ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ರೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಚ್ಚರಿ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಅವರು ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಶಾಸಕರಾದವರೇ ಸಿಎಂ ಆಗಬೇಕು ಅಥವಾ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕು ಎಂದಿಲ್ಲ. ಯಾರು ಬೇಕಾದರೂ ಸಿಎಂ ಆಗಬಹುದು. ಚುನಾವಣೆಯಲ್ಲಿ ಗೆಲ್ಲದವರೂ … Read more

ಪೆಟ್ರೋಲ್ 100 – ನಾಟ್ ಔಟ್’ : ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿ … Read more

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಇನ್ಸ್ಪೆಕ್ಟರ್‌ನನ್ನು ಅಮನತುಗೊಳಿಸಿ ಉನ್ನತ ತನಿಖೆಗೆ ಆದೇಶಿಸುವಂತೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್, ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದಿದೆ. ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ … Read more

ಸಂಕಷ್ಟದಲ್ಲಿರುವ ಉದ್ಯೋಗಸ್ಥರು ಹಾಗೂ ಉದ್ಯೋಗದಾತರ ನೆರವಿಗೆ ಸರ್ಕಾರ ಬರಬೇಕು: ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲೇ ಬೇಕು. ಸಂಗ್ರಹಿಸಿಡಲು ಸಾಧ್ಯವಿಲ್ಲದ ಹೂವು, ಹಣ್ಣು, ತರಕಾರಿ ಬೆಳೆದ ರೈತರು, ವೃತ್ತಿ ಆಧಾರಿತ ಕಾರ್ಮಿಕರು, ವರ್ತಕರಿಗೆ ಯಾವ ರೀತಿ ಪರಿಹಾರ ನೀಡಬೇಕು ಎನ್ನುವುದನ್ನು ಸರ್ಕಾರ ಇನ್ನೂ ಯೋಚಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಂಕಷ್ಟದಲ್ಲಿರುವ ಉದ್ಯೋಗಸ್ಥರು ಹಾಗೂ ಉದ್ಯೋಗದಾತರ ನೆರವಿಗೆ ಸರ್ಕಾರ ಬರಬೇಕು. ಗ್ಲೋಬಲ್ ಟೆಂಡರ್ ಮಾಡಿ ಏಜೆಂಟರ ಮೂಲಕ ಕಮೀಷನ್ ಹೊಡೆಯುವ ಬಿಜೆಪಿ … Read more

ನಮಗೆ ಅನುಮತಿ ಕೊಡಿ,ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ : ಡಿಕೆಶಿ

ಬೆಂಗಳೂರು: ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ 100 ಕೋಟಿ ರೂಪಾಯಿ ಯೋಜನೆಗೆ ಸರ್ಕಾರ ಮೊದಲು ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು … Read more

ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಡಿ.ಕೆ.ಶಿವಕುಮಾರ್ ಅವರೇ, ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಇಂದು ಸುದ್ದಿಗೋಷ್ಠಿಯಲ್ಲಿ ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರ ನಿಧಿಯಿಂದ 100 ಕೋಟಿ ನೀಡುತ್ತೇವೆ ಎಂದು ಹೇಳಿದರು ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ … Read more

ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ಹಸ್ತ, ಕಾಂಗ್ರೆಸ್ ಶಾಸಕರ ನಿಧಿಯಿಂದ 100 ಕೋಟಿ ನೀಡಲು ತೀರ್ಮಾನ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ. ದೇಶದ ಪ್ರತಿಯೊಬ್ಬರಿಗೂ ಕೊರೊನಾ … Read more

ಸರ್ಕಾರ ಎಲ್ಲಾ ವರ್ಗದವರಿಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿ : ಡಿಕೆಶಿ ಒತ್ತಾಯ

ಬೆಂಗಳೂರು: ಕೋವಿಡ್ ಪರಿಸ್ಥಿತಿ ನಿರ್ವಹಿಸುವಲ್ಲಿ ವೈಫಲ್ಯವನ್ನು ಒಪ್ಪಿಕೊಳ್ಳದ ರಾಜ್ಯ ಬಿಜೆಪಿ ಸರ್ಕಾರ ಪರಿಸ್ಥಿತಿ ಕೈ ಮೀರಿದ್ದಾಗಿ ಹೇಳುತ್ತಿದೆ. ಪದ ಬಳಕೆ ಮಾಡದೆ ‘ಬಿಗಿಕ್ರಮ’ದ ಹೆಸರಲ್ಲಿ ಲಾಕ್‌ಡೌನ್‌ ಘೋಷಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಅಘೋಷಿತ ಲಾಕ್‌ಡೌನ್‌ನಿಂದಾಗಿ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಆಟೋ, ಟ್ಯಾಕ್ಸಿ, ಟ್ರಾನ್ಸ್ ಪೋರ್ಟ್ ವಾಹನ ಚಾಲಕರಿಗೆ ರಕ್ಷಣೆ ನೀಡಬೇಕು, ಫೈನಾನ್ಸಿಯರ್‌ಗಳು ಕೊಡುವ ಕಿರುಕುಳ ನಿಲ್ಲಿಸಬೇಕು. ಹೊಟೆಲ್, ಸಾರಿಗೆ, ರೆಸ್ಟೋರೆಂಟ್ ಉದ್ಯಮಗಳನ್ನು ಅಗತ್ಯ … Read more

ಬಿಜೆಪಿ ಪಕ್ಷದವರಿಗೆ ಆಡಳಿತ ನಡೆಸುವುದು ಗೊತ್ತಿಲ್ಲ : ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿ ಪಕ್ಷದವರಿಗೆ ಆಡಳಿತ ನಡೆಸುವುದು ಗೊತ್ತಿಲ್ಲ, ಹಾಗಾಗಿ ರಾಜ್ಯದಲ್ಲಿ ಪರಿಸ್ಥಿತಿ ಇಷ್ಟು ಬಿಗಡಾಯಿಸುತ್ತಿದೆ. ಸರ್ಕಾರವೇ ಜನರಿಗೆ ಈ ಖಾಯಿಲೆ ಅಂಟಿಸಿರುವುದರಿಂದ ಜನರ ಕಾಳಜಿ ವಹಿಸುವುದೂ ಸರ್ಕಾರದ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸರ್ಕಾರದ ಯಾವ ಸಚಿವರು ಇಲ್ಲಿಯವರೆಗೂ ಯಾವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ? ಕೋವಿಡ್‌ಗೆ ಸಂಬಂಧಿಸಿದಂತೆ ಯಾವ ಆಸ್ಪತ್ರೆಯಲ್ಲಿ ಸಭೆ ನಡೆಸಿದ್ದಾರೆ? ಯಾವ ರೋಗಿಯ ಜೊತೆಗೆ ಮಾತನಾಡಿದ್ದಾರೆ, ಅವರ ಕಷ್ಟ ನೋಡಿದ್ದಾರೆ? ಆಸ್ಪತ್ರೆಯಲ್ಲಿ ಏನು ಸೌಲಭ್ಯ ಇದೆ ಎಂದು ಇವರು ನೋಡಿದ್ದಾರಾ? ಇಲ್ಲ … Read more

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿವೆ: ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡಿ, ಅವರಿಗೆ ಆರ್ಥಿಕ ಶಕ್ತಿ ತುಂಬುವುದರ ಜೊತೆಗೆ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಮೂಲಕ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ, ಬಡ-ಮಧ್ಯಮ ವರ್ಗಕ್ಕೆ ಉಚಿತ ಆರೋಗ್ಯ ಸೇವೆಯನ್ನು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ನಿವಾರಣೆ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡಿದರು. “ಕೊರೊನ … Read more