ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ನೂತನ ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಲಗರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣ ವಚನ ಬೋಧಿಸಿದರು. ಇಬ್ಬರು ಶಾಸಕರು ಸತ್ಯ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಬಸವಕಲ್ಯಾಣ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಶಾಸಕ ಶರಣು ಸಲಗರ ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ, ಸಚಿವ ಪ್ರಭು … Read more

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ನಂತರ ರಾಜಕೀಯ ನಾಯಕರು ಪರಸ್ಪರ ಆರೋಪಗಳಲ್ಲಿ ತೊಡಗಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಪಕ್ಷ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್ ಪಕ್ಷ ಸೋಲಿಗೆ ಜೆಡಿಎಸ್ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ಹೇಳಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಎಚ್. ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಬೈ ಎಲೆಕ್ಷನ್ ಫಲಿತಾಂಶ: ಕಲ್ಯಾಣ ಕದನದಲ್ಲಿ ಬಿಜೆಪಿಯ ಶರಣು ಸಲಗರ ಜಯಭೇರಿ

ಬಸವಕಲ್ಯಾಣ: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ಬಿಜೆಪಿ ಅಭ್ಯರ್ಥಿ ಶರಣು ಸಲಗರ ಜಯಭೇರಿ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬಿ.ನಾರಾಯಣ ಅವರ ನಿಧನದಿಂದ ತೆರವಾದ ಕ್ಷೇತ್ರ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಪಕ್ಷ ಅವರ ಪತ್ನಿ ಮಾಲಾ ನಾರಾಯಣ ಅವರಿಗೆ ಟಿಕೇಟ್ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಅನುಕಂಪ ಕೆಲಸ ಮಾಡಲಿಲ್ಲ. ಕಲ್ಯಾಣದ ಮತದಾರರು ಬಿಜೆಪಿ ಅಭ್ಯರ್ಥಿಗೆ ಶರಣೆಂದು ಗೆಲ್ಲಿಸಿದರು. ಬಿಜೆಪಿ ಟಿಕೆಟ್‌ ಗಾಗಿ ತೀವ್ರ ಪೈಪೋಟಿ ಇತ್ತು. ಆದರೆ ಕೊನೆಗೂ ಶರಣು ಸಲಗರ ಅವರಿಗೆ ಬಿಜೆಪಿ ಟಿಕೇಟ್ … Read more

ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ, ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವಿನ ಕಡೆಗೆ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಅಭ್ಯರ್ಥಿಗಳ ತೀರ್ಪು ಹೊರಬೀಳಲು ಕೆಲವೇ ಕ್ಷಣಗಳು ಬಾಕಿಯಿವೆ. ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣ ಹಿನ್ನಡೆಯಲ್ಲಿದ್ದಾರೆ, ಜೆಡಿಎಸ್ ಅಭ್ಯರ್ಥಿ ಕೂಡ ಐದು ಸಾವಿರ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಇನ್ನೂ ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಹಿನ್ನಡೆಯಾಗಿದೆ, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು ಗೆಲ್ಲುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಕಣದಲ್ಲಿರುವ … Read more

ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖುಬಾ ಉಚ್ಚಾಟನೆ

ಬೆಂಗಳೂರು: ಬಿಜೆಪಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಇಂದು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ವರಿಷ್ಠರು ಮನವೊಲಿಸಲು ಪ್ರಯತ್ನಿಸಿದರೂ ಜಗ್ಗದ ಖೂಬಾ ಬಿಜೆಪಿ ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿರುದ್ಧ ಸ್ಪರ್ಧೆ ಮಾಡಿ ಬಿಜೆಪಿಗೆ … Read more

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ತೀವಿ : ಸಚಿವ ಪ್ರಭು ಚವ್ಹಾಣ ವಿಶ್ವಾಸ

ಬೀದರ್(ಬಸವಕಲ್ಯಾಣ): ಬಸವಕಲ್ಯಾಣ ,ಮಸ್ಕಿ ಹಾಗೂ ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ಪ್ರಭು ಚವ್ಹಾಣ ಅಭಿಪ್ರಾಯಪಟ್ಟಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವರು ಹೇಳಿದರು. ಮಾಜಿ ಸಿಎಂ ಸಿದ್ದರಾಮಯ್ಯ ನವರು ಜನರಿಗೆ ಸುಳ್ಳು ಹೇಳ್ತಾರೆ, ಅವರ ಮಾತಿನಲ್ಲಿ ದಮ್ ಇಲ್ಲ, ಜನರು ಕಾಂಗ್ರೆಸ್ ನವರಿಗೆ ಗೆಲ್ಲಿಸಿ ಏನ್ ಮಾಡ್ತಾರೆ, ಕೇಂದ್ರ ಹಾಗೂ ರಾಜ್ಯದಲ್ಲಿಯೂ ನಮ್ಮದೇ … Read more

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ‌. ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಘಟಕ ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರದ ಸಭೆಗೆ ಆಗಮಿಸುವಂತೆ ಮತದಾರರಿಗೆ ಹಣ ಹಂಚುತ್ತಿರುವ ನಂದೀಶ್ ರೆಡ್ಡಿ ಅವರ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ಟೀಕಿಸಿದೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? … Read more

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೀದರ್: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ತಡೆಗಟ್ಟಲು ಲಾಕ್ ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಇದ್ದೇನೆ. ಸಮಿತಿ ಆ ರೀತಿ ಸೂಚನೆ ನೀಡಿಲ್ಲ., ಸಲಹೆ ನೀಡಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿಕೆಗೆ ಸಿಎಂ ಯಡಿಯೂರಪ್ಪ … Read more

ಮಸ್ಕಿ ಬೈ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಪ್ರಚಾರಕ್ಕೆ ಸಿಂಗರ್ ‘ಮಂಗ್ಲಿ’

ರಾಯಚೂರು(ಮಸ್ಕಿ): ‘ಕಣ್ಣೇ ಅದರಿಂದಿ..ಬೈಟೇ ಚದುರಿಂದಿ… ಹಾಡಿನಿಂದ ಹೆಚ್ಚು ಜನಪ್ರಿಯತೆ ಪಡೆದಿರುವ ತೆಲುಗು ಸಿನಿಮಾದ ಹಿನ್ನೆಲೆ ಗಾಯಕಿ ಮಂಗ್ಲಿ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಚುನಾವಣಾ ಪ್ರಚಾರ ಮಾಡುವುದಕ್ಕೆ ಏಪ್ರಿಲ್‌ 13 ರಂದು ಮಸ್ಕಿಗೆ ಆಗಮಿಸಲಿದ್ದಾರೆ. ಕನ್ನಡದ ‘ರಾಬರ್ಟ್‌’ ಚಲನಚಿತ್ರದಲ್ಲಿ ‘ಕಣ್ಣು ಹೊಡೆಯಾಕ್‌….ನಿನ್ನಟಕ್ಕೆಲ್ಲಿ ಗಮತ್ತಗುಂದಿ…’ ಎಂಬ ಹಾಡನ್ನು ತೆಲುಗು ಭಾಷೆಯಲ್ಲಿ ಮಂಗ್ಲಿ ಹಾಡಿದ್ದಾರೆ. ಆ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ. ಈ ಹಾಡಿನ ಮೂಲಕ ಮಂಗ್ಲಿ ಅವರಿಗೆ ಬೇಡಿಕೆ ಕೂಡ ಹೆಚ್ಚಿದೆ. ಸಖತ್ … Read more

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ : ಎಚ್ ಡಿಕೆ ವಿರುದ್ಧ ಬಿಜೆಪಿ ದೂರು

ಬೀದರ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದ ವೇಳೆ ಎಪ್ರಿಲ್ 9ರಂದು ಕುಮಾರಸ್ವಾಮಿ ಅವರು ಮತದಾರರಿಗೆ ಮನೆ ಮಂಜೂರಾತಿ ಕುರಿತು ಆಮಿಷ ಒಡ್ಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಬಿಜೆಪಿ ದೂರು ಸಲ್ಲಿಸಿದೆ. ಬಿಜೆಪಿ ಎಂಎಲ್‌ಸಿ ಡಾ. ತೇಜಸ್ವಿನಿ ಗೌಡ ಸೇರಿದಂತೆ ಮತ್ತಿತರರು ಚುನಾವಣಾಧಿಕಾರಿಗಳಿಗೆ ಈ ಬಗ್ಗೆ ದೂರು … Read more