ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ : ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು : ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ … Read more

ರಾಜ್ಯದಲ್ಲಿ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ರದ್ದುಗೊಳಿಸಿ : ಡಿಕೆಶಿ

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್ ಇ ಪರೀಕ್ಷೆ ರದ್ದುಗೊಳಿಸಿದಕ್ಕೆ ಸ್ವಾಗತಿಸಿದ ಡಿಕೆಶಿ ಕೇಂದ್ರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ರದ್ದು ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್​​ ಅವರಿಗೆ ಟ್ವೀಟ್‌ ಮಾಡಿರುವ ಅವರು, ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ‌ ವಿನಾಯಿತಿ ನೀಡಲೇಬೇಕಾಗುತ್ತದೆ ಎಂದಿದ್ದಾರೆ. 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ‌ ಕೇಂದ್ರ ಸರ್ಕಾರದ‌ ನಿರ್ಧಾರವನ್ನು ನಾನು‌ ಸ್ವಾಗತಿಸುತ್ತೇನೆ’ ಎಂದು ಅವರು … Read more

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ವಿಧ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್: ‌ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 24 ರಿಂದ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸುರೇಶ್​ ಕುಮಾರ್​, ರಾಜ್ಯದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಪರೀಕ್ಷೆ ಆರಂಭವಾಗುವ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿರುವ ವಿದ್ಯಾರ್ಥಿಗಳು … Read more

ಸಿಬಿಎಸ್ಇ ಪರೀಕ್ಷೆಗೂ ತಟ್ಟಿದ ಕೋವಿಡ್ ಬಿಸಿ | ಹತ್ತನೇ ತರಗತಿ ಪರೀಕ್ಷೆ ರದ್ದು; ಹನ್ನೆರಡನೇ ತರಗತಿಯದ್ದು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಏರುತ್ತಿರುವ ಕೋವಿಡ್ ಸಾಂಕ್ರಾಮಿಕ ರೋಗದ ಬಿಸಿಯು ಸಿಬಿಎಸ್ಇ ಪರೀಕ್ಷೆಗೂ ತಟ್ಟಿದೆ. ಪರೀಕ್ಷೆಗಳನ್ನು ರದ್ದು ಯಾ ಮುಂದೂಡಲಾಗಿದೆ. ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದರೆ, ಹನ್ನೆರಡನೇ ತರಗತಿಯ ಪರೀಕ್ಷೆಯು ಮುಂದೂಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಿಬಿಎಸ್ಇ ಪರೀಕ್ಷೆಗಳನ್ನು ರದ್ದು ಮಾಡಬೇಕು ಯಾ ಮುಂದೂಡಬೇಕೆಂದು ವಿವಿಧ ರಾಜ್ಯಗಳು ಕೇಂದ್ರವನ್ನು ವಿನಂತಿಸಿತ್ತು.   ಈ ಹಿನ್ನೆಲೆಯಲ್ಲಿ ಪ್ರಧಾನಿಯು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ, ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಂದಿನ ದಿನಾಂಕಗಳನ್ನು ಜೂನ್ ಒಂದರ ಬಳಿಕ ತಿಳಿಸಲಾಗುವುದೆಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಪಿಯು ಪಠ್ಯದಿಂದ ಮೊದಲ ಸ್ವಾತಂತ್ರ್ಯ ಸಂಗ್ರಾಮ ಸೇರಿ ಮುಖ್ಯ ವಿಷಯಗಳನ್ನು ತೆಗೆದು ಹಾಕಿದ ಶಿಕ್ಷಣ ಇಲಾಖೆ!  

puc

ಬೆಂಗಳೂರು(25-10-2020): ಕೋವಿಡ್ ಹಿನ್ನೆಲೆಯಲ್ಲಿ ಕಾಳೇಜುಗಳು ಬಂದ್ ಆಗಿರುವುದರಿಂದ ಸರಕಾರ ಈಗಾಗಲೇ ಪಠ್ಯ ವಿಷಯದಲ್ಲಿ ಶೇ.30ರಷ್ಟು ಕಡಿತಕ್ಕೆ ಸೂಚಿಸದ್ದು, ಪಿಯುಸಿ ಪಠ್ಯದಲ್ಲಿ ಮುಖ್ಯವಾದ ಅಂಶಗಳಿಗೆ ಕತ್ತರಿ ಹಾಕಿದ್ದು, ಶಿಕ್ಷಕರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದ್ವಿತೀಯ ಪಿಯುಸಿ ಇತಿಹಾಸದಲ್ಲಿ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ ವಿಷಯವನ್ನೇ ತೆಗೆದು ಹಾಕಲಾಗಿದೆ. ರಾಜ್ಯಶಾಸ್ತ್ರದಲ್ಲಿ ಭಾರತದ ರಾಜಕೀಯದ ನೂತನ ಪ್ರವೃತ್ತಿ, ಅಸ್ಮಿತೆ, ರಾಜಕೀಯದ ಉಗಮವನ್ನು ತೆಗೆದು ಹಾಕಲಾಗಿದೆ. ಭ್ರಷ್ಟಾಚಾರದ ವಿರುದ್ಧ ಜನತೆ, ಭಯೋತ್ಪಾದನೆ ವಿರುದ್ಧ ಯುವ ಜನಾಂಗ, ಸಮಕಾಲೀನ ರಾಜಕೀಯ ವಿದ್ಯಮಾನಗಳು ಸೇರಿ ಪ್ರಮುಖ … Read more

ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಇಲಾಖೆ

puc

ಬೆಂಗಳೂರು(11-10-2020): 2020ರ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೈಲ್ ಆದ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, 2020 ಪ್ರಥಮ ಪಿಯುಸಿ  ಅಂತಿಮ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜು.13ಕ್ಕೂ ಮುನ್ನ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅ.20 ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಫಲಿತಾಂಶದಲ್ಲಿ ಅನುತ್ತೀರ್ಣರಾದವರಿಗೆ ಪಾಸ್ ಮಾರ್ಕ್ ನೀಡಿ … Read more