ನಗರಸಭಾ ಸದಸ್ಯ ಮಕ್ಬೂಲ್ ಕೊಲೆ

ರಾಯಚೂರು(29-09-2020):  ನಗರಸಭಾ ಸದಸ್ಯನನ್ನು ಕೊಚ್ಚಿಕೊಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರಸಭಾ ಎಂಟನೇ ವಾರ್ಡ್ ನ ಜೆಡಿಎಸ್ ಸದಸ್ಯ ಮಕ್ಬೂಲ್‌ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಗಳು ನಗರದ ಜಾಕಿರ ಹುಸೇನ್ ವೃತ್ತದ ಬಳಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತಕ್ಷಣ ಮಕ್ಬೂಲ್‌ ರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿಗಳನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.