ಪ್ರತಿಭಟಿಸುವ ಹಕ್ಕು ಎಲ್ಲಾ ಸಮಯದಲ್ಲಿ ಮತ್ತು ಎಲ್ಲೆಡೆ ಇರಲು ಸಾಧ್ಯವಿಲ್ಲ-ಸುಪ್ರೀಂಕೋರ್ಟ್

protest
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(13-02-2021): ಪ್ರತಿಭಟಿಸುವ ಹಕ್ಕು ಎಲ್ಲಾ ಸಮಯದಲ್ಲಿ ಮತ್ತು ಎಲ್ಲೆಡೆ ಇರಬಾರದು, ಅದು ಕೆಲವು ಕರ್ತವ್ಯಗಳನ್ನು ಹೊಂದಿದೆ ಎಂದು ಭಾರತದ ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ವಿಚಾರದಲ್ಲಿ ಸಾರ್ವಜನಿಕ ಹೆದ್ದಾರಿ ಬಳಕೆ ಕುರಿತಂತೆ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿದೆ.

ಈ ಕುರಿತ ಮೊದಲ ತೀರ್ಪನ್ನು ಎತ್ತಿ ಹಿಡಿದ  ನ್ಯಾಯಪೀಠ, ಸಾಂವಿಧಾನವು ಪ್ರತಿಭಟಿಸುವ ಮತ್ತು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಕೊಟ್ಟಿದೆ. ಆದರೆ ಅದು ಕೆಲವು ಜವಾಬ್ದಾರಿಯೊಂದಿಗೆ ಸೇರಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕೆಲವು ಸ್ವಯಂಪ್ರೇರಿತ ಪ್ರತಿಭಟನೆಗಳು ಇರಬಹುದು ಆದರೆ ದೀರ್ಘಕಾಲದ ಪ್ರತಿಭಟನೆಯ ಸಂದರ್ಭದಲ್ಲಿ, ಇತರರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಸಾರ್ವಜನಿಕ ಸ್ಥಳವನ್ನು ನಿರಂತರವಾಗಿ ಆಕ್ರಮಿಸಿಕೊಳ್ಳಬಾರುದು ಎಂದು ಉನ್ನತ ನ್ಯಾಯಾಲಯ ಹೇಳಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು