ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ, ಆಗಸ್ಟ್ ನಲ್ಲಿ ಮರು ನಿಗದಿ

ಬೆಂಗಳೂರು : ಜುಲೈ 7 ರಿಂದ ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021ನೇ ಸಾಲಿನ ವಾರ್ಷಿಕ ದ್ವಿತೀಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲ್ಪಟ್ಟಿದ್ದರಿಂದ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ, ದಿನಾಂಕ 01-07-2021 ಮತ್ತು 08-07-2021ರಂದು ನಡೆಸಲು ನಿಗದಿಪಡಿಸಿದ್ದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮತ್ತು 09-07-2021ರಂದು ನಡೆಸಬೇಕಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ … Read more