ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಮೇಲೆ ಹೆದರಿ ಪ್ರಧಾನಿ ಮೋದಿ ಉಚಿತ ಲಸಿಕೆ ಘೋಷಿಸಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನರ ಹಿತ ಕಾಪಾಡಲು ವಿಫಲವಾಗಿರುವ ಬಿ.ಎಸ್ ಯಡಿಯೂರಪ್ಪ ಅವರು ಒಬ್ಬ ಅಸಮರ್ಥ, ವಿಫಲ ಮುಖ್ಯಮಂತ್ರಿ. ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದು ಎಂದು ಬಿಜೆಪಿ ಹೈಕಮಾಂಡ್ ತಿಳಿದುಕೊಂಡಿದೆ. ಆದರೆ ಪೂರ್ತಿ ಬಸ್ ಕೆಟ್ಟುಹೋಗಿರುವ ಕಾರಣ ಡ್ರೈವರ್ ಬದಲಾಯಿಸಿದರೆ ಏನೂ ಪ್ರಯೋಜನವಾಗದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಈ ವರೆಗೆ ಸರಿಯಾಗಿ ರೂ. 1 ಸಾವಿರ ಕೋಟಿಯನ್ನು ಪರಿಹಾರವಾಗಿ ನೀಡಿಲ್ಲ, ಕೇವಲ ತೋರಿಕೆಗಾಗಿ ಕೆಲವರಿಗೆ ಪರಿಹಾರ ನೀಡಿದ್ದಾರೆ. ಎಲ್ಲಾ ಬಿ.ಪಿ.ಎಲ್ ಕಾರ್ಡುದಾರರಿಗೆ … Read more

ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಪರಿಹಾರ ಹಣ ವರ್ಗಾವಣೆ ಮಾಡಿದ್ದೇನೆ : ಬಿ. ಎಸ್. ಯಡಿಯೂರಪ್ಪ

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿ ಬಿ. ಎಸ್. ವೈ. ಅವರು ಕಟ್ಟಡ … Read more

ಜೂನ್ 14 ರವರೆಗೆ ಲಾಕ್ಡೌನ್ ವಿಸ್ತರಣೆ : 500 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

  ಬೆಂಗಳೂರು : ಜೂನ್ 7ರಂದು ಅಂತ್ಯವಾಗುವ ಲಾಕ್ ಡೌನ್ ಇನ್ನೂ ಒಂದು ವಾರ ಅಂದ್ರೆ ಜೂನ್ 14ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಕೇಸ್ ಪ್ರಕರಣಗಳು ಸ್ವಲ್ಪ ಮಟ್ಟಿಗೆ ಇಳಿಮುಖ ಆಗಿದೆ. ಆದ್ರೆ ಸಾವಿನ ಪ್ರಮಾಣ ಇನ್ನು ಹಾಗೆ ಇದೆ. ಜೂನ್ 7 ರಿಂದ ಅನ್ ಲಾಕ್ ಮಾಡಿದರೆ ಮತ್ತೆ ಸೋಂಕು ಹೆಚ್ಚಾಗಬಹುದು ಎಂದು ತಜ್ಞರ ಸಮಿತಿ ವರದಿ ನೀಡಿತ್ತು. ಒಂದು ವಾರ ಲಾಕ್ … Read more

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ : ಇಂದು ಸಂಜೆ 5 ಗಂಟೆಗೆ ಯಡಿಯೂರಪ್ಪ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಜೂನ್ 7 ಕ್ಕೆ ಅಂತ್ಯವಾಗಲಿದೆ, ಜೂನ್ 7ರ ನಂತರ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಬಹುತೇಕ ಸಚಿವರು, ತಜ್ಞರು ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿಎಂ ಬಿಸಿ ಬಿ ಎಸ್ ವೈ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಜೂನ್ 7ರ ನಂತರ ಮತ್ತೆ 1 ವಾರ … Read more

ಕೋವಿಡ್ ಸಂಕಷ್ಟ: ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ರೂ. ಪರಿಹಾರ ಘೋಷಿಸಿದ ನಟ ಯಶ್

ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಸಿನಿಮಾ ಗಣ್ಯರು ಒಬ್ಬೊಬ್ಬರಾಗಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದೀಗ ಕನ್ನಡದ ನಟ ಯಶ್ ಕನ್ನಡ ಚಿತ್ರರಂಗದ ಕಾರ್ಮಿಕರ ಕುಟುಂಬದ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ತೆರೆ ಹಿಂದೆ ಅವಿರತವಾಗಿ ದುಡಿದ 3000ಕ್ಕೂ ಅಧಿಕ ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ. ನಗದು ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದಾಗಿ ಯಶ್ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಶ್, ಕಾಣದ ವೈರಸ್​​​ನಿಂದ ಕಳೆದೊಂದು … Read more

ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ ಅನಾಥರಿಗೆ ‘ಬಾಲ ಸೇವಾ ಯೋಜನೆ’ : ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು ಇದ್ದಾರೆ. ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆ ಘೋಷಣೆ ಮಾಡಿದೆ. ಇಂದು ಸಂಜೆ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ಬಾಲ ಸೇವಾ ಯೋಜನೆ’ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಸಲಹೆ ಮೇರೆಗೆ, ಅನಾಥ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು … Read more