ಮದುವೆ ಸಮಾರಂಭಕ್ಕೆ 40 ಜನರ ಮಿತಿ, ಅನುಮತಿ ಪಾಸ್ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ವ್ಯಾಪಾರ ವಹಿವಾಟು ನಡೆಸಲು ಸಡಿಲಿಕೆ ನೀಡಿರುವ ಸರ್ಕಾರ ಇದೀಗ 40 ಜನರಿಗೆ ಮಿತಿಗೊಳಿಸಿ ರಾಜ್ಯದಾದ್ಯಂತ ಕಲ್ಯಾಣ ಮಂಟಪ, ಹೋಟೆಲ್‌ ಸಭಾಂಗಣ ಮತ್ತು ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸೋಮವಾರದಿಂದ ಅನುಮತಿ ನೀಡಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ರೂಪಾಂತರಿ ಡೆಲ್ಟಾ ಕೊರೊನಾ ವೈರಾಣು ನಿಯಂತ್ರಣ ಕುರಿತು ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಕೈಗೊಂಡ … Read more

ದೇಶದಲ್ಲಿ ‘ಡೆಲ್ಟಾ ಪ್ಲಸ್’ ವೈರಸ್ ಹರಡದಂತೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು: ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ದೇಶದ ಶೇ.80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ … Read more

ರೈತರು ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದರೆ, ಕೃಷಿ ಸಚಿವರು ಚಾದರ ಹೊದ್ದು ಮಲಗಿದ್ದಾರೆ: ರಾಜ್ಯ ಕಾಂಗ್ರೆಸ್

ಬೆಂಗಳೂರು: ಆಕ್ಸಿಜನ್, ಲಸಿಕೆಗಳ ನಂತರ ಈ ಸರ್ಕಾರದ “ಇಲ್ಲ”ಗಳ ಪಟ್ಟಿಗೆ ಹೊಸ ಸೇರ್ಪಡೆ ಗೊಬ್ಬರ, ಬಿತ್ತನೆ ಬೀಜ. ಈ ಹದವಾದ ಮುಂಗಾರಿನ ವಾತಾವರಣದಲ್ಲಿ ರೈತರುಬೆಳೆ ಹಾಕಲು ತುರಾತುರಿಯಲ್ಲಿದ್ದರೂ ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾದರ ಹೊದ್ದು ಮಲಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ, ಈ ಅಯೋಗ್ಯತನಕ್ಕೆ ಏಕೆ ಮಂತ್ರಿಗಿರಿ? ರೈತರಿಗೆ ಬೆಳೆ ವಿಮೆಯಲ್ಲಿ ಮೋಸ, ಹಿಂದಿನ … Read more

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಮುಖ್ಯ ಗುರಿ: ಸಿದ್ಧರಾಮಯ್ಯ

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಚರ್ಚೆ ಅನವಶ್ಯಕ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಮುಖ್ಯ ಗುರಿ. ನಮ್ಮ ಎಲ್ಲ ನಾಯಕರು … Read more

ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ: ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು : ನೀರಾವರಿ ಇಲಾಖೆಯ ₹   20 ಸಾವಿರ  ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು … Read more

“ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ” : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು … Read more

ಸರ್ಕಾರದ ವಿರುದ್ಧದ 2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪದ ತನಿಖೆ ಯಾಕಿಲ್ಲ?: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ರೂ.150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ರೂ. 2000ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು … Read more

ನಾಯಕತ್ವ ಸರಿಯಿಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ : ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು : “ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ ಸಂಗಮದೇವ” ಎಂದು ಅವರು … Read more

ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕತೆಯ ಸ್ಥಿತಿ ನೆಲೆಯಾಗಿದೆ … Read more

ಬಿ.ಎಸ್.ವೈ.ಅವರಿಗೆ ವಯಸ್ಸಾಗಿದೆ, ಮುಂದಿನ ಸಿಎಂ ಪಂಚಮಸಾಲಿ ಲಿಂಗಾಯತರೇ ಆಗಲಿ: ಎಚ್.ವಿಶ್ವನಾಥ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬೇರೆ ನಾಯಕರಿದ್ದಾರೆ, ಬೇರೆಯವರಿಗೆ ಬೆಳೆಯಲು ಯಡಿಯೂರಪ್ಪನವರು ಅವಕಾಶ ನೀಡಲಿ. ಮತ್ತೊಬ್ಬರು ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿ ಆಗಲಿ, ಅದರಲ್ಲೂ ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿ ಆಗಲಿ, ಮುರುಗೇಶ್ ನಿರಾಣಿ, ಬಸನ ಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಅವರು ಮೂವರಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಗಳಾಗಲಿ ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಅರುಣ್ ಸಿಂಗ್ ಅವರ ಜೊತೆ ಒನ್ ಟು ಒನ್ ಮೀಟಿಂಗ್ ನಡೆಸಿದ ನಂತರ ಹೊರಗೆ ಬಂದು ಮಾಧ್ಯಮಗಳೊಂದಿಗೆ … Read more