ಕಾಂಗ್ರೆಸ್‌ ಹೋರಾಡುತ್ತಿರುವುದು ಪೆಟ್ರೋಲ್ ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ?: ಎಚ್.ಡಿ.ಕುಮಾರಸ್ವಾಮಿ ಗರಂ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು GSTಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ … Read more

ಪೆಟ್ರೋಲ್ 100 – ನಾಟ್ ಔಟ್’ : ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿ … Read more

ವಿದ್ಯುತ್ ದರ ಹೆಚ್ಚಳ ಹಿಂಪಡೆಯದಿದ್ದರೆ ಕಾಂಗ್ರೆಸ್ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಿದೆ : ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು : ಕೊರೊನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ.. ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಟರ್ಗೆ 30 ರೂಗಳಷ್ಟು ಬೆಲೆ ಜಾಸ್ತಿ ಆಗಿದೆ. 2014 ರಲ್ಲಿ 400 ರೂಗಳಿದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಈಗ 850 ರೂ ಆಗಿದೆ. ಈ ಕಾಲದಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ … Read more

ಬಿಜೆಪಿಯಲ್ಲಿ ದೊಡ್ಡ ನಾಟಕ ನಡೆಯುತ್ತಿದೆ, ಬಿ.ಎಸ್.ಯಡಿಯೂರಪ್ಪ ಅತ್ಯಂತ ಕೆಟ್ಟ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನವರ ಆಡಳಿತ ಸಂಪೂರ್ಣ ವಿಫಲವಾಗಿದೆ. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೂ ಹೋಗಿದೆ. ಆದ್ದರಿಂದ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಹೀಗಾಗಿ ಅವರು ನಾಟಕವಾಡುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವೇನು‌ ಸರ್ಕಾರ ಬೀಳಿಸಲ್ಲ ಅವರಾಗಿ ಬಿದ್ದು ಹೋದ್ರೆ, ನಾವು ನಡೆಸೋಕೆ ರೆಡಿ. ಜೊತೆಗೆ ಮುಂದಿನ ಚುನಾವಣೆ ಎದುರಿಸೋಕೆ ನಾವು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗಾದಿಯಿಂದ ಬಿಎಸ್​ವೈ ತೆಗೆಯಬೇಕೆಂದು … Read more

ನ್ಯಾಯಾಲಯದಲ್ಲಿ ಕೇಂದ್ರಕ್ಕೆ ಸರಣಿ ಮುಖಭಂಗವಾಗಿದೆ: ದಿನೇಶ್ ಗುಂಡೂರಾವ್

ಬೆಂಗಳೂರು : ಕೇಂದ್ರ ಸರ್ಕಾರದ ಅಸಮರ್ಪಕ ಲಸಿಕಾ ನೀತಿ ಬಗ್ಗೆ ಸುಪ್ರೀಂ ಕೋರ್ಟ್ ಪದೇ ಪದೇ ಚಾಟಿ ಬೀಸುತ್ತಿದೆ. ಇದು ನ್ಯಾಯಾಲಯದಲ್ಲಿ ಕೇಂದ್ರಕ್ಕೆ ಸರಣಿ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿದ ಅವರು, ಕಾರ್ಯಾಂಗದ ಅಧಿಕಾರ ವ್ಯಾಪ್ತಿಯಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸಬಾರದು ಎಂಬ ಕೇಂದ್ರದ ವಾದ ಉದ್ಧಟತನದ್ದು. ಕೇಂದ್ರದ ಮನೆಹಾಳು ನೀತಿಯಿಂದ ಜನ ಸಾಯುವುದನ್ನು ನೋಡಿಯೂ ಕೋರ್ಟ್ ಮೌನವಾಗಿರಬೇಕೆ? ಎಂದಿದ್ದಾರೆ. ಕಳೆದ ಬಜೆಟ್‌ನಲ್ಲಿ ಲಸಿಕಾ ಯೋಜನೆಗಾಗಿ ಕೇಂದ್ರ 35 ಸಾವಿರ … Read more

ಶವಗಳ ಮೇಲೆ ರಾಜಕೀಯ ಮಾಡುವುದು ಬಿಜೆಪಿಯ ಹುಟ್ಟುಗುಣ: ರಾಜ್ಯ ಕಾಂಗ್ರೆಸ್

ಬೆಂಗಳೂರು: ಶವಪೆಟ್ಟಿಗೆ ಹಗರಣದಿಂದ ಹಿಡಿದು ಕರೋನಾದವರೆಗೂ ಶವಗಳ ಮೇಲೆ ರಾಜಕೀಯ ಮಾಡುವುದು, ಭ್ರಷ್ಟಾಚಾರ ಮಾಡುವುದು ಬಿಜೆಪಿಯ ಹುಟ್ಟುಗುಣ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಗುಡುಗಿದೆ, ಲಸಿಕೆ ಕೊಡಿ ಅಂದ್ರೆ ನೇಣು ಹಾಕ್ಕೋಬೇಕಾ ಎಂದು ಕೇಳಿದ ಕೈಲಾಗದ ಕೇಂದ್ರ ಮಂತ್ರಿ ಡಿ.ವಿ‌.ಸದಾನಂದಗೌಡ ಅವರು ಅಗತ್ಯವಿರುವ ಕೆಲಸ ಮಾಡುವುದನ್ನ ಬಿಟ್ಟು ಪುಡಿ ರಾಜಕೀಯ ಮಾಡಲು ಹೆಬ್ಬಾಳಕ್ಕೆ ಓಡೋಡಿ ಬಂದಿದ್ದಾರೆ ಎಂದು ಆರೋಪಿಸಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ … Read more

ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ ಅವರನ್ನು ಬಂಧಿಸುವಂತೆ ರಾಜ್ಯ ಕಾಂಗ್ರೆಸ್ ದೂರು

ಬೆಂಗಳೂರು: ಲಸಿಕೆ ಹಗರಣದಲ್ಲಿ ತೊಡಗಿಕೊಂಡಿರುವ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರುಗಳನ್ನು ಕೂಡಲೇ ಬಂಧಿಸಿ, ಉನ್ನತ ತನಿಖೆಗೆ ಒಳಪಡಿಸಬೇಕು ಹಾಗೂ ಅವರಿಬ್ಬರನ್ನೂ ಚುನಾಯಿತ ಸ್ಥಾನಗಳಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಸಿಲುಕಿರುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. 4 ಕೋಟಿ ಲಸಿಕೆಗಳು ನಾಪತ್ತೆಯಾದ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ಅವರುಗಳು … Read more

ಕರೋನಾ ಇಲ್ಲದಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು : ರಾಜ್ಯ ಕಾಂಗ್ರೆಸ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿರುಗಾಳಿಯಂತೆ ಸೂಸುತ್ತಿದೆ. ಕೆಲವು ನಾಯಕರು ದೆಹಲಿಗೆ ದೌಡಾಯಿಸಿದೆ ತಡ ಮುಖ್ಯಮಂತ್ರಿ ಬದಲಾವಣೆ ಕಾವು ಮತ್ತೆ ಮುನ್ನೆಲೆಗೆ ಬಂದಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಮುಂದಿನ ಸಿಎಂ ಯಾರು? ಎನ್ನುವ ಪ್ರಶ್ನೆಗಳು ಸಹಜವಾಗಿ ಗೋಚರಿಸುತ್ತವೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಹೈಕಮಾಂಡ್ ಮುನಿಸಿಕೊಂಡು ನಾಯಕತ್ವ ಬದಲಾವಣೆಗೆ ಒಲವು ತೋರುತ್ತಿದೆಯೇ? ಎಂದು ಹೇಳಲು ಖಚಿತ ಆಧಾರಗಳಿಲ್ಲ. ಆದರೂ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಮತ್ತೆ ಬಿಜೆಪಿ ನಾಯಕರ ತಿಕ್ಕಾಟ ಇರುವುದು … Read more

ಕೋವಿಡ್ ತಡೆಗಟ್ಟಲು ಲಸಿಕೆಯೊಂದೇ ಶಾಶ್ವತ ಪರಿಹಾರ : ಎಂ.ಬಿ.ಪಾಟೀಲ್

ವಿಜಯಪುರ: ಕೊರೊನಾ ಮೊದಲನೇ ಅಲೆ ಮುಗಿದು, ಸದ್ಯ ಎರಡನೆಯ ಅಲೆಯ ಹಾನಿಯನ್ನು ಅನುಭವಿಸುತ್ತಿರುವ ನಮ್ಮ ದೇಶಕ್ಕೆ ಮುಂದೆ 3ನೇ ಅಲೆಯ ಆತಂಕವೂ ಇದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಜನರನ್ನು ಕಳೆದುಕೊಂಡಿದ್ದು, ಇದರಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ. ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ ಎಂದು ಶಾಸಕ ಎಂ.ಬಿ.ಪಾಟೀಲ್ ಕಳವಳ ವ್ಯಕ್ತಪಡಿಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಉಂಟಾದ ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ಮಾಡುವುದೊಂದೇ ಶಾಶ್ವತ ಪರಿಹಾರ. … Read more

ಕೋಮು ಬಣ್ಣ ನೀಡಲು ಮುಂದಾಗಿದ್ದ ತೇಜಸ್ವಿ ಸೂರ್ಯ ಈಗ ಎಲ್ಲಿ ಅಡಗಿದ್ದಾರೆ? : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ತಮ್ಮ ಹಗರಣ ಮುಚ್ಚಿಕೊಳ್ಳಲು ಅಮಾಯಕ ವಾರ್ ರೂಮ್ ಸಿಬ್ಬಂದಿಗಳ ಹೆಸರನ್ನು ಬಳಸಿ ಕೋಮು ಬಣ್ಣ ನೀಡಲು ಮುಂದಾಗಿದ್ದ ಸಂಸದ ತೇಜಸ್ವಿ ಸೂರ್ಯ ಈಗ ಎಲ್ಲಿ ಅಡಗಿದ್ದಾರೆ? ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, 17 ಸಿಬ್ಬಂದಿಗಳ ಉದ್ಯೋಗ, ಆತ್ಮಗೌರವ, ಮರ್ಯಾದೆಯನ್ನು ಕಿತ್ತುಕೊಂಡ ಎಳೆ ಸಂಸದನಿಗೆ ಪಶ್ಚಾತಾಪ ಇಲ್ಲವೇ? ಅವರಿಗಾದ ನಷ್ಟಕ್ಕೆ ಪರಿಹಾರ ದೊರಕಿಸಿಕೊಡುವ ಕೆಲಸ ಮಾಡುವರಾ ಈಗ? ಬೆಡ್ ಬ್ಲಾಕಿಂಗ್ ಹಗರಣದ ರಾಜ್ಯ ಬಿಜೆಪಿ ಪಕ್ಷದ ‘ಮೆಡಿಕಲ್ ಭಯೋತ್ಪಾದನೆ’ ಸತೀಶ್ … Read more