ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವು ದಿನಗಳಿಂದ ಭಾರಿ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೆ ನಾಯಕರನ್ನು ಸಿಎಂ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದೆ ಎಂದು ಬಿಜೆಪಿ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಮುಖ್ಯಮಂತ್ರಿ ಹುದ್ದೆ … Read more

ಬಿಜೆಪಿಯಲ್ಲಿ ದೊಡ್ಡ ನಾಟಕ ನಡೆಯುತ್ತಿದೆ, ಬಿ.ಎಸ್.ಯಡಿಯೂರಪ್ಪ ಅತ್ಯಂತ ಕೆಟ್ಟ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನವರ ಆಡಳಿತ ಸಂಪೂರ್ಣ ವಿಫಲವಾಗಿದೆ. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೂ ಹೋಗಿದೆ. ಆದ್ದರಿಂದ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಹೀಗಾಗಿ ಅವರು ನಾಟಕವಾಡುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವೇನು‌ ಸರ್ಕಾರ ಬೀಳಿಸಲ್ಲ ಅವರಾಗಿ ಬಿದ್ದು ಹೋದ್ರೆ, ನಾವು ನಡೆಸೋಕೆ ರೆಡಿ. ಜೊತೆಗೆ ಮುಂದಿನ ಚುನಾವಣೆ ಎದುರಿಸೋಕೆ ನಾವು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗಾದಿಯಿಂದ ಬಿಎಸ್​ವೈ ತೆಗೆಯಬೇಕೆಂದು … Read more

ಬ್ಲಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು: ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವೈರಸ್ ಅಟ್ಟಹಾಸದ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿದೆ, ಬ್ಲಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ. … Read more

ಮುಖ್ಯಮಂತ್ರಿ ಪದಚ್ಯುತಿಯ ಪ್ರಯತ್ನದಲ್ಲಿ ಬಿ.ಎಲ್‌.ಸಂತೋಷ ಕೂಡ ಷಾಮೀಲಾಗಿದ್ದಾರೆ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪದಚ್ಯುತಿಯ ಪ್ರಯತ್ನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್.ಈಶ್ವರಪ್ಪನವರ ಜೊತೆಯಲ್ಲಿ ಬಿ.ಎಲ್ ಸಂತೋಷ್ ಕೂಡಾ ಷಾಮೀಲಾಗಿದ್ದಾರೆ. ಈ ಕಾರಣದಿಂದಾಗಿಯೇ ಬಿಜೆಪಿ ಹೈಕಮಾಂಡ್ ಮೂಕಪ್ರೇಕ್ಷಕನಾಗಿ ಕೂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. “ಮುಖ್ಯಮಂತ್ರಿಗಳ ವಿರುದ್ದ ದಿನನಿತ್ಯ ಹೇಳಿಕೆ ನೀಡಿ ಬಹಿರಂಗ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ವಿರುದ್ದ ಕ್ರಮಕೈಗೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ. ಇಂತಹವರಿಗೆ ವಿರೋಧ ಪಕ್ಷದ ನಾಯಕರ … Read more

ಹೊಣೆಗೇಡಿ ಶಾಸಕರಿಂದ ಏನನ್ನು ನಿರೀಕ್ಷಿಸಲು ಸಾಧ್ಯ?

