ಬೆಂಗಳೂರಿನ ಗುಂಡಿ ಮುಚ್ಚಲು ಆಗದಿದ್ದರೆ ನನಗೆ ಜವಾಬ್ದಾರಿ ಕೊಡಿ, ನಾನು ಮಾಡಿ ತೋರಿಸುತ್ತೇನೆ: ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಸವಾಲ್

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಹೆಚ್ಚಾಗಿದ್ದು, ಜನ ಸಾಯುತ್ತಿದ್ದಾರೆ, ಗಾಯಗೊಳ್ಳುತ್ತಿದ್ದಾರೆ. ನಗರದ ರಸ್ತೆ ಸ್ಥಿತಿ ಕಂಡು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಹೈಕೋರ್ಟ್ ಚೀಮಾರಿ ಹಾಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಾಗಲೂ ರಸ್ತೆ ಗುಂಡಿ ಬೀಳುತ್ತಿದ್ದವು, ಆದರೆ ನಾವು ಆಗಿಂದಾಗ್ಗೆ ಗುಂಡಿಗಳನ್ನು ಮುಚ್ಚಿಸುತ್ತಿದ್ದೆವು. ಕಳೆದ ಎರಡೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈಗ ಬೆಂಗಳೂರು ನಗರದಲ್ಲಿಯೇ 7 ಮಂದಿ ಸಚಿವರಿದ್ದಾರೆ. ಮುಖ್ಯಮಂತ್ರಿ ಬಳಿಯೇ ಬೆಂಗಳೂರು ನಗರ ಉಸ್ತುವಾರಿ ಖಾತೆ ಇದೆ. ನಾನು ಉಸ್ತುವಾರಿಯಾಗಿದ್ದಾಗ ವಾರಕ್ಕೆ 3 ಬಾರಿ ಸಿಟಿ ರೌಂಡ್ಸ್ ಮಾಡುತ್ತಿದ್ದೆ. ಆದರೆ ಇವರೇನು ಮಾಡುತ್ತಿದ್ದಾರೆ, ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಆಗಲಿಲ್ಲ. ನನಗೆ ಜವಾಬ್ದಾರಿ ಕೊಟ್ಟು ನೋಡಿ, ನಾನು ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.

2019-20ನೇ ಸಾಲಿನಲ್ಲಿ ಬಿಬಿಎಂಪಿಯ 198 ವಾರ್ಡ್‌ಗಳಿಗೆ ನಯಾ ಪೈಸೆ ಅನುದಾನ ಕೊಟ್ಟಿಲ್ಲ. 2020-21ರಲ್ಲಿ ಪ್ರತಿ ವಾರ್ಡಿಗೆ ಘೋಷಿಸಿದ ₹60 ಲಕ್ಷ ಇನ್ನೂ ಬಿಡುಗಡೆ ಮಾಡಿಲ್ಲ. ಅನುದಾನ ನೀಡದೇ ರಸ್ತೆ ಗುಂಡಿ ಮುಚ್ಚಿ ಎಂದರೆ ಹೇಗೆ ಮುಚ್ಚಲು ಸಾಧ್ಯ? ಎಂದಿದ್ದಾರೆ.

ಇತ್ತೀಚೆಗೆ ಅತಿಯಾದ ಮಳೆ ಸುರಿದಾಗ ಬೆಂಗಳೂರಿನ ಸಚಿವರುಗಳು ತಮ್ಮ ಕ್ಷೇತ್ರ ಬಿಟ್ಟು ಹೊರಬರಲಿಲ್ಲ.ಮುಖ್ಯಮಂತ್ರಿಗಳು ಮಳೆ ಹಾನಿ ವೀಕ್ಷಣೆಗೆ ಹೋಗಿ, ನೆಪಮಾತ್ರಕ್ಕೆ ಸಿಟಿ ರೌಂಡ್ಸ್ ಮುಗಿಸುತ್ತಾರೆ. ಈ ರೀತಿ ಬೇಜವಾಬ್ದಾರಿಯಾಗಿ ನಡೆದುಕೊಂಡರೆ ಬೆಂಗಳೂರಿನ ರಸ್ತೆಗಳು ಗುಂಡಿ ಬೀಳದೇ ಇರುತ್ತವಾ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿದ್ದಾರೆ.

