ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ನೂತನ ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಲಗರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣ ವಚನ ಬೋಧಿಸಿದರು. ಇಬ್ಬರು ಶಾಸಕರು ಸತ್ಯ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಬಸವಕಲ್ಯಾಣ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಶಾಸಕ ಶರಣು ಸಲಗರ ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ, ಸಚಿವ ಪ್ರಭು … Read more

ಬೈ ಎಲೆಕ್ಷನ್ ಫಲಿತಾಂಶ: ಕಲ್ಯಾಣ ಕದನದಲ್ಲಿ ಬಿಜೆಪಿಯ ಶರಣು ಸಲಗರ ಜಯಭೇರಿ

ಬಸವಕಲ್ಯಾಣ: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ಬಿಜೆಪಿ ಅಭ್ಯರ್ಥಿ ಶರಣು ಸಲಗರ ಜಯಭೇರಿ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬಿ.ನಾರಾಯಣ ಅವರ ನಿಧನದಿಂದ ತೆರವಾದ ಕ್ಷೇತ್ರ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಪಕ್ಷ ಅವರ ಪತ್ನಿ ಮಾಲಾ ನಾರಾಯಣ ಅವರಿಗೆ ಟಿಕೇಟ್ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಅನುಕಂಪ ಕೆಲಸ ಮಾಡಲಿಲ್ಲ. ಕಲ್ಯಾಣದ ಮತದಾರರು ಬಿಜೆಪಿ ಅಭ್ಯರ್ಥಿಗೆ ಶರಣೆಂದು ಗೆಲ್ಲಿಸಿದರು. ಬಿಜೆಪಿ ಟಿಕೆಟ್‌ ಗಾಗಿ ತೀವ್ರ ಪೈಪೋಟಿ ಇತ್ತು. ಆದರೆ ಕೊನೆಗೂ ಶರಣು ಸಲಗರ ಅವರಿಗೆ ಬಿಜೆಪಿ ಟಿಕೇಟ್ … Read more

ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖುಬಾ ಉಚ್ಚಾಟನೆ

ಬೆಂಗಳೂರು: ಬಿಜೆಪಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಇಂದು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ವರಿಷ್ಠರು ಮನವೊಲಿಸಲು ಪ್ರಯತ್ನಿಸಿದರೂ ಜಗ್ಗದ ಖೂಬಾ ಬಿಜೆಪಿ ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿರುದ್ಧ ಸ್ಪರ್ಧೆ ಮಾಡಿ ಬಿಜೆಪಿಗೆ … Read more

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ತೀವಿ : ಸಚಿವ ಪ್ರಭು ಚವ್ಹಾಣ ವಿಶ್ವಾಸ

ಬೀದರ್(ಬಸವಕಲ್ಯಾಣ): ಬಸವಕಲ್ಯಾಣ ,ಮಸ್ಕಿ ಹಾಗೂ ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ಪ್ರಭು ಚವ್ಹಾಣ ಅಭಿಪ್ರಾಯಪಟ್ಟಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವರು ಹೇಳಿದರು. ಮಾಜಿ ಸಿಎಂ ಸಿದ್ದರಾಮಯ್ಯ ನವರು ಜನರಿಗೆ ಸುಳ್ಳು ಹೇಳ್ತಾರೆ, ಅವರ ಮಾತಿನಲ್ಲಿ ದಮ್ ಇಲ್ಲ, ಜನರು ಕಾಂಗ್ರೆಸ್ ನವರಿಗೆ ಗೆಲ್ಲಿಸಿ ಏನ್ ಮಾಡ್ತಾರೆ, ಕೇಂದ್ರ ಹಾಗೂ ರಾಜ್ಯದಲ್ಲಿಯೂ ನಮ್ಮದೇ … Read more

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ : ಎಚ್ ಡಿಕೆ ವಿರುದ್ಧ ಬಿಜೆಪಿ ದೂರು

ಬೀದರ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದ ವೇಳೆ ಎಪ್ರಿಲ್ 9ರಂದು ಕುಮಾರಸ್ವಾಮಿ ಅವರು ಮತದಾರರಿಗೆ ಮನೆ ಮಂಜೂರಾತಿ ಕುರಿತು ಆಮಿಷ ಒಡ್ಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಬಿಜೆಪಿ ದೂರು ಸಲ್ಲಿಸಿದೆ. ಬಿಜೆಪಿ ಎಂಎಲ್‌ಸಿ ಡಾ. ತೇಜಸ್ವಿನಿ ಗೌಡ ಸೇರಿದಂತೆ ಮತ್ತಿತರರು ಚುನಾವಣಾಧಿಕಾರಿಗಳಿಗೆ ಈ ಬಗ್ಗೆ ದೂರು … Read more

ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ : ಸಿದ್ದರಾಮಯ್ಯ

ಕೊಪ್ಪಳ: ಬೆಳಗಾವಿ ಲೋಕಸಭೆ ಕ್ಷೇತ್ರ ಸೇರಿ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಪ್ರತಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಚಿಲ್ಲರೆ ರಾಜಕೀಯ ಕಾಂಗ್ರೆಸ್ ಮಾಡುವುದಿಲ್ಲ, ಬಿಜೆಪಿ ಮಾಡುತ್ತದೆ, ಚಿಲ್ಲರೆ ರಾಜಕೀಯ ಮಾಡಿದ್ದು ಏನಾದರೂ ಸಾಕ್ಷಿ ಇವೆಯೇ ? ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ ನಾನು ಸಿಡಿ ವಿಚಾರವಾಗಿ ನಾನು ಮಾತನಾಡಲ್ಲ. ಆದ್ರೆ, ನ್ಯಾಯಯುತವಾಗಿ ತನಿಖೆ ಮಾಡಬೇಕಿದೆ. ಸಂತ್ರಸ್ತೆ ಹೇಳಿದ ಮೇಲೆ ಎಸ್​ಐಟಿ … Read more

ಕಾಂಗ್ರೆಸ್‍ ಪಕ್ಷಕ್ಕೆ ಅಂಬೇಡ್ಕರ್ ಅವರ ಶಾಪವಿದೆ : ನಳೀನ್ ಕುಮಾರ್ ಕಟೀಲ್

ಬೀದರ್ (ಬಸವಕಲ್ಯಾಣ): ದಲಿತ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿಸಿದ ಕಾಂಗ್ರೆಸಿಗರು, ಅದೇ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಸಂಪತ್‍ ರಾಜ್‍ ಅವರನ್ನು ಇದುವರೆಗೆ ಉಚ್ಚಾಟನೆ ಮಾಡಿಲ್ಲ. ಕಾಂಗ್ರೆಸ್‍ ಪಕ್ಷಕ್ಕೆ ಅಂಬೇಡ್ಕರ್ ಅವರ ಶಾಪವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಕಾಂಗ್ರೆಸ್ ಪಕ್ಷ ಕೇವಲ ಪರಮೇಶ್ವರ್ ಅವರನ್ನು ಸೋಲಿಸಿದ್ದಲ್ಲ, ಅಂಬೇಡ್ಕರ್ ಅವರಿಗೂ ಅನ್ಯಾಯ ಮಾಡಿದೆ. … Read more

ನಾವು ಅಭ್ಯರ್ಥಿಯನ್ನಾಗಿ ಮಾಡದಿದ್ದರೆ ಇಂದು ನನ್ನ ವಿರುದ್ಧ ಆರೋಪಿಸಲು ಆ ನಾಯಕ ಇರುತ್ತಿರಲಿಲ್ಲ: ಶಾಸಕ ಜಮೀರ್ ಅಹ್ಮದ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ ಎಚ್.ಡಿ.ಕೆ

ಬೆಂಗಳೂರು : 2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ, ಕೇಳಿ ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಮುಸ್ಲಿಂ … Read more

ಬಸವಕಲ್ಯಾಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬಸವಕಲ್ಯಾಣ ಐತಿಹಾಸಿಕ ಕೋಟೆಯಿಂದ ಥೇರ್ ಮೈದಾನದ ವರೆಗೆ ಬೃಹತ್ ಬಹಿರಂಗ ಪ್ರಚಾರ ಆಯೋಜಿಸಲಾಗಿತ್ತು. ಥೇರ್ ಮೈದಾನದಲ್ಲಿ ಆಯೋಜಿಸಿದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ್, ಜಮೀರ್ ಅಹಮದ್ … Read more

ರಾಜ್ಯದ‌ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾ‌ನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ‌ ದಿನಾಂಕ ಘೋಷಣೆ

ದೆಹಲಿ: ಕರ್ನಾಟಕದಲ್ಲಿ ಖಾಲಿಯಾಗಿರುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಪ್ರಕಟವಾಗಿದೆ. ಏಪ್ರಿಲ್‌ 17 ಮೂರೂ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ರಾಯಚೂರಿನ ಮಸ್ಕಿ ವಿಧಾನಸಭೆಯ ಶಾಸಕರಾಗಿದ್ದ ಪ್ರತಾಪ್‌ ಗೌಡ ಅವರು ಕಾಂಗ್ರೆಸ್‌ ಬಿಟ್ಟು ಜೆಡಿಎಸ್‌ ಸೇರಿದ್ದರು. ಇದರಿಂದಾಗಿ ಅಲ್ಲಿ ಉಪಚುನಾವಣೆ ಬಂದಿದೆ. ಇನ್ನುಳಿದಂತೆ ಬೆಳಗಾವಿ ಸುರೇಶ ಅಂಗಡಿ ಅವರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದರು ಹಾಗೂ ಬೀದರ್‌ ಬಸವಕಲ್ಯಾಣದ ಕಾಂಗ್ರೆಸ್‌ ಶಾಸಕರಾದ ಬಿ ನಾರಾಯಣರಾವ್‌ ಅವರು ಕೋವಿಡ್‌ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು. … Read more