ಯುಪಿಎಸ್ಸಿ: ಹೆಚ್ಚುವರಿ ಅವಕಾಶ ಇಲ್ಲ- ಸುಪ್ರೀಂ ಕೋರ್ಟ್

suprem court
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(24-02-2021): ಯುಪಿಎಸ್ಸಿ ಪರೀಕ್ಷೆ ಕೊನೆಯ ಅವಕಾಶವನ್ನು ಕೊರೊನಾ ಹಿನ್ನೆಲೆಯಲ್ಲಿ ಕಳೆದುಕೊಂಡವರಿಗೆ ಮತ್ತೊಂದು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರಿದ್ದ ಸುಪ್ರೀಂಕೋರ್ಟ್ ನ್ಯಾಯಪೀಠ, ಕಳೆದ ಅ. 2020ರ ಯುಪಿಎಸ್ ಸಿ ಪರೀಕ್ಷೆಗೆ ಕೊರೊನಾದಿಂದ ತಯಾರಿ ಮಾಡಿಕೊಳ್ಳಲು ಸಾಧ್ಯವಾಗದೆ ಕೊನೆಯ ಅವಕಾಶ ಕಳೆದುಕೊಂಡವರಿಗೆ ಹೆಚ್ಚುವರಿ ಅವಕಾಶ ಕೊಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ವಯೋಮಿತಿಯಲ್ಲಿ ಒಂದು ಬಾರಿ ವಿನಾಯಿತಿ ಕೊಡುವುದು ಬೇರೆ ಅಭ್ಯರ್ಥಿಗಳಿಗೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಫೆ. 9 ರಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಅಭಿಪ್ರಾಯವನ್ನು ತಿಳಿಸಿತ್ತು.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು