ಹಿಂದೂಗಳಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪಾಕ್ ಪ್ರಧಾನಿ

ಇಸ್ಲಾಮಾಬಾದ್ ‌: ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹಿಂದೂಗಳಿಗೆ ಹೋಳಿಯ ಬಣ್ಣದ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಹೋಳಿ ಹಬ್ಬವನ್ನು ಪಾಕಿಸ್ತಾನದಲ್ಲಿ ಭಾನುವಾರ ಮತ್ತು ಸೋಮವಾರ ಆಚರಿಸಲಾಗುತ್ತಿದೆ.

ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ “ನಮ್ಮೆಲ್ಲಾ ಹಿಂದೂ ಸಮುದಾಯದ ಬಾಂಧವರಿಗೆ ಹೋಳಿ ಹಾಗೂ ಬಣ್ಣದ ಹಬ್ಬದ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನ ಸಂಸತ್ತಿನ ಸ್ಪೀಕರ್ ಅಸಾದ್ ಖೈಸರ್ ಸೇರಿದಂತೆ ಹಲವು ನಾಯಕರು ಎಲ್ಲಾ ಸಂಸದರಿಗೆ ಹಾಗೂ ಹಿಂದೂಗಳಿಗೆ ಹೋಳಿ ಹಬ್ಬದ ಶುಭಾಶಯಗಳು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರು ತಮ್ಮ ಧಾರ್ಮಿಕ ಹಬ್ಬಗಳನ್ನು ಬಹಿರಂಗವಾಗಿ ಆಚರಿಸಬಹುದು ಎಂದು ಅವರು ಸ್ಪೀಕರ್ ಖೈಸರ್ ಟ್ವೀಟ್ ಮಾಡಿದ್ದಾರೆ.

ಅಂಕಿ -ಅಂಶಗಳ ಪ್ರಕಾರ ಪಾಕಿಸ್ತಾನದಲ್ಲಿ 75 ಲಕ್ಷ ಹಿಂದೂಗಳು ನೆಲೆಸಿದ್ದಾರೆ. ಪಾಕ್ ನಲ್ಲಿ ಅತ್ಯಂತ ದೊಡ್ಡ ಅಲ್ಪಸಂಖ್ಯಾತ ಹಿಂದೂ ಸಮುದಾಯ ಇದೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾಷಣ ಮಾಡುವಾಗ ಭಾರತದ ಪ್ರತಿನಿಧಿ ಸಭಾತ್ಯಾಗ ಮಾಡಿದ್ದಾರೆ.

ನ್ಯೂಯಾರ್ಕ್‌(28-09-2020):ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಇಮ್ರಾನ್ ಖಾನ್ ಭಾಷಣ ಮಾಡುತ್ತಿದ್ದರು. ವಿಶ್ವಸಂಸ್ಥೆಯಲ್ಲಿ ಭಾರತದ ‘ಪರ್ಮನೆಂಟ್ ಮಿಷನ್’ನ ಕಾರ್ಯದರ್ಶಿ ಮಿಜಿಟೊ ವಿನಿಟೊ ಸಭೆಯಿಂದ ಹೊರ ನಡೆದರು. ಅವರು ಸಭಾತ್ಯಾಗ ಮಾಡುತ್ತಿರುವ ವಿಡಿಯೊವನ್ನು ಎಎನ್‌ಐ ಟ್ವೀಟ್ ಮಾಡಿದೆ. ಇಮ್ರಾನ್ ಭಾಷಣದಲ್ಲಿ ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದಲ್ಲದೆ, ಜಮ್ಮು-ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದರು. ಇಮ್ರಾನ್ ಭಾಷಣದಲ್ಲಿ ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದಲ್ಲದೆ, ಜಮ್ಮು-ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದರು.