‘ಸಿಸ್ಟಮ್ ಫೇಲಾಗಿದೆ’: ಆದ್ದರಿಂದ ‘ಜನ್ ಕೀ ಬಾತ್’ ಮಾಡುವುದು ಮುಖ್ಯ : ರಾಹುಲ್ ಗಾಂಧಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶ ಕೊರೊನಾ ಎರಡನೇ ಅಲೆಗೆ ತುತ್ತಾಗಿದೆ, ರೋಗಿಗಳು ಹಾಸಿಗೆ, ಆಮ್ಲಜನಕ ಕೊರತೆ ಇಲ್ಲದೆ ನರಳಾಡುತ್ತಿದ್ದಾರೆ, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಜವಾಬ್ದಾರಿಯ ನಾಗರಿಕರ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ
“‘ಸಿಸ್ಟಮ್’ ವಿಫಲವಾಗಿದೆ, ಆದ್ದರಿಂದ ‘ಜನ್ ಕಿ ಬಾತ್’ ಮಾಡುವುದು ಮುಖ್ಯ” ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಇಂದು ನಡೆಸಿದ ‘ಮನ್ ಕೀ ಬಾತ್ ‘ ಕಾರ್ಯಕ್ರಮವನ್ನು ಟೀಕಿಸಿದ್ದಾರೆ.

ಈ ಬಿಕ್ಕಟ್ಟಿನಲ್ಲಿ ದೇಶಕ್ಕೆ ಜವಾಬ್ದಾರಿಯುತ ನಾಗರಿಕರ ಅಗತ್ಯವಿದೆ. ನನ್ನ ಕಾಂಗ್ರೆಸ್ ಸಹೋದ್ಯೋಗಿಗಳಿಗೆ ಎಲ್ಲಾ ರಾಜಕೀಯ ಕೆಲಸಗಳನ್ನು ಬಿಡುವಂತೆ ನಾನು ವಿನಂತಿಸುತ್ತೇನೆ, ಎಲ್ಲಾ ಸಹಾಯವನ್ನು ನೀಡಿ ಮತ್ತು ನಮ್ಮ ದೇಶವಾಸಿಗಳ ನೋವನ್ನು ಕಡಿಮೆ ಮಾಡಿ ಎಂದು ರಾಹುಲ್ ದೇಶದ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಅಬ್ಬರದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ತಮ್ಮ ಎಲ್ಲಾ ಚುನಾವಣಾ ಪ್ರಚಾರ ರ್ಯಾಲಿಗಳನ್ನು ರದ್ದುಗೊಳಿಸಿದ ರಾಹುಲ್ ಕೊರೊನಾ ಬಿಕ್ಕಟ್ಟಿನ ಕುರಿತು ದೇಶದ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.


“ಇದು ಕಾಂಗ್ರೆಸ್ ಕುಟುಂಬದ ಧರ್ಮ” ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು