‘ಗೋಡ್ಸೆ ಭಕ್ತ’ ಬಾಬುಲಾಲ್ ಕಾಂಗ್ರೆಸ್ ಗೆ ಸೇರ್ಪಡೆ

madya pradesh

ನವದೆಹಲಿ(25-02-2021):ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ‘ಗೋಡ್ಸೆ ಭಕ್ತ’ ಬಾಬುಲಾಲ್ ಚೌರಾಸಿಯಾ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅವರನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಗೋಡ್ಸೆ ಬಗ್ಗೆ ಬಿಜೆಪಿಯ ಸಾಧ್ವಿ ಪ್ರಜ್ಞಾ ನಿಲುವಿನ ಬಗ್ಗೆ ಕಾಂಗ್ರೆಸ್ ಈ ಮೊದಲು ವಾಗ್ದಾಳಿ ನಡೆಸಿತ್ತು. ಈಗ ಚೌರೇಶಿಯಾ ಅವರನ್ನು ಸೇರಿಸಿಕೊಳ್ಳುವಲ್ಲಿ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ಟೀಕೆ ಭುಗಿಲೆದ್ದಿದೆ. 2019 ರಲ್ಲಿ ಹಿಂದೂ ಮಹಾಸಭಾ ಗ್ವಾಲಿಯರ್‌ನಲ್ಲಿ ಗೋಡ್ಸೆಯ 70 ನೇ ತ್ಯಾಗ ದಿನವನ್ನು ಆಚರಿಸಿದೆ. ಬಳಿಕ ಬಲಪಂಥೀಯ ಸಂಘಟನೆಯು 2017 … Read more

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

sharath bachegawda

ಬೆಂಗಳೂರು(18-02-2021): ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆ.26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರರಾಗಿರುವ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಪಿಸಿಸಿ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಯಾಗಲಿದ್ದಾರೆ. ಶರತ್ ಬಚ್ಚೇಗೌಡ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಸೇರ್ಪಡೆಗೊಂಡಿದ್ದ ಎಂಟಿಬಿ ನಾಗರಾಜ್ ವಿರುದ್ಧ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದರು.