ಹೊಸದೆಹಲಿ(08/10/2020): ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ನ್ಯಾಯಾಧೀಶರಿಗೆ ನೀಡಿರುವ ಹೇಳಿಕೆಯ ಪ್ರತಿಯನ್ನು ಪಡೆಯಲು ಆರೋಪಿ, ಬಿಜೆಪಿ ಮುಖಂಡ ಚಿನ್ಮಯಾನಂದ ಅವರಿಗೆ ಸುಪ್ರೀಂ ಕೋರ್ಟ್ ಅವಕಾಶವನ್ನು ನಿರಾಕರಿಸಿದೆ. ಈ ಕುರಿತ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ.
ಹೈಕೋರ್ಟ್, 2019ರ ನ.7ರಂದು ಸಂತ್ರಸ್ತೆಯ ಹೇಳಿಕೆಯ ಪ್ರತಿಯನ್ನು ಆರೋಪಿಗೆ ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶಕ್ಕೆ ಕಳೆದ ವರ್ಷ ನವೆಂಬರ್ 15ರಂದು ಸುಪ್ರೀಂ ಕೋರ್ಟ್ ತಡೆ ನೀಡಿ, ರಾಜ್ಯ ಸರ್ಕಾರ ಹಾಗೂ ಚಿನ್ಮಯಾನಂದ ಅವರಿಂದ ಪ್ರತಿಕ್ರಿಯೆ ಕೇಳಿತ್ತು.
ಇಂದು ಈ ಬಗ್ಗೆ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಸಂತ್ರಸ್ತೆಯು ನೀಡಿರುವ ಹೇಳಿಕೆಯ ಪ್ರತಿಯನ್ನು ಆರೋಪಿಗೆ ನೀಡಲು ನಿರಾಕರಿಸಿದೆ.