ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಪೋಷಕರಿಗೆ ಫೀಸು ಕುರಿತು ಕಿರುಕುಳ ನೀಡುವ ಪ್ರಕರಣಗಳು ಕೇಳಿಬರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂಬುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯಾವುದೇ ಶಾಲೆಗಳು ವಿದ್ಯಾರ್ಥಿಗಳು … Read more

ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವು ದಿನಗಳಿಂದ ಭಾರಿ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೆ ನಾಯಕರನ್ನು ಸಿಎಂ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದೆ ಎಂದು ಬಿಜೆಪಿ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಮುಖ್ಯಮಂತ್ರಿ ಹುದ್ದೆ … Read more

ರಾಜ್ಯ ಸರ್ಕಾರ ದರ ಏರಿಕೆ, ಬಾಕಿ ವಸೂಲಿ ಮೂಲಕ ದೌರ್ಜನ್ಯ ನಡೆಸುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರ ವಿದ್ಯುತ್‌ ದರ ಏರಿಸಿದೆ. ಯೂನಿಟ್‌ ವಿದ್ಯುತ್‌ ಮೇಲೆ 30 ಪೈಸೆ ಏರಿಸಲಾಗಿದೆ. ಏ. 1ರಿಂದ ದರ ಪೂರ್ವಾನ್ವಯವೂ ಆಗಲಿದೆ. ಹಿಂಬಾಕಿಯನ್ನು ಅಕ್ಟೋಬರ್‌–ನವೆಂಬರ್‌ನಲ್ಲಿ ವಸೂಲಿ‌ ಮಾಡಲಾಗುತ್ತದೆ. ಕೊರೊನಾ ಕಾಲದಲ್ಲಿ ಹಲವು ರಾಜ್ಯಗಳು ವಿದ್ಯುತ್‌ ಬಿಲ್‌ ರದ್ದು ಮಾಡಿರುವಾಗ ರಾಜ್ಯ ಸರ್ಕಾರ ದರ ಏರಿಕೆ ಜೊತೆ ಬಾಕಿ ವಸೂಲಿಗೂ ನಿಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೋವಿಡ್‌ ಮತ್ತು ಲಾಕ್‌ಡೌನ್‌ಗಳಲ್ಲಿ ಜನ ಕಷ್ಟಪಟ್ಟು ಜೀವ ಉಳಿಸಿಕೊಂಡಿದ್ದಾರೆ. ತ್ರಾಸದ ಜೀವನ ನಡೆಸಿದ್ದಾರೆ. ಇನ್ನಷ್ಟೇ ದುಡಿದು ಜೀವನ ನಡೆಸಬೇಕಾದ … Read more

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಸ್ಥಳೀಯ ಭಾಷೆಗಳನ್ನು ಕೊಲ್ಲುವ ಕೇಂದ್ರದ ಅಜೆಂಡಾ ವಿರುದ್ಧ ನಮ್ಮ ಹೋರಾಟ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಕನ್ನಡಿಗರ ಭಾಷಾಭಿಮಾನವನ್ನು #Google, #amazon ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ,ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ … Read more

ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಲೂಟಿಯ ಬಗ್ಗೆ ತಾವು ತುಟಿ ಬಿಚ್ಚುತ್ತಿಲ್ಲವೇಕೆ? : ರಾಜ್ಯ ಕಾಂಗ್ರೆಸ್

ಬೆಂಗಳೂರು: ಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಿ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ಹಲವು ಬಿಜೆಪಿ ನಾಯಕರೇ ಆರೋಪಿಸಿರುವಾಗ ಕ್ರಮ ಕೈಗೊಳ್ಳದಿರುವುದೇಕೆ ಎಂದು ಬಿಜೆಪಿಯನ್ನು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ಬಿಜೆಪಿ ವಿರುದ್ಧ ಆರೋಪಿಸಿದೆ, ಬಿ.ವೈ.ವಿಜಯೇಂದ್ರ ಜಾರಿ ನಿರ್ದೇಶನಾಲಯದ ವಿಚಾರಣೆಗಾಗಿ ದೆಹಲಿಗೆ ಹೋಗಿದ್ದರು ಎಂದು ಸ್ವತಃ ಬಿಜೆಪಿ ಶಾಸಕ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಮಾರಿಷಸ್‌ನಲ್ಲಿ ಬಿ.ವೈ .ವಿಜಯೇಂದ್ರ ಅವರ ಅಕ್ರಮ ಸಂಪತ್ತಿದೆ, ಕಿಯಾ ಕಂಪೆನಿಯೊಂದಿಗೆ ಅಕ್ರಮ ವ್ಯವಹಾರ ನಡೆದಿದೆ, … Read more

ಕನ್ನಡ ಧ್ವಜವನ್ನು ಅಪಮಾನಿಸಿದ ‘ಅಮೆಜಾನ್‌’ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಬೇಕು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ @amazonಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸಿದ್ದಾರೆ. ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. @Google ನಂತರ ಈಗ @amazonನ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ … Read more

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ : ಇಂದು ಸಂಜೆ 5 ಗಂಟೆಗೆ ಯಡಿಯೂರಪ್ಪ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಜೂನ್ 7 ಕ್ಕೆ ಅಂತ್ಯವಾಗಲಿದೆ, ಜೂನ್ 7ರ ನಂತರ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಬಹುತೇಕ ಸಚಿವರು, ತಜ್ಞರು ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿಎಂ ಬಿಸಿ ಬಿ ಎಸ್ ವೈ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಜೂನ್ 7ರ ನಂತರ ಮತ್ತೆ 1 ವಾರ … Read more

ಕೋವಿಡ್ ಸಂಕಷ್ಟ: ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂ. ಪರಿಹಾರ ಘೋಷಿಸಿದ ನಟ ಯಶ್

ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಸಿನಿಮಾ ಗಣ್ಯರು ಒಬ್ಬೊಬ್ಬರಾಗಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದೀಗ ಕನ್ನಡದ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ಕುಟುಂಬದ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ತೆರೆ ಹಿಂದೆ ಅವಿರತವಾಗಿ ದುಡಿದ 3000ಕ್ಕೂ ಅಧಿಕ ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ. ನಗದು ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದಾಗಿ ಯಶ್ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಶ್, ಕಾಣದ ವೈರಸ್​​​ನಿಂದ ಕಳೆದೊಂದು … Read more

17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ?: ನಳೀನ್ ಕುಮಾರ್ ಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೆಜೆಪಿ ಪರ್ವದಲ್ಲಿ ಬಿ.ಎಸ್.ವೈ ಅವರನ್ನ ಹೇಗೆ ನಡೆಸಿಕೊಂಡಿರಿ, ಈಗಲೂ ಅದೇ ಮಾದರಿಯಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂಬುದನ್ನ ಹೇಳಬೇಕೆ? 17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ, ಹೀಗಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಮಾಡಿತ್ತು ಎಂದು ನಳಿನ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು, ಇದಕ್ಕೆ … Read more