ಹಸುಗಳ ಬಗ್ಗೆ ಪ್ರೀತಿಯಿದ್ದರೆ ಮೊದಲು ಗೋಮಾಂಸ ರಫ್ತನ್ನು ನಿಲ್ಲಿಸಲಿ! :ಬಿಜೆಪಿಗೆ ಎಚ್‌.ಸಿ.ಮಹಾದೇವಪ್ಪ ತಿರುಗೇಟು

ಬೆಂಗಳೂರು: ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಏನೂ ಬೇಡ ಎಂಬ ಪರಿಸ್ಥಿತಿಗೆ ಜನ ಸಾಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ ಬೆಳವಣಿಗೆ. ಇವರಿಗೆ ನಿಜವಾಗಲೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ! ಎಂದು ಬಿಜೆಪಿಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ.ಎಚ್.ಸಿ‌.ಮಹಾದೇವಪ್ಪಾ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, “ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋ ಪೂಜೆ ಮಾಡಬೇಕೆಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು ದೀಪಾವಳಿಯ ವೇಳೆ ಸಹಜವಾಗಿ ನಡೆಯುವ ಗೋ ಪೂಜೆ ಆಚರಣೆಗಳಿಗೂ ತನ್ನ ರಾಜಕೀಯ ಬಣ್ಣ ಬಳಿದಿದೆ” ಎಂದಿದ್ದಾರೆ.

ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡು ಕೊಂಡಿರುವ ಎಲ್ಲಾ ರೈತರೂ ಕೂಡಾ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಚಂದದ ಅಲಂಕಾರ ಮಾಡಿ, ನಂತರ ಕಿಚ್ಚು ಹಾಯಿಸುವಂತಹ ಆಚರಣೆ ಇದೆ. ಈ ಆಚರಣೆಯನ್ನು ಬಿಜೆಪಿಗರೇನು ರೈತರಿಗೆ ಹೇಳಿಕೊಟ್ಟದ್ದಲ್ಲ, ಬದಲಿಗೆ ರೈತರ ಬದುಕಿನ ಕ್ರಮದಲ್ಲೇ ಅದು ಬಹು ಕಾಲದಿಂದಲೂ ಇರುವಂತದ್ದು ಎಂದು ಪ್ರತಿಕ್ರಿಯಿಸಿದ್ದಾರೆ.

ನಂತರ ಈ ದೀಪಾವಳಿಗೂ ಮುನ್ನ ಹೈನುಗಾರಿಕೆಯನ್ನೇ ಉಪ ಕಸುಬಾಗಿಸಿಕೊಂಡಿರುವ ನಮ್ಮೆಲ್ಲಾ ರೈತರ ಕುಟುಂಬಗಳಿಗೆ ತಲಾ 2 ಹಸುಗಳನ್ನು ನೀಡುವ ಮೂಲಕ ಹಸುವಿನ ಮತ್ತು ರೈತರ ಬದುಕಿಗೆ ನೆರವಾಗಲಿ. ಇನ್ನು ರಸಗೊಬ್ಬರದ ಬೆಲೆ ಗಗನಕ್ಕೆ ಏರಿದ್ದು ರೈತರು ಕಣ್ಣು ಬಾಯಿ ಬಿಡುತ್ತಿದ್ದಾರೆ. ಈ ನಿಟ್ಟಿನಲ್ಲಿ ದೇವಾಲಯದಲ್ಲಿ ಗೋ ಪೂಜೆಯ ಹೆಸರಲ್ಲಿ ನಾಟಕ ಮಾಡದೇ ರಸಗೊಬ್ಬರದ ಬೆಲೆಯನ್ನು ಇಳಿಕೆ ಮಾಡಲಿ ಎಂದು ಆಗ್ರಹಿಸುವ ಮೂಲಕ ಸವಾಲು ಹಾಕಿದ್ದಾರೆ.

