಯಿಂದ 317ಕ್ಕೂ ಅಧಿಕ ವಿದ್ಯಾರ್ಥಿನಿಯರ ಅಪಹರಣ

niegiria
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರನೈಜೀರಿಯಾ(27-02-2021): ವಸತಿ ಶಾಲೆಯೊಂದರಿಂದ 317ಕ್ಕೂ ಅಧಿಕ ಬಾಲಕಿಯರನ್ನು ಬಂದೂಕುಧಾರಿಗಳು ಅಪಹರಿಸಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ನಡೆದಿದೆ.

ನೈಜೀರಿಯಾದ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯಿಂದ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದೆ. ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.

ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ, ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ  ಎಂದು  ತಿಳಿಸಿದ್ದಾರೆ.

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು