ಭ್ರಷ್ಟಾಚಾರ ಆರೋಪ : ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌‌ ರಾಜೀನಾಮೆ

ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌‌ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ತಿಂಗಳು ಪರಮ್‌ ಬೀರ್ ಸಿಂಗ್‌ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಗೃಹಸಚಿವರು 100 ಕೋಟಿ ರುಪಾಯಿ ಲಂಚ ಸಂಗ್ರಹಿಸುವ ಗುರಿ ಹೊಂದಿದ್ದರು ಎಂದು ಆರೋಪಿಸಿದ್ದರು‌. ಈ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 15 ದಿನಗಳ ಒಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್‌ ಸೋಮವಾರ ಸೂಚನೆ ನೀಡಿದೆ.

ದೇಶಮುಖ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ್ದು, ಚರ್ಚೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಸಹ ಶರದ್‌ ಪವಾರ್‌ ಅವರನ್ನು ಭೇಟಿಯಾಗಿದ್ದು, ನಂತರ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಸಿಎಂ ಉದ್ದವ್‌ ಠಾಕ್ರೆ ಅವರನ್ನು ಭೇಟಿಯಾದ ಅನಿಲ್‌ ದೇಶ್‌ಮುಖ್‌, ಠಾಕ್ರೆ ಅವರಿಗೆ ಅಧಿಕೃತ ರಾಜೀನಾಮೆ ಸಲ್ಲಿಸಿದ್ದಾರೆ.

ಪೊಲೀಸರೇ ನನ್ನ ತಂದೆಯನ್ನು ಕೊಂದರು! ಮುಖ್ಯಪೇದೆ ನ್ಯಾಯಕ್ಕಾಗಿ ಅಳಲು

police

ವಿಜಯಪುರ(05-11-2020): ಪೊಲೀಸರೇ ನನ್ನ ತಂದೆಯನ್ನು ಕೊಲೆ ಮಾಡಿದ್ದಾರೆಂದು ಪೊಲೀಸ್ ಮುಖ್ಯಪೇದೆಯೋರ್ವರು ಹೇಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಪೇದೆ, ತಂದೆ ಹನಮಂತರಾಯ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ. ನಾನೂ ಒಬ್ಬ ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಆಗಿದ್ದರೂ ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಎಂದು ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ನಿವಾಸಿ ಬಸವರಾಜ ಪಾಟೀಲ ವಿಡಿಯೋದಲ್ಲಿ ಹೇಳಿದ್ದು, ತಂದೆ ಹನಮಂತರಾಯ ಅವರಿಗೆ ದಾಯಾದಿಗಳೊಂದಿಗೆ ಜಮೀನು … Read more

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ಅರ್ನಬ್ ಬಂಧನವನ್ನು ಸಮರ್ಥಿಸುತ್ತಾ ಮಹಾರಾಷ್ಟ್ರದ ಗೃಹಮಂತ್ರಿಯ ಹೇಳಿಕೆ

  ಮುಂಬೈ(04/11/2020): ‘ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ’ ಎಂದು ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಸಮರ್ಥಿಸುತ್ತಾ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್ ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಮಹಾರಾಷ್ಟ್ರ ಪೊಲೀಸರು ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದಾರೆ’ ಎಂದಿದ್ದಾರೆ. ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಇಂದು … Read more