ಕಾಬೂಲ್ ಯುನಿವರ್ಸಿಟಿಯಲ್ಲಿ ಗುಂಡಿನ ದಾಳಿ; ಕನಿಷ್ಠ 19 ಮಂದಿ ಸಾವು

  ಕಾಬೂಲ್(02/11/2020): ಅಪ್ಘಾನಿಸ್ತಾನದ ಕಾಬೂಲ್ ವಿಶ್ವ ವಿದ್ಯಾಲಯದಲ್ಲಿ ಬಂದೂಕುಧಾರಿ ವ್ಯಕ್ತಿಗಳು ಸೋಮವಾರ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿಯಲ್ಲಿ ಕನಿಷ್ಠ 19 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಗಾಯಗೊಂಡಿರುವುದಾಗಿ ವರದಿಯಾಗಿದೆ. ನಿಖರವಾದ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಅಫ್ಗಾನಿಸ್ತಾನದ ರಾಜಧಾನಿಯ ಪ್ರಮುಖ ವಿದ್ಯಾ ಕೇಂದ್ರವಾಗಿರುವ ಕಾಬೂಲ್‌ ಯೂನಿವರ್ಸಿಟಿಯಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಫ್ಗಾನಿಸ್ತಾನದಲ್ಲಿನ ಇರಾನ್‌ನ ರಾಯಭಾರಿ ಸಹ ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದ ವಿಶ್ವವಿದ್ಯಾಲಯದಲ್ಲಿ ಸಾವಿಗೀಡಾಗಿರುವವರ ವಿವರವನ್ನು ಅಫ್ಗಾನಿಸ್ತಾನ ಆಂತರಿಕ ವ್ಯವಹಾರಗಳ ಸಚಿವಾಲಯದ ವಕ್ತಾರ ತಾರಿಕ್‌ … Read more