ನವದೆಹಲಿ (27-10-2020): ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಅಲಹಾಬಾದ್ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠ ಮಹತ್ವದ ಸೂಚನೆಯನ್ನು ನೀಡಿದ್ದು, ಹತ್ರಾಸ್ ಕೇಸಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಸಾಕ್ಷಗಳಿಗೆ ನೀಡಿರುವ ಭದ್ರತೆ ಸೇರಿದಂತೆ ಎಲ್ಲಾ ಆಯಾಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.
ಅಲ್ಲದೆ ಸಿಬಿಐ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿತಿ ವರದಿಯನ್ನು ಸಲ್ಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.ಇನ್ನು ಸಿಬಿಐ ತನಿಖೆಯನ್ನು ಕೂಡ ಅಲಹಾಬಾದ್ ಹೈಕೋರ್ಟ್ ನಿರ್ವಹಿಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.