ದೇಶದಲ್ಲಿ ‘ಡೆಲ್ಟಾ ಪ್ಲಸ್’ ವೈರಸ್ ಹರಡದಂತೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು: ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ದೇಶದ ಶೇ.80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ … Read more

“ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ” : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು … Read more

ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕತೆಯ ಸ್ಥಿತಿ ನೆಲೆಯಾಗಿದೆ … Read more

‘ಮೋದಿ ಮೋದಿ’ ಎಂದರೆ ಬಡವರ ಬದುಕು ಬೂದಿಯಾಗುವುದು ಖಚಿತ : ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. … Read more

ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸುವುದು ಲೂಟಿ ಅಲ್ಲದೇ ಮತ್ತೇನು? ಇದೇನಾ ಅಚ್ಛೇ ದಿನ್? : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಚಪ್ಪಡಿ ಎಳೆದಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಶೇ. 30ರಷ್ಟು ಏರಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಮೊದಲು. ರಾಜ್ಯದಲ್ಲಿ ಉತ್ಪಾದನೆ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರ ಮತ್ತು ಅದಾನಿ ಕಂಪನಿಯಿಂದ ಹೆಚ್ಚು ದರಕ್ಕೆ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದಕ್ಕೆ … Read more

ಬಿಜೆಪಿ ಸರ್ಕಾರಕ್ಕೆ ಹೆಡ್‌ಲೈನ್‌ ಮೇಲೆಯೇ ಆಸಕ್ತಿ, ಡೆಡ್‌ಲೈನ್‌ ಮೇಲೆ ಅಲ್ಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕೋವಿಡ್‌ ಲಸಿಕೆ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಹೆಡ್‌ಲೈನ್‌ಗಳ ಬಗ್ಗೆ ಆಸಕ್ತಿಯೇ ಹೊರತು, ಡೆಡ್‌ಲೈನ್‌ ಬಗ್ಗೆ ಅಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಅವರು, ಎಲ್ಲ ಭಾರತೀಯರಿಗೂ ಉಚಿತವಾಗಿ ಲಸಿಕೆ ಸಿಗಬೇಕು. ಇದಕ್ಕಾಗಿ ಕೋವಿನ್‌ನಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯ ಮಾಡಬಾರದು. ಏಕೆಂದರೆ, ಡಿಜಿಟಲ್‌ ಸೌಲಭ್ಯವಿಲ್ಲದವರೂ ದೇಶದಲ್ಲಿ ಸಾಕಷ್ಟು ಮಂದಿ ಇದ್ದಾರೆ ಎಂದು ಪ್ರತಿಪಾದಿಸಿದರು. ರಾಜ್ಯಗಳಿಗೆ ಲಸಿಕೆ ಹಂಚಿಕೆ ಮಾಡುವಾಗ ಪಾರದರ್ಶಕತೆ ಕಾಪಾಡಬೇಕು, ಈ ವರ್ಷಾಂತ್ಯದ ವೇಳೆಗೆ ಸರ್ವರಿಗೂ … Read more

ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಮೇಲೆ ಹೆದರಿ ಪ್ರಧಾನಿ ಮೋದಿ ಉಚಿತ ಲಸಿಕೆ ಘೋಷಿಸಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನರ ಹಿತ ಕಾಪಾಡಲು ವಿಫಲವಾಗಿರುವ ಬಿ.ಎಸ್ ಯಡಿಯೂರಪ್ಪ ಅವರು ಒಬ್ಬ ಅಸಮರ್ಥ, ವಿಫಲ ಮುಖ್ಯಮಂತ್ರಿ. ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದು ಎಂದು ಬಿಜೆಪಿ ಹೈಕಮಾಂಡ್ ತಿಳಿದುಕೊಂಡಿದೆ. ಆದರೆ ಪೂರ್ತಿ ಬಸ್ ಕೆಟ್ಟುಹೋಗಿರುವ ಕಾರಣ ಡ್ರೈವರ್ ಬದಲಾಯಿಸಿದರೆ ಏನೂ ಪ್ರಯೋಜನವಾಗದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಈ ವರೆಗೆ ಸರಿಯಾಗಿ ರೂ. 1 ಸಾವಿರ ಕೋಟಿಯನ್ನು ಪರಿಹಾರವಾಗಿ ನೀಡಿಲ್ಲ, ಕೇವಲ ತೋರಿಕೆಗಾಗಿ ಕೆಲವರಿಗೆ ಪರಿಹಾರ ನೀಡಿದ್ದಾರೆ. ಎಲ್ಲಾ ಬಿ.ಪಿ.ಎಲ್ ಕಾರ್ಡುದಾರರಿಗೆ … Read more

ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲರಿಗೂ ಎರಡನೇ ಡೋಸ್ ನೀಡಬೇಕೆಂದು ಕರವೇಯಿಂದ ಚಳವಳಿ: ಟಿ.ನಾರಾಯಣಗೌಡ

ಬೆಂಗಳೂರು: ಜೂ. 10 ರಂದು‌ ಬೆಳಿಗ್ಗೆ 9.10 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಚಳವಳಿ ನಿಗದಿಯಾದಂತೆ ನಡೆಯುತ್ತದೆ. ಜೂನ್ ಅಂತ್ಯದೊಳಗೆ ಲಸಿಕೆಯ ಮೊದಲ ಡೋಸ್, ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಕರ್ನಾಟಕದ ಪ್ರತಿಯೊಬ್ಬ ನಾಗರಿಕನಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಈ ಚಳವಳಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ‌ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು ಕೊರೊನಾ ಲಸಿಕೆ ಕುರಿತು ಜನತೆಗೆ ಅರಿವು ಜೊತೆಗೆ ಉಚಿತ ಲಸಿಕೆ ನೀಡುವಂತೆ ಚಳವಳಿ … Read more

ದೇಶದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ, 80 ಕೋಟಿ ಜನರಿಗೆ ನವೆಂಬರ್ ತನಕ ಫ್ರೀ ರೇಷನ್ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಕಳೆದ ಬಾರಿ ಕೋವಿಡ್ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿಯಲ್ಲಿ ಈ ವರ್ಷವೂ ಕೂಡ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ (ದೀಪಾವಳಿ) ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇಂದು ಸಂಜೆ 5ಗಂಟೆಗೆ ದೇಶದ ಜನರನ್ನುದ್ದೇಶಿ ಮಾತನಾಡಿದ ಪ್ರಧಾನ ಮಂತ್ರಿ ಮೋದಿ ಅವರು ಈ ವಿಷಯನ್ನು ತಿಳಿಸಿದ್ದಾರೆ. … Read more

ದೇಶವನ್ನುದ್ದೇಶಿಸಿ ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಅಧಿಕೃತವಾಗಿ ಟ್ವೀಟ್ ಮಾಡಿದೆ. ಕಳೆದ ಎಪ್ರಿಲ್-ಮೇ ತಿಂಗಳಲ್ಲಿ ದೇಶದಲ್ಲಿ ಕೋವಿಡ್ 2ನೇ ಅಲೆಯ ಭೀಕರತೆ ಕುರಿತು ಪ್ರಸ್ತಾಪ ಮಾಡುವ ಅವರು ಕೋವಿಡ್ ಹೊಸ ಪ್ರಕರಣಗಳು ಈಗ ಇಳಿಮುಖ ಆಗಿರುವ ಸಮಯದಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಾದ … Read more