ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಸುಹಾನಾ ಮೃತ್ಯು|ಸುಹಾನಳನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನಿಸಲಾಗಿತ್ತು!

suhana death

ಬೆಂಗಳೂರು(14-02-2021): ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಪುತ್ತೂರು ಮೂಲದ ಸುಹಾನಾ ಇಂದು ಮೃತಪಟ್ಟಿದ್ದಾರೆ. ಸುಹಾನಾ ಗಂಭೀರ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ವಿಶೇಷ ಝೀರೋ ಟ್ರಾಫಿಕ್ ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾರುಣ್ಯ ನಿಧಿ ಕರ್ನಾಟಕ ಚಾರಿಟೇಬಲ್ ಟ್ರಸ್ಟ್ (ರಿ) ಸುಹಾನಾಳ ಚಿಕಿತ್ಸೆಯ ಜವಾಬ್ಧಾರಿಯನ್ನು ಕೂಡ ತೆಗೆದುಕೊಂಡಿತ್ತು. ಸುಹಾನಳಿಗೆ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಕಾಲಾವಕಾಶವನ್ನು ಕೂಡ ನೀಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪೊಲೀಯೋ ಲಸಿಕೆ ಎಂದು ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ಆರೋಗ್ಯ ಸಿಬ್ಬಂದಿಗಳು|12 ಮಕ್ಕಳು ಅಸ್ವಸ್ಥ

polio

ಮಹಾರಾಷ್ಟ್ರ(02-02-2021): ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.  ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಕಾರ್ಯಕರ್ತ, ವೈದ್ಯ, ಮತ್ತು ಆಶಾ ಕಾರ್ಯಕರ್ತ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.    

ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು

gangooli

ಕೊಲ್ಕತ್ತಾ (27-01-2021): ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆನೋವು ತೀವ್ರವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಗಂಗೂಲಿ ಅವರನ್ನು ದಾಖಲಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದ ಮೂಲಗಳು ತಿಳಿಸಿದೆ ಎಂದು ಸೌಮ್ಯ ದಾಸ್ ಎಂಬವರು ಟ್ವೀಟ್ ಮಾಡಿದ್ದಾರೆ. ಎದೆನೋವು ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದುಕೊಂಡು ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಆತಂಕ  ಉಂಟು ಮಾಡಿದೆ.    

ವಿವಾಹ ನಿಶ್ಚಿತವಾಗಿದ್ದ ಯುವಕನ ಮರ್ಮಾಂಗ ಕತ್ತರಿಸಿದ ಸ್ನೇಹಿತ!

crime news

ಲಖನೌ (05-12-2020): ವಿವಾಹ ನಿಶ್ಚಿತವಾಗಿದ್ದ ಯುವಕನ ಮರ್ಮಾಂಗವನ್ನು ದುಷ್ಕರ್ಮಿಗಳು ಕತ್ತರಿಸಿ ಹಾಕಿರುವ ಘಟನೆ ಉತ್ತರ ಪ್ರದೇಶದ ಕೊಟ್ವಾಲಿ ನಗರದ ಇಡ್ಗಾ ಪ್ರದೇಶದಲ್ಲಿ ನಡೆದಿದೆ. ಸಮೀರ್​ ಎಂಬಾತನ ಮರ್ಮಾಂಗವನ್ನು ಕತ್ತರಿಸಲಾಗಿದೆ. ಈತನಿಗೆ ವಿವಾಹ ನಿಗದಿಯಾಗಿತ್ತು. ಈತ ಪರ್ವೇಜ್ ಎಂಬಾತನಿಂದ ಒಂದು ಲಕ್ಷ ರೂಪಾಯಿ ಸಾಲ ಪಡೆದಿದ್ದ. ಈ ವಿಚಾರವಾಗಿ ಆಗಾಗ ಇಬ್ಬರ ನಡುವೆ ಜಗಳವಾಗುತ್ತಿತ್ತು. ಮದುವೆಗೆ ಮೂರು ದಿನದ ಮೊದಲು ಪರ್ವೇಜ್​ ಗೆಳೆಯರನ್ನು ಕಳುಹಿಸಿ ಹಣತರುವಂತೆ ಹೇಳಿದ್ದ, ಆದರೆ ಸಮೀರ್ ಇಲ್ಲ ಎಂದು ಹೇಳಿದ ಕಾರಣಕ್ಕೆ ಆತನನ್ನು ಕಾಡಿಗೆ … Read more

ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಶಾಸಕಿ|  ಪ್ರಜ್ಞಾಹೀನ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ!

Poongothai Aladi

ತಿರುನೆಲ್ವೇಲಿ(20-11-2020): ಡಿಎಂಕೆ ಶಾಸಕಿ, ಮಾಜಿ ಸಚಿವೆ ಪೂಂಗೋಥೈ ಅಲ್ಲಾಡಿ ಅರುಣಾ ಅವರು “ನಿದ್ರೆ ಮಾತ್ರೆಗಳನ್ನು” ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನ ಶಿಫಾ ಆಸ್ಪತ್ರೆಗೆ ಶಾಸಕಿಯನ್ನು ದಾಖಲಿಸಲಾಗಿದೆ. ಪ್ರಸ್ತುತ ಅವರಿಗೆ ಪ್ರಜ್ಞೆ ಬಂದಿದೆ. ಎಚ್ಚರವಾಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮೊಹಮ್ಮದ್ ಅರಾಫತ್ ಈ ಕುರಿತು ಮಾತನಾಡಿದ್ದು, ಪ್ರಸ್ತುತ ಶಾಸಕಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವೈದ್ಯರ ತಂಡದಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಈ … Read more

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ahmad patel

ಗುರುಗ್ರಾಮ್(16-11-2020): ಕಾಂಗ್ರೆಸ್ ನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಗುರುಗ್ರಾಮ್ ನ ಮೆಡಂತ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಅಕ್ಟೋಬರ್ 1 ರಂದು ಅಹ್ಮದ್ ಪಟೇಲ್ ಕರೋನವೈರಸ್ ಗೆ ಧನಾತ್ಮಕ ಪರೀಕ್ಷೆ ಮಾಡಿಸಿದ್ದರು. ಆ ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ. ಇನ್ನು ಅಹ್ಮದ್ ಪಟೇಲ್ ಶೀಘ್ರ ಚೇತರಿಕೆಗೆ ಆನಂದ್ ಶರ್ಮಾ ಮತ್ತು ಶಶಿ ತರೂರ್ ಸೇರಿದಂತೆ ಹಲವಾರು ಹಿರಿಯ … Read more

ಪಿಎಸ್ ಐಗೆ ಚೂರಿಯಿಂದ ಇರಿದ ರೌಡಿ ಶೀಟರ್ ಮೇಲೆ ಫೈರಿಂಗ್

police

ಹಾಸನ(04-11-2020): ಪಿಎಸ್‌ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ರೌಡಿ ಶೀಟರ್ ಸುನಿಲ್  ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುನಿಲ್ ಗೆ ಹಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.ಅರೆಕಲ್ಲು ಹೊಸಹಳ್ಳಿಯ ಸುನಿಲ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ತೆರಳಿದ ಪಿಎಸ್‌ಐ ಮೇಲೆ ಸುನಿಲ್ ಚಾಕುವಿನಿಂದ ಹಲ್ಲೆ ಮಾಡಿದ್ದ. ಪಿಎಸ್ ಐ ಬಸವರಾಜ್ ಅವರ ಹೊಟ್ಟೆ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಾಂತರ ವೃತ್ತದ ಸಿಪಿಐ ಪಿ.ಸುರೇಶ್ … Read more