ಜೂನ್ 14ಕ್ಕೂ ಮೊದಲೇ ‘ಲಾಕ್ ಡೌನ್ ‘ ತೆರವು? ‘ಅನ್ ಲಾಕ್’ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಯಲ್ಲಿರುವ ‘ಲಾಕ್ ಡೌನ್ ‘ ತೆರವಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಜೂನ್ 14ಕ್ಕೂ ಮೊದಲೇ ‘ಅನ್ ಲಾಕ್’ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ ಎಂದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಮಾಡಲು ಚಿಂತನೆ ನಡೆಸಲಾಗಿದೆ. ಪಾಸಿಟಿವಿಟಿ ರೇಟ್ ಶೇ.5 ಕ್ಕಿಂತ ಕಡಿಮೆ ಬಂದ ಜಿಲ್ಲೆಗಳಲ್ಲಿ … Read more

ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು: ಸಿದ್ಧರಾಮಯ್ಯ

ಬೆಂಗಳೂರು : ಸರ್ಕಾರದ ನೀತಿಗಳು ಮತ್ತು ಕೋವಿಡ್ ಮುಂತಾದ ಕಾರಣಗಳಿಂದಾಗಿ ಇಂದು ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಹಾಗಾಗಿ ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ರೈತರಿಗೆ ಸಾಕಾಗುವಷ್ಟು ಬೀಜ ವಿತರಿಸುವ ಬಗ್ಗೆ ಆಗ್ರಹ ಮಾಡಿದ್ದಾರೆ, ಕೂಡಲೇ ಸಾಲ ವಿತರಣೆ ಚಟುವಟಿಕೆಗಳನ್ನು ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, … Read more

ಕನ್ನಡ ಭಾಷೆಗೆ ಅವಮಾನಿಸಿದ ಗೂಗಲ್ ಸಂಸ್ಥೆಯ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದ್ದಾರೆ. ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ … Read more

17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ?: ನಳೀನ್ ಕುಮಾರ್ ಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೆಜೆಪಿ ಪರ್ವದಲ್ಲಿ ಬಿ.ಎಸ್.ವೈ ಅವರನ್ನ ಹೇಗೆ ನಡೆಸಿಕೊಂಡಿರಿ, ಈಗಲೂ ಅದೇ ಮಾದರಿಯಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂಬುದನ್ನ ಹೇಳಬೇಕೆ? 17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ, ಹೀಗಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಮಾಡಿತ್ತು ಎಂದು ನಳಿನ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು, ಇದಕ್ಕೆ … Read more

ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ ಎಂದೇ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿಗೆ ಸಿಎಂ ಮಾಡಿತ್ತು : ನಳಿನ್ ಕುಮಾರ್ ಕಟೀಲ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಕೊರತೆ ಇದೆಯೇ ಹೊರತು ಬಿಜೆಪಿಯಲ್ಲಿ ಅಲ್ಲ. ಸಿದ್ದರಾಮಯ್ಯ ಅವರು ಸಮರ್ಥ ನಾಯಕ ಅಲ್ಲ ಎನ್ನುವುದನ್ನು ಅರಿತ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ, ಸಿದ್ದರಾಮಯ್ಯ ಅವರು ಮೊದಲು ತಮ್ಮ ಪಕ್ಷದ ಸ್ಥಿತಿಗತಿಗಳ ಬಗ್ಗೆ ನೋಡಿಕೊಳ್ಳುವುದು ಒಳ್ಳೆಯದು. ಕಾಂಗ್ರೆಸ್‌ ಪಕ್ಷದವರಿಗೆ ಸದ್ಯ ಬೇರೆ ಏನೂ ಕೆಲಸವಿಲ್ಲ. ಪ್ರತಿಪಕ್ಷವಾಗಿಯೂ ಸರಿಯಾಗಿ … Read more

ಲಾಕ್ ಡೌನ್ ವಿಸ್ತರಿಸುವ ಬಗ್ಗೆ ತಜ್ಞರು ಯಾವುದೇ ವರದಿ ನೀಡಿಲ್ಲ: ಸಿಎಂ ಬಿ.ಎಸ್.ವೈ.

ಬೆಂಗಳೂರು : ಕೋವಿಡ್ -19 ರ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕಾವೇರಿ ನಿವಾಸದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು ಒಂದೆರಡು ದಿನಗಳಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಜೂನ್ 7 ಕ್ಕೆ ಮುಗಿಯುವ ಲಾಕ್ ಡೌನ್ ಮುಂದುವರೆಸುವ ಬಗ್ಗೆ ತಿಳಿಸಿದ ಅವರು ಜೂನ್ 5, 6 ರ … Read more

ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ ಅನಾಥರಿಗೆ ‘ಬಾಲ ಸೇವಾ ಯೋಜನೆ’ : ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು ಇದ್ದಾರೆ. ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆ ಘೋಷಣೆ ಮಾಡಿದೆ. ಇಂದು ಸಂಜೆ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ಬಾಲ ಸೇವಾ ಯೋಜನೆ’ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಸಲಹೆ ಮೇರೆಗೆ, ಅನಾಥ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು … Read more

ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಶೀಘ್ರವಾಗಿ ಲಸಿಕೆ ನೀಡಬೇಕು: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ . ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು … Read more

ಕೋವಿಡ್ ನಿಂದ ಮೃತಪಟ್ಟ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕು: ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಅಂಗನವಾಡಿ, ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ನೇರ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವಸು, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡುವುದು. ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ … Read more

ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ನೀಡುವ ಲಸಿಕೆಗೆ ಸೇವಾ ಶುಲ್ಕವನ್ನು ರೂ.100 ರಿಂದ 200ಕ್ಕೆ ಹೆಚ್ಚಿಸಿರುವ ರಾಜ್ಯದ ಬಿಜೆಪಿ ಸರ್ಕಾರ ಯಾರ ಹಿತರಕ್ಷಣೆ‌ ಮಾಡುತ್ತಿದೆ? ರಾಜ್ಯದ ಜನರದ್ದೋ? ಖಾಸಗಿ ಆಸ್ಪತ್ರೆಗಳದ್ದೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರ ಖಾಸಗಿ‌ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು‌ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ‌ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ಸರ್ಕಾರ ಸೇವಾ ಶುಲ್ಕ‌ವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ ಎಂದಿದ್ದಾರೆ. ಖಾಸಗಿ … Read more