ನೂತನ ಸಚಿವರಿಗೆ ಖಾತೆ ಹಂಚಿಕೆ:ಯಾರ್ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

bsy

ಬೆಂಗಳೂರು(21-01-2021): ಸಂಪುಟ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಚಿವರಿಗೆ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆ ಪಟ್ಟಿಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಇಲ್ಲಿದೆ ಉಮೇಶ ಕತ್ತಿ ಆಹಾರ ಮತ್ತು ನಾಗರಿಕ ಪೂರೈಕೆ ಅಂಗಾರ ಮೀನುಗಾರಿಕೆ ಮತ್ತು ಬಂದರು ಬೊಮ್ಮಾಯಿ ಗೃಹ ಜೊತೆಗೆ ಕಾನೂನು ಸಂಸದೀಯ ಜೆ.ಸಿ. ಮಾಧುಸ್ವಾಮಿ ವೈದ್ಯಕೀಯ ಶಿಕ್ಷಣ ಮತ್ತು ಕನ್ನಡ ಸಂಸ್ಕೃತಿ ಸಿ ಸಿ ಪಾಟೀಲ್ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಇಲಾಖೆ ಅರವಿಂದ … Read more

ರಾಜ್ಯದಲ್ಲಿ ಇಂದು 2960 ಹೊಸ ಕೋವಿಡ್-19 ಪ್ರಕರಣಗಳು ದೃಢ

ಬೆಂಗಳೂರು(06/11/2020): ರಾಜ್ಯದಲ್ಲಿ ಇಂದು 2960 ಹೊಸ ಕೋವಿಡ್-19 ಪ್ರಕರಣಗಳು ಕಾಣಿಸಿಕೊಂಡಿದ್ದು , ಒಟ್ಟು ಸೋಂಕಿತರ ಸಂಖ್ಯೆ 841889 ಆಗಿದೆ.   ಇಂದು 2701 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ  ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 797204 ಆಗಿದೆ. ಸೋಂಕಿನಿಂದ ಇಂದು 35 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್-19 ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11347 ಆಗಿದೆ. ಸದ್ಯ 33319  ಸಕ್ರಿಯ ಪ್ರಕರಣಗಳಿವೆ.  ಸೋಂಕಿತರ  ಶೇಕಡವಾರು ಪ್ರಮಾಣ ಶೇ. 2.68, ಮರಣ ಪ್ರಮಾಣ ಶೇ. 1.18ರಷ್ಟಿದೆ.

ಒಂದು ವರ್ಷ ವಿದ್ಯುತ್ ದರ ಏರಿಕೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಆಗ್ರಹ

  ಬೆಂಗಳೂರು(05/11/2020): ರಾಜ್ಯ ಸರಕಾರವು ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ಮಾಡಿರುವ ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಅಗ್ರಹಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ … Read more

ಇಂದು ರಾಜ್ಯದಲ್ಲಿ 2, 576ಗೆ ಕೊರೋನಾ ಪಾಸಿಟಿವ್ ದೃಢ; 8,334 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

  ಬೆಂಗಳೂರು(02/11/2020): ಇಂದು ರಾಜ್ಯದಲ್ಲಿ 2,576 ಮಂದಿಗೆ ಸೋಂಕು ಬಂದಿದ್ದು, 8,334 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು 29 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8,29,640ಕ್ಕೆ ಏರಿಕೆಯಾಗಿದೆ. ಈ ಪೈಕಿ 7,73,595 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 44,805 ಸಕ್ರಿಯ ಪ್ರಕರಣಗಳಿವೆ.  

ಇಂದು ರಾಜ್ಯದಲ್ಲಿ  3,652 ಮಂದಿಗೆ ಕೊರೋನಾ ಪಾಸಿಟಿವ್ ದೃಢ; 8,053 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

covid 19

ಬೆಂಗಳೂರು(01/11/2020):  ಇಂದು ರಾಜ್ಯದಲ್ಲಿ  3,652 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,27,064ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕೊರೋನಾ ವೈರಸ್ ನಿಂದಾಗಿ  ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 24 ಮಂದಿ  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,192ಕ್ಕೆ ಏರಿಕೆಯಾಗಿದೆ, ಇಂದು 8,053 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,65,261ಕ್ಕೆ ಏರಿಕೆಯಾಗಿದೆ. 50,592 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇಂದು 3,014 ಮಂದಿಗೆ ಪಾಸಿಟಿವ್

