ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಪೋಷಕರಿಗೆ ಫೀಸು ಕುರಿತು ಕಿರುಕುಳ ನೀಡುವ ಪ್ರಕರಣಗಳು ಕೇಳಿಬರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂಬುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯಾವುದೇ ಶಾಲೆಗಳು ವಿದ್ಯಾರ್ಥಿಗಳು … Read more

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ : ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು : ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ … Read more

ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ಪರೀಕ್ಷೆಯ ನಡೆಯುತ್ತಾ,ರದ್ದಾಗುತ್ತಾ.. ಎಂಬ ಕುತೂಹಲಕ್ಕೆ ಕೊನೆಗೆ ತೆರೆ ಬಿದ್ದಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಘೋಷಣೆ ಮಾಡಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡದೇ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಥಮ ಪಿಯುಸಿ ಮಕ್ಕಳ ಗ್ರೇಡ್ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಲಾಗುವುದು ಎಂದಿದ್ದಾರೆ. ಗ್ರೇಡ್ ಬಗ್ಗೆ ಸಮಾಧಾನ ಇಲ್ಲದವರಿಗೆ ಕೋವಿಡ್ ನಂತರ ಪರೀಕ್ಷೆ … Read more

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ ಫೋನ್ ವಿತರಣೆ: ಶಿಕ್ಷಣ ಸಚಿವ ಸುರೇಶಕುಮಾರ್ ಮಾಹಿತಿ

ಮೈಸೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ‘ಉಚಿತ ಸ್ಮಾರ್ಟ್‌ಫೋನ್’ ವಿತರಣೆ ಮಾಡುವ ಕುರಿತು ಈಗಾಗಲೇ ಸರ್ವೇ ಕಾರ್ಯವನ್ನು ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿಗಳ‌ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಬಾರದು. ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತದೋ ಗೊತ್ತಿಲ್ಲ. ಹಳ್ಳಿಯ ಬಡ ಮಕ್ಕಳಿಗೆ ಸ್ಮಾರ್ಟ್ ಫೋನ್ ಖರೀದಿಸುವ ಆರ್ಥಿಕ ಸಾಮರ್ಥ್ಯ ಇಲ್ಲ, ಹೀಗಾಗಿ ಶಿಕ್ಷಣದಿಂದ ವಂಚಿತ ಮಕ್ಕಳಿಗೆ ಬಾಲ್ಯ ವಿವಾಹ ಆಗಬಾರದು. ಶಿಕ್ಷಣ ವಂಚಿತ ಮಕ್ಕಳು ಬಾಲ … Read more

12 ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ: ಪ್ರಿಯಾಂಕಾ ಗಾಂಧಿ

ನವದೆಹಲಿ: ದೇಶದಲ್ಲಿ ಎರಡನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದೆ. ಹಾಗಾಗಿ ಸಿಬಿಎಸ್‌ಇ 12 ನೇ ತರಗತಿಯ ಪರೀಕ್ಷೆಗಳನ್ನು ನಡೆಸಬಾರದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು ಕೋವಿಡ್‌-19 ಪಿಡುಗಿನ ಕಾರಣದಿಂದಾಗಿ ಮುಂದೂಡಲಾಗಿರುವ 12ನೇ ತರಗತಿ ಪರೀಕ್ಷೆಗಳ ಕುರಿತು ಚರ್ಚಿಸಲು ಕೇಂದ್ರ ಶಿಕ್ಷಣ ಸಚಿವಾಲಯವು ಭಾನುವಾರ ಮಹತ್ವದ ಸಭೆ ಕರೆದಿದೆ. ಸಭೆಯಲ್ಲಿ ಸಿಬಿಎಸ್ ಇ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ತಿಳಿಸಿದ್ದಾರೆ. ಕೋವಿಡ್ – 19 ಸಾಂಕ್ರಾಮಿಕ … Read more

ಕೋವಿಡ್ಸ್ ಹೆಚ್ಚಳದಿಂದ.ಎಸ್.ಎಲ್.ಸಿ.ಪರೀಕ್ಷೆಗಳು ಮುಂದೂಡಿಕೆ: ಸಚಿವ ಎನ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು, ವಿದ್ಯಾರ್ಥಿ, ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ , ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಕೋವಿಡ್ 19ರ ಎರಡನೇ‌ ಅಲೆಯ ಅಬ್ಬರ ಸಂಪೂರ್ಣ ಹತೋಟಿಗೆ ಬಂದ ನಂತರ ಮುಂಚಿತವಾಗಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ … Read more

ರಾಜ್ಯದಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಮಕ್ಕಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದ ಶಿಕ್ಷಣ ಇಲಾಖೆ ಇಂದು ಪರೀಕ್ಷೆ ಇಲ್ಲದೆ ಮೌಲ್ಯಾಂಕನ ಆಧರಿಸಿ ಪಾಸ್ ಮಾಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ಬಿಕ್ಕಟ್ಟಿನ ಇಂಥ ಕಠಿಣ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ … Read more

ಕೋವಿಡ್ ಹೆಚ್ಚಳ : ಇಂದಿನಿಂದ ಆಂಧ್ರಪ್ರದೇಶದ 1ರಿಂದ 9ನೇ ತರಗತಿ ಶಾಲೆಗಳು ಬಂದ್

ಅಮರಾವತಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ದೆಹಲಿ, ಹರಿಯಾಣ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳು ಬಂದ್ ಆಗಿವೆ. ಈಗ ಆಂಧ್ರಪ್ರದೇಶ ರಾಜ್ಯಕ್ಕೂ ತಟ್ಟಿದ ಕೋವಿಡ್ ಎಫೆಕ್ಟ್, ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ರಾಜ್ಯಾದ್ಯಂತ ಇಂದಿನಿಂದ 1 ರಿಂದ 9 ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು, … Read more

ಸಿಬಿಎಸ್ಇ ಪರೀಕ್ಷೆಗೂ ತಟ್ಟಿದ ಕೋವಿಡ್ ಬಿಸಿ | ಹತ್ತನೇ ತರಗತಿ ಪರೀಕ್ಷೆ ರದ್ದು; ಹನ್ನೆರಡನೇ ತರಗತಿಯದ್ದು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಏರುತ್ತಿರುವ ಕೋವಿಡ್ ಸಾಂಕ್ರಾಮಿಕ ರೋಗದ ಬಿಸಿಯು ಸಿಬಿಎಸ್ಇ ಪರೀಕ್ಷೆಗೂ ತಟ್ಟಿದೆ. ಪರೀಕ್ಷೆಗಳನ್ನು ರದ್ದು ಯಾ ಮುಂದೂಡಲಾಗಿದೆ. ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದರೆ, ಹನ್ನೆರಡನೇ ತರಗತಿಯ ಪರೀಕ್ಷೆಯು ಮುಂದೂಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಿಬಿಎಸ್ಇ ಪರೀಕ್ಷೆಗಳನ್ನು ರದ್ದು ಮಾಡಬೇಕು ಯಾ ಮುಂದೂಡಬೇಕೆಂದು ವಿವಿಧ ರಾಜ್ಯಗಳು ಕೇಂದ್ರವನ್ನು ವಿನಂತಿಸಿತ್ತು.   ಈ ಹಿನ್ನೆಲೆಯಲ್ಲಿ ಪ್ರಧಾನಿಯು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ, ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಂದಿನ ದಿನಾಂಕಗಳನ್ನು ಜೂನ್ ಒಂದರ ಬಳಿಕ ತಿಳಿಸಲಾಗುವುದೆಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.