ಬಿಜೆಪಿ ನಾಯಕ ಕೈಲಾಶ್​ ಸಾರಂಗ್ ನಿಧನ

ಬುಲಂದ್​ಶಹರ್ (15-11-2020): ​ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಕೈಲಾಶ್​ ಸಾರಂಗ್ ನಿಧನರಾಗಿದ್ದಾರೆ. 85 ವರ್ಷದ ಕೈಲಾಶ್​ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಮುಂಬೈ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕೈಲಾಶ್​ ಅವರ ಮಗ ವಿಶ್ವಾಸ್​ ಸಾರಂಗ್​ ಮಧ್ಯಪ್ರದೇಶ ಸರ್ಕಾರದ ಸಚಿವರಾಗಿದ್ದಾರೆ.  ಕೈಲಾಶ್​ ಅವರ ಸಾವಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.