ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಿಗ್ಗಾಮುಗ್ಗ ಜಾಡಿಸಿದ ಸಿದ್ಧರಾಮಯ್ಯ

  ಬೆಂಗಳೂರು(27/10/2020): ಆರ್‌.ಆರ್‌. ನಗರ ಕ್ಷೇತ್ರದ ಯಶವಂತಪುರ ಬಿ.ಕೆ. ನಗರದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಈ ವೇಳೆ ಸಿದ್ಧರಾಮಯ್ಯನವರು ಬಿಜೆಪಿ ಕಾರ್ಯಕರ್ತರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ‘ಸೋಲುವ ಭಯದಿಂದ ಬಂದು ಗಲಾಟೆ ಮಾಡುತ್ತಿದ್ದೀರಿ. ರೌಡಿಗಳು ಇವರು. ಸೋಲುವ ಭಯದಿಂದ ರೌಡಿಸಂ ಮಾಡುತ್ತಿದ್ದಾರೆ. ಮುನಿರತ್ನ ನಾಯ್ಡು ನಿಮ್ಮನ್ನು ಕಳುಹಿಸಿದ್ದಾರೆ ಎಂದು ಗೊತ್ತಿದೆ. ನಾವು ಹೆದರುವುದಿಲ್ಲ. ಮತದಾರರು ನೋಡುತ್ತಿದ್ದಾರೆ ಎಂದು ಸಿದ್ಧರಾಮಯ್ಯನವರು ಹೇಳುವ ವಿಡಿಯೋ ಕ್ಲಿಪ್ ಒಂದು ವೈರಲ್ ಆಗಿದೆ.

ಯೋಗಿ ಆದಿತ್ಯನಾಥ್ ಯೋಗಿನೋ, ರೋಗಿನೋ-ಸಿದ್ದರಾಮಯ್ಯ ಪ್ರಶ್ನೆ

siddaramayya

ಬೆಳಗಾವಿ (02-10-2020): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಯೋಗಿನೋ, ರೋಗಿನೋ ಗೊತ್ತಿಲ್ಲ ಎಂದು ಕರ್ನಾಟಕ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಸೂಚನೆಯಂತೆ ಪೊಲೀಸರು ರಾಹುಲ್ ಗಾಂಧಿಯನ್ನು ತಡೆದ್ದಾರೆ. ಯೋಗಿ ಆದಿತ್ಯನಾಥ್ ಸಿಎಂ ಆಗಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಲಿ. ಯೋಗಿನೋ ಆತ ರೋಗಿನೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಯೋಗಿ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿದೆ. ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ … Read more