ಬೆಂಗಳೂರು(31/10/2020): ರಾಜ್ಯದಲ್ಲಿ ಇಂದು 3,014 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 28 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸತತ 17ನೇ ದಿನವೂ ಸೋಂಕು ಪ್ರಕರಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಇಂದು 4,025 ಮಂದಿಗೆ ಪಾಸಿಟಿವ್ ದೃಢ

corona

ಬೆಂಗಳೂರು(29/10/2020): ರಾಜ್ಯದಲ್ಲಿ ಇಂದು 4,025 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 45 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,091ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 7,661 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,41,219ಕ್ಕೆ ಏರಿಕೆಯಾಗಿದೆ. 64,480 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಮದುವೆಯಾಗಿಲ್ಲ ಕಾಂಗ್ರೆಸ್ ಮಗುವಿಗೆ ನಾಮಕರಣ ಮಾಡುವ ಅವಸರದಲ್ಲಿದೆ; ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಚಿಕ್ಕಮಗಳೂರು(29/10/2020): ಇನ್ನೂ ಹುಡುಗಿ ಹುಡುಕಿಲ್ಲ, ನಿಶ್ಚಿತಾರ್ಥವೂ ಆಗಿಲ್ಲ. ಆದರೆ, ಕಾಂಗ್ರೆಸ್ ಮಗು ನಾಮಕರಣದ ಬಗ್ಗೆ ಚರ್ಚೆ ಮಾಡುತ್ತಿದೆ ಎಂದು  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದರು. ಇಂದು ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಯಡಿಯೂರಪ್ಪ  ನೇತೃತ್ವದ ರಾಜ್ಯ ಸರ್ಕಾರದ ಅವಧಿ ಮುಗಿಯಲು ಇನ್ನು ಮೂರೂವರೆ ವರ್ಷ ಇದೆ. ಆದಾರೆ, ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ಗಲಾಟೆ ಆರಂಭವಾಗಿದೆ. ಈಗಲೇ ಹೀಗೆ ಆಡಿದರೆ ಇನ್ನು ಅಧಿಕಾರ ಕಾಲ ಸನ್ನಿಹಿತವಾದರೆ ಹೇಗೆ ಆಡಬಹುದು’ ಎಂದು ಕಿಚಾಯಿಸಿದರು. … Read more

2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ct ravi

ಬೆಂಗಳೂರು(28/10/2020): 2020ನೇ ಸಾಲಿನ ಕನ್ನಡ ರಾಜ್ಯೋತ್ಸವ  ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಇಂದು ಬಿಡುಗಡೆ ಮಾಡಿದರು. ಈ ಬಾರಿ 65ನೇ ರಾಜ್ಯೋತ್ಸವ ಹಿನ್ನಲೆಯಲ್ಲಿ 65 ಜನರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.  ಪ್ರಶಸ್ತಿಯು 1 ಲಕ್ಷ ರೂ. ಹಾಗೂ 25 ಗ್ರಾಂ ಚಿನ್ನ ಹೊಂದಿದೆ. ನವೆಂಬರ್ 7 ರಂದು ಬೆಳಿಗ್ಗೆ 11ಕ್ಕೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಸರಳ ಕಾರ್ಯಕ್ರಮ ನಡೆಸಿ ಅಂದು ಪ್ರಶಸ್ತಿ ಪ್ರದಾನ ಮಾಡಲು … Read more

ಇಂದು ರಾಜ್ಯದಲ್ಲಿ ಆರು ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ದೃಢ

corona

ಬೆಂಗಳೂರು 20/10/2020: ರಾಜ್ಯದಲ್ಲಿ ಇಂದು 6,297 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 66 ಮಂದಿ ಕೋರೋನಾ ಸೋಂಕಿಗೆ ಬಲಿಯಾಗಿದ್ದಾರೆ.  ರಾಜ್ಯದಲ್ಲಿ  ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,608ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ದಿನ 8500 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,62,329ಕ್ಕೆ ಏರಿಕೆಯಾಗಿದೆ. 1,03,945 ಮಂದಿ ನಿಗದಿತ ಕೊವಿಡ್ … Read more