ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವ ಕಾಂಗ್ರೆಸ್, ಬಿಜೆಪಿಯ ಹುನ್ನಾರದಲ್ಲಿ ಜಮೀರ್ ಅಹ್ಮದ್ ಪಾಲುದಾರರು: ಶ್ರೀನಾಥ್ ಪೂಜಾರಿ ಆರೋಪ

ಸಿಂದಗಿ : ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವ ಬಿಜೆಪಿ, ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಮಾಜಿ ಸಚಿವ ಜಮೀರ್‌ಅಹ್ಮದ್ ಖಾನ್ ಅವರನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ, ಜಮೀರ್‌ಅಹ್ಮದ್ ಖಾನ್ ಹೆಗಲಿಗೆ ಬಂದೂಕು ಇರಿಸಿ ಸಿಂದಗಿ ಭಾಗದಲ್ಲಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಹೆಣೆಯಲಾಗಿದೆ, ಜಮೀರ್ ಅಹ್ಮದ್ ಈ ಹುನ್ನಾರದ ಪಾಲುದಾರರಾಗಬಾರದು ಎಂದು ಯುವ ಧುರೀಣ ಹಾಗೂ ನ್ಯಾಯವಾದಿ ಶ್ರೀನಾಥ ಪೂಜಾರಿ ಆರೋಪಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನೇ ಸೋಲಿಸಲು ಕಾಂಗ್ರೆಸ್ ಶಾಸಕ ಜಮೀರ್‌ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ದಾಳವಾಗಿ ಬಳಸಿಕೊಳ್ಳುತ್ತಿದೆ. ಮಾಜಿ … Read more

ಅನಾಚಾರವೆಂಬುದು ಬಿಜೆಪಿ ಕಾಯಕ, ದಿನನಿತ್ಯದ ಚಾಳಿ : ಬಿಜೆಪಿ ವಿರುದ್ಧ ಜೆಡಿಎಸ್ ಟ್ವೀಟರ್ ಸಮರ

ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಬಿಜೆಪಿ ವಿರುದ್ಧ ರಾಜ್ಯ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಜೆಡಿಎಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು?

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ಪಟ್ಟಿ ಮಾಡುತ್ತಾ ಹೋದರೆ ಅದೇ ದೊಡ್ಡ ಧಾರಾವಾಹಿ ಆಗುತ್ತದೆ. ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದೆ.

ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯುಪಿಎಸ್ಸಿಗೆ ಸಮೀಕರಣ ಮಾಡಿ ಕೆಪಿಎಸ್ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆಪಿಎಸ್ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಹೆಚ್.ಡಿ.ಕುಮಾರಸ್ವಾಮಿ ಅವರೆಂದೂ ಕೆಪಿಎಸ್ಸಿಯನ್ನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಉತ್ತರಿಸಿದೆ.

2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ಜತೆಗೆ, ಅವರು ಅನೇಕರಿಗೆ ಉದ್ಯೋಗ, ಜೀವನೋಪಾಯ ಕಲ್ಪಿಸಿದ್ದಾರೆ. ಅದೂ ಅರ್ಹತೆಯನ್ನು ಆಧರಿಸಿ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ಗರ್ಭಗುಡಿಯಲ್ಲಿರುವ ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಬಿಜೆಪಿಗೆ ಪ್ರತಿಕ್ರಿಯಿಸಿದೆ.

 

ಕೆಪಿಎಸ್ಸಿಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆಪಿಎಸ್ಸಿಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಜನತಾದಳ ಟ್ವೀಟ್ ವಾರ್ ನಡೆಸಿದೆ.

ಜೆಡಿಎಸ್ ಪಕ್ಷವನ್ನು ಟೀಕಿಸದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ : ಎಚ್.ಡಿ.ಕೆ ಆಕ್ರೋಶ

ಬೆಂಗಳೂರು: ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ‘ಸಿದ್ಧಹಸ್ತರು’ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ನವರ ಇಂಥ ಹೇಳಿಕೆ ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ‘ಸಿದ್ದಕಲೆ’ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಎಚ್ ಡಿಕೆ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದಾರೆ.

