ಕೋವಿಡ್ ಸಂಕಷ್ಟ: ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂ. ಪರಿಹಾರ ಘೋಷಿಸಿದ ನಟ ಯಶ್

ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಸಿನಿಮಾ ಗಣ್ಯರು ಒಬ್ಬೊಬ್ಬರಾಗಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದೀಗ ಕನ್ನಡದ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ಕುಟುಂಬದ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ತೆರೆ ಹಿಂದೆ ಅವಿರತವಾಗಿ ದುಡಿದ 3000ಕ್ಕೂ ಅಧಿಕ ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ. ನಗದು ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದಾಗಿ ಯಶ್ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಶ್, ಕಾಣದ ವೈರಸ್​​​ನಿಂದ ಕಳೆದೊಂದು … Read more

18 ವರ್ಷಗಳ ಸಿನಿ ಜರ್ನಿ, ಕೃತಜ್ಞತೆ ಸಲ್ಲಿಸಿದ ನಟ ಅಲ್ಲು ಅರ್ಜುನ್

ಹೈದರಾಬಾದ್ : ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಖ್ಯಾತಿಯ ಅಲ್ಲು ಅರ್ಜುನ್ ಚಿತ್ರರಂಗದ ಪ್ರವೇಶಿಸಿ 18 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಧನ್ಯವಾದಗಳು ಸಲ್ಲಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಎಲ್ಲಾ ಸಿನಿ ಪ್ರಿಯರಿಗೆ ಕೃತಜ್ಞತೆಗಳು ತಿಳಿಸಿದ್ದಾರೆ. “ನನ್ನ ಮೊದಲ ಚಿತ್ರ ಬಿಡುಗಡೆಯಾಗಿ 18 ವರ್ಷಗಳು ಕಳೆದಿವೆ. ನನ್ನ 18 ವರ್ಷದ ಸಿನೆಮಾ ಪಯಣದ ಭಾಗವಾಗಿರುವ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃದಯವು ಕೃತಜ್ಞತೆಯಿಂದ ತುಂಬಿದೆ. ಈ ವರ್ಷಗಳಲ್ಲಿ … Read more

66ನೇ ಫಿಲ್ಮ್ ಫೇರ್ ಪ್ರಶಸ್ತಿ ಪ್ರಕಟ: ತಾಪ್ಸಿ ಪನ್ನು ಅತ್ಯುತ್ತಮ ನಟಿ , ಇರ್ಫಾನ್ ಖಾನ್ ಅತ್ಯುತ್ತಮ ನಟ ಅವಾರ್ಡ್

ನವದೆಹಲಿ: ಫಿಲ್ಮ್‌ ಫೇರ್ ಪ್ರಶಸ್ತಿಗಳ 66ನೇ ಆವೃತ್ತಿಯು ಶನಿವಾರ ಸಂಜೆ ಮುಂಬೈನಲ್ಲಿ ನಡೆಯಿತು. ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಾಪ್ಸಿ ಪನ್ನು ‘ಥಪಡ್’ ಸಿನಿಮಾಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಹಾಗೂ ‘ಥಪಡ್’ ಅತ್ಯುತ್ತಮ ಕಥೆ, ಅತ್ಯುತ್ತಮ ಚಿತ್ರ,.ಅತ್ಯುತ್ತಮ ಸಂಕಲನ ಟ್ರೋಫಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ … Read more

67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಂಗನಾಗೆ ಅತ್ಯುತ್ತಮ ನಟಿ ಪ್ರಶಸ್ತಿ

ನವದೆಹಲಿ: 2020ನೇ ಸಾಲಿನ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು,ಮನೋಜ್ ಬಾಜಪೇಯಿ ಹಾಗೂ ತಮಿಳು ನಟ ಧನುಷ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಗೆದ್ದರೆ, ಅತ್ಯುತ್ತಮ ನಟಿ ಪ್ರಶಸ್ತಿಗೆ ಕಂಗನಾ ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಚಲನಚಿತ್ರ ಚಿತ್ರ ಪ್ರಶಸ್ತಿಯನ್ನು ದಿ.ಸುಶಾಂತ್ ಸಿಂಗ್ ರಜಪೂತ್ ಅವರು ನಟಿಸಿದ ‘ಚಿಚೋರ್’ ಚಿತ್ರ ಗೆದ್ದಿದೆ. ಇಂದು ನವದೆಹಲಿಯಲ್ಲಿ ಈ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಯಿತು. ದಿ. ಸುಶಾಂತ್ ಸಿಂಗ್ ರಜಪೂತ್ ಅವರ ‘ಚಿಚೋರ್’ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಎಂದು … Read more

ಬಾಲಿವುಡ್ ನಟಿ ಪೂನಂ ಪಾಂಡೆ ಬಂಧನ

  ಹೊಸದೆಹಲಿ(05/11/2020): ಗೋವಾದ ಚಪೋಲಿ ಅಣೆಕಟ್ಟು ಪ್ರದೇಶಕ್ಕೆ ಯಾವುದೇ ಅನುಮತಿ ಇಲ್ಲದೇ ಪ್ರವೇಶಿಸಿ, ಅಶ್ಲೀಲ ವಿಡಿಯೊ ಚಿತ್ರೀಕರಿಸಿದ ಆರೋಪದಡಿ ನಟಿ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಪೂನಂ ಪಾಂಡೆಗೆ ಚಿತ್ರೀಕರಣ ಮಾಡಲು ಅವಕಾಶ ನೀಡಿ, ಅಧಿಕಾರವನ್ನು ದುರ್ಬಳಕೆ ಮಾಡಿದ ಆರೋಪದಡಿ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನೂ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ದಕ್ಷಿಣ ಗೋವಾದ ಕನಕೋನ ಪಟ್ಟಣದ ಜನರು ನೀಡಿದ ದೂರು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.