ಆರ್ಟಿಕಲ್ 370 ರದ್ದು ಹೇಳಿಕೆ ವಿಚಾರ: ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ – 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಕುರಿತು ‘ಕ್ಲಬ್ ಹೌಸ್’ ಎಂಬ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ‘ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನವನ್ನು ಕಸಿದು ಕೇಂದ್ರಾಡಳಿತ ಪ್ರದೇಶ ವನ್ನಾಗಿ ಮಾಡಿರುವುದು ಬೇಸರದ ನಿರ್ಧಾರ. ಮೋದಿ ಸರ್ಕಾರದ ಅವಧಿ ಮುಗಿದು ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವಿಷಯವಾಗಿ ಮರುಪರಿಶೀಲನೆ ನಡೆಸುವುದಾಗಿ ಹೇಳಿರುವುದು’ ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ರಾಷ್ಟ್ರೀಯತೆ … Read more

ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸುವುದು ಲೂಟಿ ಅಲ್ಲದೇ ಮತ್ತೇನು? ಇದೇನಾ ಅಚ್ಛೇ ದಿನ್? : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಚಪ್ಪಡಿ ಎಳೆದಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಶೇ. 30ರಷ್ಟು ಏರಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಮೊದಲು. ರಾಜ್ಯದಲ್ಲಿ ಉತ್ಪಾದನೆ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರ ಮತ್ತು ಅದಾನಿ ಕಂಪನಿಯಿಂದ ಹೆಚ್ಚು ದರಕ್ಕೆ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದಕ್ಕೆ … Read more

ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವು ದಿನಗಳಿಂದ ಭಾರಿ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೆ ನಾಯಕರನ್ನು ಸಿಎಂ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದೆ ಎಂದು ಬಿಜೆಪಿ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಮುಖ್ಯಮಂತ್ರಿ ಹುದ್ದೆ … Read more

ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? : ಎಚ್.ಡಿ.ಕುಮಾರಸ್ವಾಮಿ ಗರಂ

ಬೆಂಗಳೂರು: ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ … Read more

ಇಂಧನ ಬೆಲೆ ಏರಿಕೆ: ಜೂನ್ 11ಕ್ಕೆ ಕಾಂಗ್ರೆಸ್ ನಿಂದ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇಂಧನ ಬೆಲೆಗ ರೂ.100 ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಜನತೆ ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂಥ … Read more

ಸೆಂಟ್ರಲ್ ಬ್ಯಾಂಕ್ ಮತ್ತು ಇಂಡಿಯನ್ ಓವರ್‍ ಸೀಸ್ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಶಿಫಾರಸು ಮಾಡಿದ ನೀತಿ ಆಯೋಗ

ನವದೆಹಲಿ: ಸೆಂಟ್ರಲ್ ಬ್ಯಾಂಕ್ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ನೀತಿ ಆಯೋಗವು ಶಿಫಾರಸು ಮಾಡಿದೆ. ಒಕ್ಕೂಟ ಸರಕಾರದ ಬಜೆಟಿನಲ್ಲಿ ಖಾಸಗೀಕರಣ ಮಾಡುವ ಬಗ್ಗೆ ನಿರ್ದೇಶನ ನೀಡಲಾಗಿತ್ತು. ಅದೇ ರೀತಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡಾ 2020-21 ರ ಆರ್ಥಿಕ ವರ್ಷದಲ್ಲಿ ಎರಡು ಸರಕಾರೀ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುವ ಬಗ್ಗೆ ಹೇಳಿದ್ದರು. ಸರಕಾರದ ಹೊಸ ನೀತಿಯಾದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗೆಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ.  … Read more

ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಲೂಟಿಯ ಬಗ್ಗೆ ತಾವು ತುಟಿ ಬಿಚ್ಚುತ್ತಿಲ್ಲವೇಕೆ? : ರಾಜ್ಯ ಕಾಂಗ್ರೆಸ್

ಬೆಂಗಳೂರು: ಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಿ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ಹಲವು ಬಿಜೆಪಿ ನಾಯಕರೇ ಆರೋಪಿಸಿರುವಾಗ ಕ್ರಮ ಕೈಗೊಳ್ಳದಿರುವುದೇಕೆ ಎಂದು ಬಿಜೆಪಿಯನ್ನು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ಬಿಜೆಪಿ ವಿರುದ್ಧ ಆರೋಪಿಸಿದೆ, ಬಿ.ವೈ.ವಿಜಯೇಂದ್ರ ಜಾರಿ ನಿರ್ದೇಶನಾಲಯದ ವಿಚಾರಣೆಗಾಗಿ ದೆಹಲಿಗೆ ಹೋಗಿದ್ದರು ಎಂದು ಸ್ವತಃ ಬಿಜೆಪಿ ಶಾಸಕ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಮಾರಿಷಸ್‌ನಲ್ಲಿ ಬಿ.ವೈ .ವಿಜಯೇಂದ್ರ ಅವರ ಅಕ್ರಮ ಸಂಪತ್ತಿದೆ, ಕಿಯಾ ಕಂಪೆನಿಯೊಂದಿಗೆ ಅಕ್ರಮ ವ್ಯವಹಾರ ನಡೆದಿದೆ, … Read more

ಹೈ ಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ! ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿದ ಸಿಎಂ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರದಲ್ಲಿ ಒಳಗೊಳಗೇ ನಡೆಯುತ್ತಿದ್ದ ಶೀತಲ ಸಮರ ಹೊರ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವೆನೆಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸಿಎಂ ಪುತ್ರ ವಿಜಯೇಂದ್ರರ ದೆಹಲಿ ಭೇಟಿ ಬೆನ್ನಲ್ಲೇ ಯಡಿಯೂರಪ್ಪ ಇಂತಹ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ ಮತ್ತು ಎಲ್ಲಿಯವರೆಗೆ ಅವರು ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಹೈಕಮಾಂಡ್ … Read more

ಲಕ್ಷದ್ವೀಪಕ್ಕೆ ಅನಗತ್ಯವಾದ ಸುಧಾರಣಾ ಅಲೆಗಳು..

ಮೂಲ : ವಜಾಹತ್ ಹಬೀಬುಲ್ಲಾ (ದ ಹಿಂದೂ) ಅನುವಾದ : ನಾ ದಿವಾಕರ, ಹಿರಿಯ ಲೇಖಕರು ಕಳೆದ ಡಿಸೆಂಬರ್‍ನಲ್ಲಿ ಲಕ್ಷದ್ವೀಪದ ಹೆಚ್ಚುವರಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪ್ರಫುಲ್ ಪಟೇಲ್ , ಈಗ ಲಕ್ಷದ್ವೀಪದ ಆಡಳಿತ ಸುಧಾರಣೆಗಾಗಿ ಹಲವಾರು ಶಾಸನಗಳನ್ನು ಸಿದ್ಧಪಡಿಸಿದ್ದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಸುಧಾರಣೆಗಳನ್ನು ಜಾರಿಗೊಳಿಸಿದರೆ ಈ ದ್ವೀಪದ ಮೇಲೆ ತೀವ್ರ ತೆರನಾದ ಪ್ರಭಾವ ಉಂಟಾಗುವ ಸಾಧ್ಯತೆಗಳಿರುತ್ತವೆ. ಲಕ್ಷದ್ವೀಪ ಜಾನುವಾರು ಸಂರಕ್ಷಣಾ ವಿಧಾಯಕ 2021 ; … Read more

ನ್ಯಾಯಾಲಯದಲ್ಲಿ ಕೇಂದ್ರಕ್ಕೆ ಸರಣಿ ಮುಖಭಂಗವಾಗಿದೆ: ದಿನೇಶ್ ಗುಂಡೂರಾವ್

ಬೆಂಗಳೂರು : ಕೇಂದ್ರ ಸರ್ಕಾರದ ಅಸಮರ್ಪಕ ಲಸಿಕಾ ನೀತಿ ಬಗ್ಗೆ ಸುಪ್ರೀಂ ಕೋರ್ಟ್ ಪದೇ ಪದೇ ಚಾಟಿ ಬೀಸುತ್ತಿದೆ. ಇದು ನ್ಯಾಯಾಲಯದಲ್ಲಿ ಕೇಂದ್ರಕ್ಕೆ ಸರಣಿ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿದ ಅವರು, ಕಾರ್ಯಾಂಗದ ಅಧಿಕಾರ ವ್ಯಾಪ್ತಿಯಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸಬಾರದು ಎಂಬ ಕೇಂದ್ರದ ವಾದ ಉದ್ಧಟತನದ್ದು. ಕೇಂದ್ರದ ಮನೆಹಾಳು ನೀತಿಯಿಂದ ಜನ ಸಾಯುವುದನ್ನು ನೋಡಿಯೂ ಕೋರ್ಟ್ ಮೌನವಾಗಿರಬೇಕೆ? ಎಂದಿದ್ದಾರೆ. ಕಳೆದ ಬಜೆಟ್‌ನಲ್ಲಿ ಲಸಿಕಾ ಯೋಜನೆಗಾಗಿ ಕೇಂದ್ರ 35 ಸಾವಿರ … Read more