ದಸರಾ ಮುಗಿದ ತಕ್ಷಣ ಒಂದನೇ ತರಗತಿಯಿಂದ ಶಾಲೆ ಆರಂಭಿಸಲಾಗುವುದು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಉಡುಪಿ : ದಸರಾ ಹಬ್ಬ ಮುಗಿದ ತಕ್ಷಣವೇ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಆರಂಭಿಸಲಾಗುವುದು ಮತ್ತು ಮಧ್ಯಾಹ್ನದ ಬಿಸಿಯೂಟವೂ ಪ್ರಾರಂಭಿಸಲಾಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಹಲವು ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೂನ್ಯವಿದೆ. ಈಗಾಗಲೇ ಆರಂಭಿಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ತರಗತಿಗಳು ನಿರೀಕ್ಷೆಯಂತೆ ನಡೆಯುತ್ತಿವೆ. ಪ್ರಾಥಮಿಕ ಶಾಲೆಯೂ ಆರಂಭಿಸಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಶಾಲೆಗಳ ಆರಂಭಕ್ಕೆ ಆಸಕ್ತಿ ತೋರಿದ್ದಾರೆ. … Read more

ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಪೋಷಕರಿಗೆ ಫೀಸು ಕುರಿತು ಕಿರುಕುಳ ನೀಡುವ ಪ್ರಕರಣಗಳು ಕೇಳಿಬರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂಬುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯಾವುದೇ ಶಾಲೆಗಳು ವಿದ್ಯಾರ್ಥಿಗಳು … Read more

ರಾಜ್ಯದಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಮಕ್ಕಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದ ಶಿಕ್ಷಣ ಇಲಾಖೆ ಇಂದು ಪರೀಕ್ಷೆ ಇಲ್ಲದೆ ಮೌಲ್ಯಾಂಕನ ಆಧರಿಸಿ ಪಾಸ್ ಮಾಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ಬಿಕ್ಕಟ್ಟಿನ ಇಂಥ ಕಠಿಣ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ … Read more

ಕೋವಿಡ್ ಹೆಚ್ಚಳ : ಇಂದಿನಿಂದ ಆಂಧ್ರಪ್ರದೇಶದ 1ರಿಂದ 9ನೇ ತರಗತಿ ಶಾಲೆಗಳು ಬಂದ್

ಅಮರಾವತಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ದೆಹಲಿ, ಹರಿಯಾಣ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳು ಬಂದ್ ಆಗಿವೆ. ಈಗ ಆಂಧ್ರಪ್ರದೇಶ ರಾಜ್ಯಕ್ಕೂ ತಟ್ಟಿದ ಕೋವಿಡ್ ಎಫೆಕ್ಟ್, ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ರಾಜ್ಯಾದ್ಯಂತ ಇಂದಿನಿಂದ 1 ರಿಂದ 9 ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು, … Read more

ಕೊರೊನಾ ಆರ್ಭಟ: ಹರಿಯಾಣ ರಾಜ್ಯದ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ

ಚಂಡೀಗಢ: ದೇಶದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿದೆ, ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿವೆ. ಕೊರೊನಾ ದಿಂದ ತತ್ತರಿಸಿದ ಹರಿಯಾಣ ಸರ್ಕಾರವು 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ. ಕೋವಿಡ್ ಪ್ರಕರಣಗಳು ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಾಗಿ, ಸಿಬಿಎಸ್‌ಸಿಯ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ, … Read more

ಶಾಕಿಂಗ್ ನ್ಯೂಸ್: ಶಾಲೆಯಿಂದ 317ಕ್ಕೂ ಅಧಿಕ ವಿದ್ಯಾರ್ಥಿನಿಯರ ಅಪಹರಣ

niegiria

ಉತ್ತರನೈಜೀರಿಯಾ(27-02-2021): ವಸತಿ ಶಾಲೆಯೊಂದರಿಂದ 317ಕ್ಕೂ ಅಧಿಕ ಬಾಲಕಿಯರನ್ನು ಬಂದೂಕುಧಾರಿಗಳು ಅಪಹರಿಸಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ನಡೆದಿದೆ. ನೈಜೀರಿಯಾದ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯಿಂದ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದೆ. ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ, ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ … Read more

ಫೆ. 22ರಿಂದ 6ರಿಂದ 8ರವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ

suresh kumar

ಬೆಂಗಳೂರು(16-02-2021):6ರಿಂದ 8ನೇ ತರಗತಿವರೆಗೆ ಫೆ. 22ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, 9,10 ಮತ್ತು ಪಿಯು ತರಗತಿಯ ಹಾಜರಾತಿ ಉತ್ತಮವಾಗಿದೆ. ನಾವು ವಿದ್ಯಾರ್ಥಿಗಳು ಕಡ್ಡಾಯವಾಗಿ ಬರಬೇಕು ಎಂದು ಹೇಳಿರಲಿಲ್ಲ. ಆದರೆ ಈ ಪ್ರಯತ್ನಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ  ಉತ್ತಮ ಪ್ರತಿಕ್ರಿಯೆ ದೊರೆತಿದೆ. ಶಾಲೆಗಳನ್ನ ಆರಂಭಿಸಲು ತಾಂತ್ರಿಕ ಸಲಹಾ ಸಮಿತಿ ಕೂಡ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. … Read more

