ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ರೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಚ್ಚರಿ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು ಅವರು ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಶಾಸಕರಾದವರೇ ಸಿಎಂ ಆಗಬೇಕು ಅಥವಾ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕು ಎಂದಿಲ್ಲ. ಯಾರು ಬೇಕಾದರೂ ಸಿಎಂ ಆಗಬಹುದು. ಚುನಾವಣೆಯಲ್ಲಿ ಗೆಲ್ಲದವರೂ … Read more

ದೇಶದಲ್ಲಿ ‘ಡೆಲ್ಟಾ ಪ್ಲಸ್’ ವೈರಸ್ ಹರಡದಂತೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು: ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ದೇಶದ ಶೇ.80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ … Read more

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಮುಖ್ಯ ಗುರಿ: ಸಿದ್ಧರಾಮಯ್ಯ

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಚರ್ಚೆ ಅನವಶ್ಯಕ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಮುಖ್ಯ ಗುರಿ. ನಮ್ಮ ಎಲ್ಲ ನಾಯಕರು … Read more

ಭಾಷಾ ವಿಷಯಗಳನ್ನು ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡ ಭಾಷೆಗೆ ಮಾಡಿದ ದ್ರೋಹ: ಸಿದ್ಧರಾಮಯ್ಯ

ಬೆಂಗಳೂರು : ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡ ಭಾಷೆಗೆ ಮಾಡಿದ ದ್ರೋಹ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ. ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ … Read more

ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕತೆಯ ಸ್ಥಿತಿ ನೆಲೆಯಾಗಿದೆ … Read more

‘ಮೋದಿ ಮೋದಿ’ ಎಂದರೆ ಬಡವರ ಬದುಕು ಬೂದಿಯಾಗುವುದು ಖಚಿತ : ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. … Read more

ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯ ಇದೆ. ಯಡಿಯೂರಪ್ಪ ಅವರನ್ನು ಇಟ್ಟುಕೊಳ್ತಿರಾ? ಕಿತ್ತುಹಾಕ್ತೀರಾ? ಬಿಜೆಪಿಗೆ ಸಂಬಂಧಿಸಿದ ವಿಚಾರ. ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿಹೋಗಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ‘ಮುನಿದಿರುವ ಪ್ರಕೃತಿ, ಅಲ್ಪ ದಯೆತೋರುತ್ತಿರುವ ಕಾರಣದಿಂದಾಗಿಯೋ ಏನೋ, ಕೊರೊನಾ ಸೋಂಕು ಸ್ವಲ್ಪ ತಹಬಂದಿಗೆ ಬರುತ್ತಿದೆ. ಅಷ್ಟರಲ್ಲಿ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭಿನ್ನಮತದ ಜಗಳ ತಾರಕಕ್ಕೇರಿ ಆಡಳಿತ ಯಂತ್ರ ಸಂಪೂರ್ಣ … Read more

ಶಾಲಾ ಶುಲ್ಕ ವಿಚಾರದ ಕುರಿತು ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ … Read more

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಬೇಕು: ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು : ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ.‌ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಮುಖ್ಯಮಂತ್ರಿಗಳು … Read more

ಪೆಟ್ರೋಲ್ 100 – ನಾಟ್ ಔಟ್’ : ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿ … Read more