ರಾಜ್ಯ ಸರ್ಕಾರ ದರ ಏರಿಕೆ, ಬಾಕಿ ವಸೂಲಿ ಮೂಲಕ ದೌರ್ಜನ್ಯ ನಡೆಸುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರ ವಿದ್ಯುತ್‌ ದರ ಏರಿಸಿದೆ. ಯೂನಿಟ್‌ ವಿದ್ಯುತ್‌ ಮೇಲೆ 30 ಪೈಸೆ ಏರಿಸಲಾಗಿದೆ. ಏ. 1ರಿಂದ ದರ ಪೂರ್ವಾನ್ವಯವೂ ಆಗಲಿದೆ. ಹಿಂಬಾಕಿಯನ್ನು ಅಕ್ಟೋಬರ್‌–ನವೆಂಬರ್‌ನಲ್ಲಿ ವಸೂಲಿ‌ ಮಾಡಲಾಗುತ್ತದೆ. ಕೊರೊನಾ ಕಾಲದಲ್ಲಿ ಹಲವು ರಾಜ್ಯಗಳು ವಿದ್ಯುತ್‌ ಬಿಲ್‌ ರದ್ದು ಮಾಡಿರುವಾಗ ರಾಜ್ಯ ಸರ್ಕಾರ ದರ ಏರಿಕೆ ಜೊತೆ ಬಾಕಿ ವಸೂಲಿಗೂ ನಿಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೋವಿಡ್‌ ಮತ್ತು ಲಾಕ್‌ಡೌನ್‌ಗಳಲ್ಲಿ ಜನ ಕಷ್ಟಪಟ್ಟು ಜೀವ ಉಳಿಸಿಕೊಂಡಿದ್ದಾರೆ. ತ್ರಾಸದ ಜೀವನ ನಡೆಸಿದ್ದಾರೆ. ಇನ್ನಷ್ಟೇ ದುಡಿದು ಜೀವನ ನಡೆಸಬೇಕಾದ … Read more

ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಶೀಘ್ರವಾಗಿ ಲಸಿಕೆ ನೀಡಬೇಕು: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ . ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು … Read more

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ: ಪಾರುಪತ್ಯ ಮೆರೆದ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗ

ಬೆಂಗಳೂರು: ರಾಜ್ಯದ ವಿವಿಧೆಡೆ ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದೊಂದಿಗೆ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಪಾರುಪತ್ಯ ಮೆರೆದಿದೆ. ಬಳ್ಳಾರಿ ಮಹಾನಗರ ಪಾಲಿಕೆ ಬಿಜೆಪಿ ಪಕ್ಷ ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು, ಒಟ್ಟು 39 ವಾರ್ಡ್ ಗಳ ಪೈಕಿ 21 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದತ್ತ ದಾಪುಗಾಲಿಟ್ಟಿದೆ. ಅಲ್ಲಿ ಬಿಜೆಪಿಗೆ ಕೇವಲ 13 ಸ್ಥಾನಗಳು ಹಾಗೂ … Read more

ಲಸಿಕೆಯ ದಾಸ್ತಾನಿಲ್ಲದೆ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ, ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದುತ್ತಿವೆ: ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 … Read more

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ : ಎಚ್ ಡಿಕೆ ವಿರುದ್ಧ ಬಿಜೆಪಿ ದೂರು

ಬೀದರ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದ ವೇಳೆ ಎಪ್ರಿಲ್ 9ರಂದು ಕುಮಾರಸ್ವಾಮಿ ಅವರು ಮತದಾರರಿಗೆ ಮನೆ ಮಂಜೂರಾತಿ ಕುರಿತು ಆಮಿಷ ಒಡ್ಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಬಿಜೆಪಿ ದೂರು ಸಲ್ಲಿಸಿದೆ. ಬಿಜೆಪಿ ಎಂಎಲ್‌ಸಿ ಡಾ. ತೇಜಸ್ವಿನಿ ಗೌಡ ಸೇರಿದಂತೆ ಮತ್ತಿತರರು ಚುನಾವಣಾಧಿಕಾರಿಗಳಿಗೆ ಈ ಬಗ್ಗೆ ದೂರು … Read more

ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಹಾಗೂ ಪತ್ನಿ ಚೆನ್ನಮ್ಮಗೆ  ಕೋವಿಡ್ ದೃಢ

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೆಗೌಡ ಹಾಗೂ ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ 19 ದೃಢಪಟ್ಟಿದೆ. “ನನಗೆ ಹಾಗೂ ಹೆಂಡತಿ ಚೆನ್ನಮ್ಮ ಅವರಿಗೆ COVID-19 ದೃಢಪಟ್ಟಿದೆ. ನಾವು ನಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಯಂ-ಪ್ರತ್ಯೇಕಿಸುತ್ತಿದ್ದೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತಿಗೆ ಒಳಗಾಗಬೇಡಿ” ಎಂದು ದೇವೆಗೌಡರು ಟ್ವೀಟ್ ಮೂಲಕ ವಿನಂತಿಸಿದ್ದಾರೆ. My wife Chennamma and I have tested … Read more

ನಾವು ಅಭ್ಯರ್ಥಿಯನ್ನಾಗಿ ಮಾಡದಿದ್ದರೆ ಇಂದು ನನ್ನ ವಿರುದ್ಧ ಆರೋಪಿಸಲು ಆ ನಾಯಕ ಇರುತ್ತಿರಲಿಲ್ಲ: ಶಾಸಕ ಜಮೀರ್ ಅಹ್ಮದ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ ಎಚ್.ಡಿ.ಕೆ

ಬೆಂಗಳೂರು : 2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ, ಕೇಳಿ ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಮುಸ್ಲಿಂ … Read more