ಅತಿ ಹೆಚ್ಚು ಗೋಮಾಂಸವನ್ನು ರಫ್ತು ಮಾಡುತ್ತಲೇ ಗೋ ಪೂಜೆಯ ನಾಟಕವಾಡುವ ಬಿಜೆಪಿಗರು ರೈತರ ಪಾಲಿಗೆ ಮತ್ತು ರೈತರ ಬದುಕಿನ ಅವಿಭಾಜ್ಯ ಅಂಗವೇ ಆಗಿರುವ ಎಂದೆಂದಿಗೂ ಹಸುಗಳ ಪಾಲಿಗೆ ಮಾರಕವಾಗಿದ್ದಾರೆ ಎಂಬುದು ಸತ್ಯವಾದ ಸಂಗತಿ! ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಅವರಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ, ಐದು ವರ್ಷದ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೇಳುತ್ತಿದ್ದೇವೆ : ಸಿದ್ದರಾಮಯ್ಯ

ಹಾನಗಲ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡೋಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಅವರು ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಹಾನಗಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಪರವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದರು. 2013 … Read more

ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ, ಲಿಂಗಾಯತ ವಿರೋಧಿ ಸಿದ್ದರಾಮಯ್ಯನವರ ಗುರಿ : ಬಿಜೆಪಿ ಆಕ್ರೋಶ

ಬೆಂಗಳೂರು: ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

“ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು” ಎಂದು ಟ್ವೀಟ್ ಮಾಡಿದ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ.

ಈ ಕುರಿತು #ಲಿಂಗಾಯತವಿರೋಧಿಸಿದ್ದರಾಮಯ್ಯ ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡಿದ ಬಿಜೆಪಿ, ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ ಎಂದು ತಿರುಗೇಟು ನೀಡಿದೆ.

ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ  ನಿಮ್ಮ ರಾಜಕೀಯ ಧರ್ಮ, ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ. ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?

ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ “ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ” ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ? ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ? ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ.

 

ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ರಾಜ್ಯ ಬಿಜೆಪಿ ಘಟಕ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಸಮರ ಮುಂದುವರಿಸಿದೆ.

ಹೌದು, ನಾನು ಜಾತಿವಾದಿ.. ಏನೀಗ? : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಎಂದು ಪ್ರಶ್ನಿಸಿದ್ದಾರೆ.

ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ,
ನಿಮ್ಮ‌ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ?

 

ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.

ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವ ಕಾಂಗ್ರೆಸ್, ಬಿಜೆಪಿಯ ಹುನ್ನಾರದಲ್ಲಿ ಜಮೀರ್ ಅಹ್ಮದ್ ಪಾಲುದಾರರು: ಶ್ರೀನಾಥ್ ಪೂಜಾರಿ ಆರೋಪ

ಸಿಂದಗಿ : ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವ ಬಿಜೆಪಿ, ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಮಾಜಿ ಸಚಿವ ಜಮೀರ್‌ಅಹ್ಮದ್ ಖಾನ್ ಅವರನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ, ಜಮೀರ್‌ಅಹ್ಮದ್ ಖಾನ್ ಹೆಗಲಿಗೆ ಬಂದೂಕು ಇರಿಸಿ ಸಿಂದಗಿ ಭಾಗದಲ್ಲಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಹೆಣೆಯಲಾಗಿದೆ, ಜಮೀರ್ ಅಹ್ಮದ್ ಈ ಹುನ್ನಾರದ ಪಾಲುದಾರರಾಗಬಾರದು ಎಂದು ಯುವ ಧುರೀಣ ಹಾಗೂ ನ್ಯಾಯವಾದಿ ಶ್ರೀನಾಥ ಪೂಜಾರಿ ಆರೋಪಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನೇ ಸೋಲಿಸಲು ಕಾಂಗ್ರೆಸ್ ಶಾಸಕ ಜಮೀರ್‌ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ದಾಳವಾಗಿ ಬಳಸಿಕೊಳ್ಳುತ್ತಿದೆ. ಮಾಜಿ … Read more

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ : ರಾಜ್ಯ ಬಿಜೆಪಿ ಟ್ವೀಟ್

ಬೆಂಗಳೂರು: ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿದ ಬಿಜೆಪಿ, ‘ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?’ ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ ಎಂದು ಕಿಡಿಕಾರಿದೆ.

ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ. ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು ಎಂದು ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯನವರೇ, ಇದು ಸಮಾಜ ವಿಭಜನೆಯಲ್ಲವೇ ? ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ. ಅಲ್ಪಸಂಖ್ಯಾತ ಸಮುದಾಯದ ಪತ್ರಕರ್ತರಿಗೆ ಮಾತ್ರ ಮಾಧ್ಯಮ ಕಿಟ್ ಒದಗಿಸಲು ಆದೇಶ. ಅಲ್ಪಸಂಖ್ಯಾತರ ಒಡೆತನದ ಪತ್ರಿಕೆಗಳಿಗೆ ಜಾಹಿರಾತು ನೀಡಬೇಕು ಎಂದು ಸುತ್ತೋಲೆ. ಇವೆಲ್ಲ ನಿಮ್ಮ ಸಾಧನೆಯಲ್ವೇ ಸಿದ್ದರಾಮಯ್ಯ? ಎಂದು #ಜಾತಿವಿಭಜಕಸಿದ್ಧರಾಮಯ್ಯ ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದೆ.

ಬಿಜೆಪಿಯವರು ನಿರ್ದಯಿಗಳು ನಾವು ಕೊಟ್ಟ ಅಕ್ಕಿಯನ್ನು ಕಸಿದುಕೊಳ್ಳಲು ಹೊರಟಿದ್ದಾರೆ: ಸಿಎಂಗೆ ಓಪನ್ ಚಾಲೆಂಜ್ ಮಾಡಿ ಚರ್ಚೆಗೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ಎರಡೂ ಕಾಲು ವರ್ಷಗಳಲ್ಲಿ ಬಿಜೆಪಿ ಏನೆಲ್ಲಾ ಕೆಲಸ ಮಾಡಿದೆ ಎಂದು ಪಟ್ಟಿಕೊಡಲಿ, ಐದು ವರ್ಷದ ನನ್ನ ಆಡಳಿತದಲ್ಲಿ ನಾನು ಯಾವೆಲ್ಲಾ ಯೋಜನೆ ಜಾರಿ ಮಾಡಿದ್ದೆ ಎಂದು ಪಟ್ಟಿ ಕೊಡುತ್ತೇನೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆಯಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ನಮ್ಮ ಸರ್ಕಾರದ ಯಾವ ಭಾಗ್ಯ ಯಾರಿಗೆ ಮುಟ್ಟಿದೆ ಎಂಬ ಲೆಕ್ಕ ಬೇಕಾ ಬೊಮ್ಮಾಯಿಯವರೇ? ಅಕ್ಕಿ ಪಡೆದ 1.10 ಕೋಟಿ ಕುಟುಂಬಗಳ 4 ಕೋಟಿ ಬಡವರ ಮನೆಗೆ … Read more

ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು : ರಾಜ್ಯ ಬಿಜೆಪಿ

ಬೆಂಗಳೂರು: ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಎಂದು ರಾಜ್ಯ ಬಿಜೆಪಿ ಸಿದ್ಧರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ “ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ?” ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನಿಸಿದೆ.

ಅಧಿಕಾರಾವಧಿಯ ಕೊನೆಯಲ್ಲಿ “ಮುಖ್ಯಮಂತ್ರಿ 1 ಲಕ್ಷ ಮನೆ” ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ಅವರೇ, ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು. ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದೆ.

ಕೇಸರಿ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ?: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ರಾಜ್ಯ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಡಾ.ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಸಚಿವ ಕೆ.ಸುಧಾಕರ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವ ಡಾ‌‌.ಸುಧಾಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ … Read more