ಕನ್ನಡದಲ್ಲಿ ಐಬಿಪಿಎಸ್‌ ಪರೀಕ್ಷೆ : ರಾಜ್ಯದ ಬ್ಯಾಂಕ್ ಗಳಲ್ಲಿ ಕನ್ನಡಿಗರಿಗೆ ಹೆಚ್ಚು ಅವಕಾಶ ನೀಡುವಂತೆ ಎಚ್. ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ಎಚ್.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ … Read more