ಶಾಲಾ ಆವರಣದ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದುರ್ಮರಣ

death

ಹಾವೇರಿ(24/10/2020): ಶಾಲಾ ಆವರಣದಲ್ಲಿದ್ದ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿನ ಶಾಲಾ ಆವರಣದಲ್ಲಿ ಕಾಮಗಾರಿ ಸಲುವಾಗಿ ಹೊಂಡವೊಂದನ್ನು ತೋಡಗಾಲಿತ್ತು. ಇಂತಹ ಶಾಲಾ ಆವರಣದಲ್ಲಿ 7-8 ಮಕ್ಕಳು ಆಟವಾಡುತ್ತಿದ್ದವು. ಈ ವೇಳೆ ಹೊಂಡಕ್ಕೆ ಬಿದ್ದ ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈಗಾಗಲೇ ಮೂವರು ಮಕ್ಕಳ ಶವಗಳನ್ನು ಹೊಂಡದಿಂದ ಹೊರ ತೆಗೆಯಲಾಗಿದ್ದು, ಇನ್ನೂ 3-4 ಮಕ್ಕಳು ಹೊಂಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕೋರೋನಾ ಕಾರಣದಿಂದ ಶಾಲೆಗಳು ಮುಚ್ಚಿರುವುದರಿಂದ ದೇಶದ ಬೊಕ್ಕಸಕ್ಕೆ ಎಷ್ಟು ನಷ್ಟವಾಗಲಿದೆ ಗೊತ್ತೇ?

indian school

ಹೊಸದೆಹಲಿ:(12/10/2020): ಕೋವಿಡ್-19 ಕಾರಣದಿಂದ ಮುಚ್ಚಿರುವ ಶಾಲೆಗಳಿಂದ ದೇಶದ ಬೊಕ್ಕಸಕ್ಕೆ 29.33 ಲಕ್ಷ ಕೋಟಿ ನಷ್ಟ ಸಂಭವಿಸುವ ಸಾಧ್ಯತೆ ಎಂದು ವಿಶ್ವಬ್ಯಾಂಕ್‌ನ ವರದಿ ತಿಳಿಸಿದೆ. ಕೋವಿಡ್ 19 ಕಾರಣದಿಂದ 55 ಲಕ್ಷ ಮಕ್ಕಳು ಶಾಲೆ ಬಿಡುವ ಆತಂಕವಿದ್ದು,  ಇದು ವಿದ್ಯಾರ್ಥಿಗಳ ಕೆಟ್ಟ ಪರಿಣಾಮ ಬೀರಲಿದೆ ಎಂದು ವಿಶ್ವಬ್ಯಾಂಕ್‌ ತಿಳಿಸಿದೆ. ‘ಕೋವಿಡ್‌ ಕಾರಣದಿಂದಾಗಿ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಶಾಲೆಗಳು ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ 39.1 ಕೋಟಿ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.

ಸೌದಿ ಅರೇಬಿಯಾ: ಶಾಲಾ ಕಾಲೇಜುಗಳು ಆನ್ಲೈನ್ ಮೂಲಕವೇ ಮುಂದುವರಿಸಲು ಸೂಚನೆ

school

ಸೌದಿ(10-10-2020): ಕೊರೋನಾ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಶಾಲಾ ಕಾಲೇಜುಗಳನ್ನು ಆನ್ಲೈನ್ ಮೂಲಕವೇ ಮುಂದುವರಿಸಲು ಸೌದಿ ಶಿಕ್ಷಣ ಇಲಾಖೆಯಿಂದ ಸೂಚನೆ ದೊರೆತಿದೆ. ಈ ಶೈಕ್ಷಣಿಕ ವರ್ಷದ ಮೊದಲ ಸೆಮಿಸ್ಟರ್ ವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸಲು ಸರಕಾರ ಹೇಳಿದೆ. ದೇಶದಲ್ಲಿರುವ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಂತ್ರಿಕ ವಿದ್ಯಾ ಸಂಸ್ಥೆಗಳು ಸೇರಿ ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳು ಈ ರೀತಿಯಲ್ಲೇ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಇಂತಹ ತೀರ್ಮಾನ ಅಗತ್ಯವಾಗಿದೆಯೆಂದು ಸೌದಿ ಶಿಕ್ಷಣ ಮಂತ್ರಿ ಡಾ| ಹಮದ್ … Read more