ಬೆಳ್ತಂಗಡಿ(03-11- 2020): ಆತ್ಮಹತ್ಯೆಗೆ ಯತ್ನಿಸಿದ ಒಂದೇ ಮನೆಯ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು. ಓರ್ವರು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್, ಪುತ್ರಿ ತ್ರಿಶಾ, ಚೇತನ್ ಅವರ ಪತ್ನಿ ಆಶಾ (30) ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಇಬ್ಬರು ಮೃತಪಟ್ಟಿದ್ದರು ಪತ್ನಿ ಆಶಾ ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುವುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.