ನವದೆಹಲಿ(28-10-2020): ಷರ್ಟ್ ಧರಿಸದೆ ಆನ್ ಲೈನ್ ಮೂಲಕ ವಕೀಲರೋರ್ವರು ವಿಚಾರಣೆಗೆ ಹಾಜರಾಗಿ ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ವಕೀಲರೊಬ್ಬರು ಷರ್ಟ್ ಧರಿಸಿರಲಿಲ್ಲ. ಇದನ್ನು ಗಮನಿಸಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರ ಅವರಿದ್ದ ಪೀಠವು ಈ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ.
ವಕೀಲರ ಕಾಯ್ದೆಯ ಅನ್ವಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವಕೀಲರು ಸಮವಸ್ತ್ರ ಧರಿಸುವುದು ಕಡ್ಡಾಯ. ಆದರೆ ಹಲವಾರು ವಕೀಲರು ಬೇಜಬ್ದಾರಿಯಿಂದ ವರ್ತಿಸುತ್ತಿದ್ದಾರೆ. ನ್ಯಾಯಾಲಯದ ಬಗ್ಗೆ ವಕೀಲರ ಈ ರೀತಿಯ ವರ್ತನೆ ಸಹಿಸಲು ಸಾಧ್ಯವಿಲ್ಲ ಎಂದು ಜಡ್ಜ್ ಗಳು ಹೇಳಿದ್ದಾರೆ.
ವಕೀಲರ ನಡೆತೆಗೆ ಆಕ್ರೋಶಗೊಂಡ ಪೀಠ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಕೊರೊನಾದಿಂದಾಗಿ ಆನ್ ಲೈನ್ ನಲ್ಲಿ ಹೆಚ್ಚಾಗಿ ಕೋರ್ಟ್ ಕಲಾಪಗಳು ನಡೆಯುತ್ತಿದ್ದು, ವಕೀಲರು ದುರ್ನಡತೆ ದೇಶದ ವಿವಿಧ ರಾಜ್ಯ ಗಳಿಂದ ವರದಿಯಾಗಿದೆ.