ಕೇಸರಿ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ?: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ರಾಜ್ಯ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಡಾ.ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಸಚಿವ ಕೆ.ಸುಧಾಕರ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವ ಡಾ‌‌.ಸುಧಾಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ … Read more

17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ?: ನಳೀನ್ ಕುಮಾರ್ ಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೆಜೆಪಿ ಪರ್ವದಲ್ಲಿ ಬಿ.ಎಸ್.ವೈ ಅವರನ್ನ ಹೇಗೆ ನಡೆಸಿಕೊಂಡಿರಿ, ಈಗಲೂ ಅದೇ ಮಾದರಿಯಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂಬುದನ್ನ ಹೇಳಬೇಕೆ? 17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ, ಹೀಗಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಮಾಡಿತ್ತು ಎಂದು ನಳಿನ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು, ಇದಕ್ಕೆ … Read more

ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ ಎಂದೇ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿಗೆ ಸಿಎಂ ಮಾಡಿತ್ತು : ನಳಿನ್ ಕುಮಾರ್ ಕಟೀಲ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಕೊರತೆ ಇದೆಯೇ ಹೊರತು ಬಿಜೆಪಿಯಲ್ಲಿ ಅಲ್ಲ. ಸಿದ್ದರಾಮಯ್ಯ ಅವರು ಸಮರ್ಥ ನಾಯಕ ಅಲ್ಲ ಎನ್ನುವುದನ್ನು ಅರಿತ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ, ಸಿದ್ದರಾಮಯ್ಯ ಅವರು ಮೊದಲು ತಮ್ಮ ಪಕ್ಷದ ಸ್ಥಿತಿಗತಿಗಳ ಬಗ್ಗೆ ನೋಡಿಕೊಳ್ಳುವುದು ಒಳ್ಳೆಯದು. ಕಾಂಗ್ರೆಸ್‌ ಪಕ್ಷದವರಿಗೆ ಸದ್ಯ ಬೇರೆ ಏನೂ ಕೆಲಸವಿಲ್ಲ. ಪ್ರತಿಪಕ್ಷವಾಗಿಯೂ ಸರಿಯಾಗಿ … Read more

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ‌. ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಘಟಕ ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರದ ಸಭೆಗೆ ಆಗಮಿಸುವಂತೆ ಮತದಾರರಿಗೆ ಹಣ ಹಂಚುತ್ತಿರುವ ನಂದೀಶ್ ರೆಡ್ಡಿ ಅವರ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ಟೀಕಿಸಿದೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? … Read more

ಸಿಟಿ ರವಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಪರೋಕ್ಷವಾಗಿ ಹೇಳಿದ ನಳಿನ್ ಕುಮಾರ್ ಕಟೀಲ್

naleen

ತುಮಕೂರು(02-10-2020): ಸಿಟಿ ರವಿಗೆ ಎರಡು ಹುದ್ದೆ ಬೆನ್ನಲ್ಲೇ ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳಿಕೆ ನೀಡಿದ್ದು, ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ ಕೊಡುವಂತೆ ಪರೋಕ್ಷವಾಗಿ ಆಗ್ರಹಿಸಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ಪಕ್ಷದ ಅಲಿಖಿತ ನಿಯಮವನ್ನು ವರಿಷ್ಠರು ಬದಲಿಸಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ … Read more