ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ ಮಹಿಳಾ ಐಪಿಎಸ್ ಅಧಿಕಾರಿ

varthika katyar

ಬೆಂಗಳೂರು(06-02-2021):  ಮಹಿಳಾ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಪತಿ ಹಾಗೂ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ ಎಸ್ ಅಧಿಕಾರಿ ನಿತಿನ್ ಸುಭಾಷ್ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ನಿತಿನ್ ಸೇರಿದಂತೆ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.  ವರ್ತಿಕಾ ಅವರಿಗೆ 2011ರಲ್ಲಿ ನಿತಿನ್ ಜೊತೆ ಮದುವೆಯಾಗಿತ್ತು. ಪತಿ ವರದಕ್ಷಿಣೆಗಾಗಿ ಕಿರುಕುಳ ಮತ್ತು ದೈಹಿಕ ದೌರ್ಜನ್ಯವನ್ನೂ ನೀಡುತ್ತಿದ್ದಾರೆ … Read more

ಪತ್ನಿಯನ್ನು ನೆಲದ ಮೇಲೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದ ಡಿಜಿಪಿ| ಅಮಾನತನ್ನುಎತ್ತಿಹಿಡಿದ ಗೃಹಸಚಿವಾಲಯ

ips officer

ಭೋಪಾಲ್(30-10- 2020): ಒಂದು ತಿಂಗಳ ಹಿಂದೆ ಮಧ್ಯಪ್ರದೇಶದ ಹಿರಿಯ ಐಪಿಎಸ್ ಅಧಿಕಾರಿ ಪುರುಷೋತ್ತಂ ಶರ್ಮಾ ಅವರು ಪತ್ನಿಯನ್ನು ಥಳಿಸಿ ಹಲ್ಲೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಡಿಯೋ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ವೈರಲ್ ಆಗಿತ್ತು. ಈಗ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಅವರ ಅಮಾನತು ಎತ್ತಿಹಿಡಿದಿದೆ ಮತ್ತು ನವೆಂಬರ್ 27 ರೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಿಶೇಷವೆಂದರೆ, ಮಧ್ಯಪ್ರದೇಶ ರಾಜ್ಯ ಸರ್ಕಾರವು ಶರ್ಮಾ ಅವರನ್ನು ವಿಶೇಷ ನಿರ್ದೇಶಕ-ಜನರಲ್ ಹುದ್ದೆಯಿಂದ ಸೆಪ್ಟೆಂಬರ್ 29 … Read more

“ನನ್ನನ್ನು ಕಡೆಗಣಿಸಿ, ಕಿರಿಯರಿಗೆ ಭಡ್ತಿ ನೀಡಿದ್ದಾರೆ”- ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ರಾಜೀನಾಮೆ

ravindranth ips

ಬೆಂಗಳೂರು(29-10-2020): ಭಡ್ತಿ ನೀಡಿಲ್ಲ ಎಂದು ಅಸಮಾಧಾನಗೊಂಡು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿತ್ತು. ಅರಣ್ಯ ಇಲಾಖೆಯ ಎಡಿಜಿಪಿಯಾಗಿರುವ ರವೀಂದ್ರನಾಥ್, ತನಗಿಂತ ಕಿರಿಯ ಅಧಿಕಾರಿಗಳಿಗೆ ಬಡ್ತಿ ನೀಡಿರುವುದರ ಬಗ್ಗೆ ಅಸಮಾಧಾನ ಹೊರಹಾಕಿ ರಾಜೀನಾಮೆ ಸಲ್ಲಿಸಿದ್ದಾರೆ. ತಡರಾತ್ರಿ ಡಿಜಿ ಭೇಟಿಗೆ ಅವಕಾಶ ಸಿಗದ ಕಾರಣ ರವೀಂದ್ರನಾಥ್ ಕಂಟ್ರೋಲ್ ರೂಂಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪತ್ರದಲ್ಲಿ ತಮ್ಮ ಅಸಮಾಧಾನದ ಬಗ್ಗೆ ಉಲ್ಲೇಖಿಸಿದ್ದಾರೆ.