– ನಾ ದಿವಾಕರ್, ಹಿರಿಯ ಲೇಖಕರು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಐದು ವರ್ಷಕ್ಕೊಮ್ಮೆ ತಮ್ಮ ಅಮೂಲ್ಯ ಮತ ನೀಡಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಜೆಗಳಿಗೆ, ತಾವು ಚುನಾಯಿಸಿರುವ ಸರ್ಕಾರ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಅರಿವಾಗುವುದು ವಿಧಾನಮಂಡಲದ ಅಥವಾ ಸಂಸತ್ತಿನ ಅಧಿವೇಶನದ ಮೂಲಕ. ಈ ಅಧಿವೇಶನದಲ್ಲಿ ನಡೆಯುವ ಚರ್ಚೆಗಳು, ವಾಗ್ವಾದಗಳು, ಆರೋಪ ಪ್ರತ್ಯಾರೋಪಗಳು ಮತ್ತು ವಿವಿಧ ಇಲಾಖೆಗಳ ಸಚಿವರು ಸದನದಲ್ಲಿ ಮಂಡಿಸುವ ಅಂಕಿಅಂಶಗಳು, ರಾಜ್ಯ-ರಾಷ್ಟ್ರದ ಅಭಿವೃದ್ಧಿ ಎತ್ತ ಸಾಗುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಜನಸಾಮಾನ್ಯರು ತಮ್ಮ ದೈನಂದಿನ ಬದುಕಿನಲ್ಲಿ ಎದುರಿಸುವ … Read more

ಅಕ್ರಮ ಡಿನೋಟಿಫಿಕೇಷನ್ : ಬಿ.ಎಸ್.ವೈ, ನಿರಾಣಿಗೆ ಮತ್ತೆ ಭೂಕಂಟಕ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಭೂಕಂಟಕ ಎದುರಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವ ಮುರುಗೇಶ್ ನಿರಾಣಿ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಕೈ ಬಿಟ್ಟಿದ್ದ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿ ಹೈಕೋರ್ಟ್​​ ಆದೇಶ ನೀಡಿದೆ. ಹೈಕೋರ್ಟ್​ ಆದೇಶದಿಂದ ಸಿಎಂ ಬಿಎಸ್ ವೈ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಸಚಿವ ನಿರಾಣಿಗೆ ಮತ್ತೊಮ್ಮೆ ಭೂಕಂಟಕ ಸಂಕಷ್ಟ ಎದುರಾಗಿದೆ. ದೇವನಹಳ್ಳಿ ಬಳಿ ಅಕ್ರಮವಾಗಿ 20 … Read more

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದೇಕೆ? ಈ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?

yadiyoorappa

ಬೆಂಗಳೂರು(28-11-2020): ತನ್ನ ರಾಜಕೀಯ ಕಾರ್ಯದರ್ಶಿ, ಬಹುಕಾಲದಿಂದ ಬಿಎಸ್ ವೈ ಜೊತೆಗಿದ್ದ ಸಂತೋಷ್ ದಿಢೀರ್ ಆತ್ಮಹತ್ಯೆಗೆ ಯತ್ನಿಸಿದಾಗ ಸಿಎಂ ಬಿಎಸ್ ವೈ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಬಿಎಸ್ ವೈ, ಸಂತೋಷ್ ಬೆಳಿಗ್ಗೆಯಿಂದ ನಗುನಗುತ್ತಾ ಚೆನ್ನಾಗಿಯೇ ಇದ್ದ. ಯಾವುದೇ ಆತಂಕ ಇಲ್ಲ. ಬೆಳಿಗ್ಗೆ ನನ್ನ ಜತೆ ಮುಕ್ಕಾಲು ಗಂಟೆ ವಾಕ್ ಮಾಡಿದ್ದ. ಅವನ ಪತ್ನಿ ಜತೆ ನಾನು ಮಾತನಾಡಿದ್ದೇನೆ. ಆಗಿರುವುದು ಏನು ಎಂದು ಬೆಳಿಗ್ಗೆ ಆತನಲ್ಲಿ ನಾನು ಕೇಳುತ್ತೇನೆ ಎಂದು ಹೇಳಿದ್ದಾರೆ. ಇನ್ನು ಘಟನೆಯ … Read more

BIG BREAKING:ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

cm pa

ಬೆಂಗಳೂರು(28-11-2020): ಮುಖ್ಯಮಂತ್ರಿಗಳ ಪರಮಾಪ್ತ, ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಅಚ್ಚರಿಯ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ಅಸ್ವಸ್ಥರಾಗಿದ್ದು, ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗಷ್ಟೇ ಸಂತೋಷ್ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂದು ವರದಿಯಾಗಿತ್ತು.