ಕೋವಿಡ್ ಹೆಚ್ಚಳ : ಇಂದಿನಿಂದ ಆಂಧ್ರಪ್ರದೇಶದ 1ರಿಂದ 9ನೇ ತರಗತಿ ಶಾಲೆಗಳು ಬಂದ್

ಅಮರಾವತಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ದೆಹಲಿ, ಹರಿಯಾಣ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳು ಬಂದ್ ಆಗಿವೆ. ಈಗ ಆಂಧ್ರಪ್ರದೇಶ ರಾಜ್ಯಕ್ಕೂ ತಟ್ಟಿದ ಕೋವಿಡ್ ಎಫೆಕ್ಟ್, ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ರಾಜ್ಯಾದ್ಯಂತ ಇಂದಿನಿಂದ 1 ರಿಂದ 9 ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು, … Read more

ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಮೋಹನ್ ರೆಡ್ಡಿ ಪಕ್ಷ

ವಿಶಾಖಪಟ್ಟಣಂ: ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯ ಗಳಿಸಿದೆ. 75 ಪುರಸಭೆಗಳಲ್ಲಿ 74 ರಲ್ಲಿ ಜಯಗಳಿಸಿದೆ. ಎಲ್ಲಾ 12 ಮಹಾನಗರ ಪಾಲಿಕೆಗಳಲ್ಲಿಯೂ ಜಯಭೇರಿ ಬಾರಿಸಿದೆ. ವಿಶಾಖಪಟ್ಟಣಂ, ವಿಜಯವಾಡ ಮತ್ತು ಗುಂಟೂರು ನಗರಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. ವಿರೋಧ ಪಕ್ಷ ಟಿಡಿಪಿ ಅನೇಕ ಕಡೆಗಳಲ್ಲಿ ಎರಡು ಅಂಕಿಗಳನ್ನು ದಾಟಲು ಸಹ ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ಟಿಡಿಪಿ, ತಾಡಿಪತ್ರಿ … Read more