ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ!

jayashri

ಬೆಂಗಳೂರು (25-01-2021): ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಮಾಗಡಿ ಸಮೀಪದ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ನಟಿ ಜಯಶ್ರೀ ಫೇಸ್ ಬುಕ್ ನಲ್ಲಿ ಲೈವ್ ನಲ್ಲೇ ಈ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅವರು ಬದುಕುಳಿದಿದ್ದರು. ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.