ರಾಜ್ಯದಲ್ಲಿ ಜೂನ್ 14 ನಂತರ ಐದು ಹಂತದಲ್ಲಿ ‘ಅನ್ ಲಾಕ್’ : ಸಚಿವ ಆರ್.ಅಶೋಕ್ ಸ್ಪಷ್ಟನೆ

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂ.14ರವರೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಒಂದೇ ಬಾರಿಗೆ ಎಲ್ಲವೂ ತೆರವುಗೊಳಿಸದೆ ಐದು ಹಂತಗಳಲ್ಲಿ ‘ಅನ್ ಲಾಕ್’ ಪ್ರಕ್ರಿಯೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೇರಲಾದ ಲಾಕ್ ಡೌನ್ ಜೂನ್ 14ಕ್ಕೆ ಮುಕ್ತಾಯಗೊಳ್ಳಲಿದ್ದು, ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಖರೀದಿಯ … Read more

ಲಾಕ್ ಡೌನ್ ವಿಸ್ತರಿಸುವ ಬಗ್ಗೆ ತಜ್ಞರು ಯಾವುದೇ ವರದಿ ನೀಡಿಲ್ಲ: ಸಿಎಂ ಬಿ.ಎಸ್.ವೈ.

ಬೆಂಗಳೂರು : ಕೋವಿಡ್ -19 ರ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕಾವೇರಿ ನಿವಾಸದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು ಒಂದೆರಡು ದಿನಗಳಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಜೂನ್ 7 ಕ್ಕೆ ಮುಗಿಯುವ ಲಾಕ್ ಡೌನ್ ಮುಂದುವರೆಸುವ ಬಗ್ಗೆ ತಿಳಿಸಿದ ಅವರು ಜೂನ್ 5, 6 ರ … Read more

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್

– ನಾ ದಿವಾಕರ, ಹಿರಿಯ ಲೇಖಕರು, ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.  ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ … Read more

ರಾಜ್ಯದ ಕೋವಿಡ್ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಮಹತ್ವದ ಬದಲಾವಣೆ | ವಾರದ ಸಂತೆ ಬಂದ್ ; ದಿನಸಿ ಅಂಗಡಿ, ತಳ್ಳುಗಾಡಿಗಳ ಸಮಯಮಿತಿಯಲ್ಲಿ ಏರಿಕೆ

ಬೆಂಗಳೂರು: ಇಂದು ರಾಜ್ಯ ಸರಕಾರವು ಕೋವಿಡ್ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಮತ್ತೆ ಬದಲಾವಣೆ ತಂದಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ನೂಕು ನುಗ್ಗಲು ಮತ್ತು ರೈತರ ಬೆಳೆಗಳು ಹಾಳಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ವಾರದ ಸಂತೆ ಮಾರುಕಟ್ಟೆಗಳು ಸಂಪೂರ್ಣವಾಗಿ ಬಂದ್ ಆಗಲಿದೆ. ಆದರೆ ಎಪಿಎಮ್‍ಸಿ , ದಿನಸಿ ಅಂಗಡಿಗಳು ತೆರೆಯುವ ಸಮಯ ಬೆಳಿಗ್ಗೆ ಆರರಿಂದ ಹನ್ನೆರಡರ ವರೆಗೆ ನಿಗದಿಪಡಿಸಲಾಗಿದೆ. ಹಾಪ್ ಕಾಮ್ಸ್, ಹಾಲಿನ ಬೂತುಗಳು, ಹಣ್ಣು, ತರಕಾರಿಗಳನ್ನು ಮಾರುವ ತಳ್ಳುಗಾಡಿಗಳಿಗೆ ಬೆಳಿಗ್ಗೆ ಆರುಗಂಟೆಯಿಂದ ಸಂಜೆ ಆರು ಗಂಟೆಯ ವರೆಗೆ ಸಮಯಮಿತಿ ಕೊಡಲಾಗಿದೆ. ಕೋವಿಡ್ … Read more