ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

sharath bachegawda

ಬೆಂಗಳೂರು(18-02-2021): ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆ.26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರರಾಗಿರುವ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಪಿಸಿಸಿ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಯಾಗಲಿದ್ದಾರೆ. ಶರತ್ ಬಚ್ಚೇಗೌಡ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಸೇರ್ಪಡೆಗೊಂಡಿದ್ದ ಎಂಟಿಬಿ ನಾಗರಾಜ್ ವಿರುದ್ಧ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದರು.    

ಗ್ರಾ.ಪಂಚಾಯತ್ ಸಭೆ ವೇಳೆ ಮಾರಕಾಸ್ತ್ರಗಳಿಂದ ದಾಳಿ| ಇಬ್ಬರಿಗೆ ಗಾಯ  

ಬೆಂಗಳೂರು(11-02-2021): ಗ್ರಾ. ಪಂಚಾಯತ್ ಸಭೆಗೆ ಕರೆದಿಲ್ಲ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಆತನ ಬೆಂಬಲಿಗರು ಪಂಚಾಯತ್ ವಾಟರ್ ಮ್ಯಾನ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಹೊಸಕೋಟೆ ತಾಲೂಕು ಬೈಲನರಸಾಪುರದಲ್ಲಿ ನಡೆದಿದೆ. ವಾಟರ್ ಮ್ಯಾನ್ ಪಾಜೀಲ್ ಅಹ್ಮದ್ ಮತ್ತು ಆತನ ಸಹೋದರನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ಸಭೆಗೆ ಕರೆಯಲಿಲ್ಲ ಎಂದು ರೊಚ್ಚಿಗೆದ್ದು ಕೆಲವರು ಸಭೆಯಲ್ಲಿ ಗದ್ದಲ ಮಾಡಿದ್ದಾರೆ. ಈ ವೇಳೆ ಪಿಡಿಒ ಗಲಾಟೆ ಮಾಡುವವರನ್ನು ಹೊರಗೆ ಕಳುಹಿಸಿದ್ದಾರೆ. ಇದಾದ ಬಳಿಕ ನೀರಿನ … Read more