ಪೊಲೀಯೋ ಲಸಿಕೆ ಎಂದು ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ಆರೋಗ್ಯ ಸಿಬ್ಬಂದಿಗಳು|12 ಮಕ್ಕಳು ಅಸ್ವಸ್ಥ

polio

ಮಹಾರಾಷ್ಟ್ರ(02-02-2021): ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.  ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಕಾರ್ಯಕರ್ತ, ವೈದ್ಯ, ಮತ್ತು ಆಶಾ ಕಾರ್ಯಕರ್ತ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.    

ಸ್ಯಾನಿಟೈಸರ್ ಮಿಕ್ಸ್ ಮಾಡಿದ ಮದ್ಯ ಕುಡಿದು ಐವರು ಸಾವು

sanitizer

ತಿರುವನಂತಪುರ(20-10-2020): ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದು ಐವರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶಿವನ್(45), ಮೂರ್ತಿ (24), ರಾಮನ್ (61), ಅರುಣ (22), ಅಯ್ಯಪ್ಪನ್ (55) ಮೃತ ದುರ್ದೈವಿಗಳು. ಈ ಐವರು ಪಯಾತುಕಾಡು ಪ್ರದೇಶದ ಬುಡಕಟ್ಟು ನಿವಾಸಿಗಳಾಗಿದ್ದಾರೆ. ಇವರು ಸಂಜೆ ಒಟ್ಟಿಗೆ ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಇನ್ನು ಸ್ಯಾನಿಟೈಸರ್ ಮಿಕ್ಸ್ ಮಾಡಿದ ಮಧ್ಯ ಸೇವಿಸಿ ಮಹಿಳೆಯರು ಸೇರಿದಂತೆ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಪಾಲಕ್ಕಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. … Read more