ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಐಸಿಯುನಲ್ಲಿದ್ದ 6 ಮಂದಿ ಸಾವು, ಹಲವರು ಗಂಭೀರ

covid hospital

ರಾಜ್ ಕೋಟ್(27-11-2020): ಪ್ರಧಾನಿ ಮೋದಿ ತವರು ಗುಜರಾತ್ ನಲ್ಲಿ ದುರಂತವೊಂದು ಸಂಭವಿಸಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡಕ್ಕೆ 6 ಮಂದಿ ಬಲಿಯಾಗಿದ್ದಾರೆ. ರಾಜ್ ಕೋಟ್ ನ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.  ಘಟನೆಯ ಸಮಯದಲ್ಲಿ ಐಸಿಯು ಒಳಗೆ 11 ರೋಗಿಗಳು ಇದ್ದರು. ರಾಜ್‌ಕೋಟ್ ಅಗ್ನಿಶಾಮಕ ಇಲಾಖೆಯು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಎಲ್ಲಾ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.